ಚಿಕ್ಕಮಗಳೂರು: ನಾಳೆ (ನ. 13) ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನವಿದ್ದು, (Dattamala Abhiyan) ಸಾವಿರಾರು ಭಕ್ತರು ದತ್ತಪೀಠದಲ್ಲಿ ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಸೇರಿ ಸುತ್ತಮುತ್ತಲಿನ ಪ್ರದೇಶಗಳಿಗೆ ನಾಳೆ ಬೆಳಗ್ಗೆ 6 ರಿಂದ ಸೋಮವಾರ ಬೆಳಗ್ಗೆ 10 ಗಂಟೆವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ನಗರದಲ್ಲಿ ಶ್ರೀರಾಮ ಸೇನೆಯಿಂದ ಬೃಹತ್ ಶೋಭಾಯಾತ್ರೆ ನಡೆಯಲಿದ್ದು ಬಳಿಕ ದತ್ತಪೀಠಕ್ಕೆ ಭಕ್ತರು ತೆರಳಲಿದ್ದಾರೆ. ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸೇರಿ ಹಲವರು ಭಾಗಿಯಾಗಲಿದ್ದಾರೆ. ದತ್ತ ಅಭಿಯಾನ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಎಸ್ಪಿ, ಎಎಸ್ಪಿ ಸೇರಿ ಮೂವರು ಡಿವೈಎಸ್ಪಿ, 18 ಮಂದಿ ಸಿಪಿಐ, 67 ಮಂದಿ ಪಿಎಸ್ಐ, 147 ಮಂದಿ ಎಎಸ್ಐ ಸೇರಿದಂತೆ ಸಾವಿರಕ್ಕೂ ಅಧಿಕ ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ವಾಹನ ಸಂಚಾರಕ್ಕೆ ನಿರ್ಬಂಧ
ನಗರದಲ್ಲಿ ಶೋಭಾಯಾತ್ರೆ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರಕ್ಕಾಗಿ ವಾಹನ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ. ನವೆಂಬರ್ 13ರಂದು ಬೆಳಗ್ಗೆ 9 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಬಸವನಹಳ್ಳಿ ಮುಖ್ಯರಸ್ತೆ ಮತ್ತು ಎಂ.ಜಿಯಲ್ಲಿ ವಾಹನಗಳ ಸಂಚಾರ ಮತ್ತು ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:57 pm, Sat, 12 November 22