AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕವಾಗದಿದ್ದರೆ ಜನಾಕ್ರೋಶ ಎದುರಿಸಲು ಸಿದ್ಧರಾಗಿ: ಬಿಜೆಪಿಗೆ ಶ್ರೀರಾಮಸೇನೆ ಸವಾಲು

ನ 13ರ ಒಳಗೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕವಾಗಬೇಕು. ಇಲ್ಲದಿದ್ದರೆ ಪ್ರವೀಣ್ ನೆಟ್ಟಾರ್ ಹತ್ಯೆಯಾದಾಗ ಸಮಾಜದಲ್ಲಿ ವ್ಯಕ್ತವಾಗಿದ್ದ ಮಾದರಿಯ ಆಕ್ರೋಶವು ನ 13ರಂದು ಮತ್ತೊಮ್ಮೆ ಭುಗಿಲೇಳುತ್ತದೆ ಎಂದರು.

ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕವಾಗದಿದ್ದರೆ ಜನಾಕ್ರೋಶ ಎದುರಿಸಲು ಸಿದ್ಧರಾಗಿ: ಬಿಜೆಪಿಗೆ ಶ್ರೀರಾಮಸೇನೆ ಸವಾಲು
ಚಿಕ್ಕಮಗಳೂರಿನ ಬಾಬಾಬುಡನ್​ಗಿರಿಯಲ್ಲಿರುವ ಇನಾಂ ದತ್ತಾತ್ರೇಯ ಪೀಠ
TV9 Web
| Edited By: |

Updated on:Oct 12, 2022 | 3:17 PM

Share

ಚಿಕ್ಕಮಗಳೂರು: ತಾಲ್ಲೂಕಿನ ಬಾಬಾಬುಡನ್​ಗಿರಿಯಲ್ಲಿರುವ ಇನಾಂ ದತ್ತಾತ್ರೇಯ ಪೀಠದಲ್ಲಿ (Bababudangiri Inam Datta Peetha) ನವೆಂಬರ್ 13ರ ಒಳಗೆ ಹಿಂದೂ ಅರ್ಚಕರ ನೇಮಕವಾಗಬೇಕು. ಇಲ್ಲದಿದ್ದರೆ ಹಿಂದೂಗಳ ಆಕ್ರೋಶ ಎದುರಿಸಲು ಸರ್ಕಾರವು ಸಿದ್ಧವಾಗಬೇಕು ಎಂದು ಶ್ರೀರಾಮಸೇನೆಯ ರಾಜ್ಯ ಸಂಚಾಲಕ ಗಂಗಾಧರ ಕುಲಕರ್ಣಿ ಎಚ್ಚರಿಸಿದರು. ದತ್ತಪೀಠದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದೀರಿ. ಈಗ್ಯಾಕೆ ಸುಮ್ಮನಿದ್ದೀರಿ. ಹಿಂದೂ ಅರ್ಚಕರನ್ನು ನೇಮಿಸದಿದ್ದರೆ ಹಿಂದೂಗಳು ನಿಮ್ಮನ್ನು ತಿರಸ್ಕರಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಮುಸ್ಲಿಮರು ಏನು ಮಾಡಿದರೂ ಸುಮ್ಮನಿರುವ ಸರ್ಕಾರವು ನಮಗೆ ನಮಗೆ ಮಾತ್ರ ಎಲ್ಲದಕ್ಕೂ ಕಿರಿಕಿರಿ ಮಾಡುತ್ತದೆ. ನ 13ರ ಒಳಗೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕವಾಗಬೇಕು. ಇಲ್ಲದಿದ್ದರೆ ಪ್ರವೀಣ್ ನೆಟ್ಟಾರ್ ಹತ್ಯೆಯಾದಾಗ ಸಮಾಜದಲ್ಲಿ ವ್ಯಕ್ತವಾಗಿದ್ದ ಮಾದರಿಯ ಆಕ್ರೋಶವು ನ 13ರಂದು ಮತ್ತೊಮ್ಮೆ ಭುಗಿಲೇಳುತ್ತದೆ ಎಂದರು.

ಮಾಲೆ ಹಾಕಿ ದತ್ತಪೀಠಕ್ಕೆ ಬಾರದಿದ್ದರೆ ಯಡಿಯೂರಪ್ಪ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದೆ. ಅದೇ ರೀತಿ ಯಡಿಯೂರಪ್ಪ ಅಧಿಕಾರ ಕಳೆದುಕೊಂಡಿದ್ದಾರೆ. ದತ್ತಪೀಠದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಈಗ ಸುಮ್ಮನಿದ್ದಾರೆ. ಹಿಂದೂ ಅರ್ಚಕರನ್ನು ನೇಮಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ಹಿಂದೂಗಳು ನಿಮ್ಮನ್ನು ತಿರಸ್ಕರಿಸುತ್ತಾರೆ ಎಂದು ಎಚ್ಚರಿಸಿದರು.

ದತ್ತಪೀಠದಲ್ಲಿರು ಗಂಧದ ಬಾವಿ ಪೂರ್ತಿ ಕುಸಿಯುವ ಸ್ಥಿತಿ ತಲುಪಿದೆ. ಅಲ್ಲಿರುವ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಸರ್ಕಾರದ ಕೈಲಿ ಅಲ್ಲಿನ ಮಣ್ಣು ರಕ್ಷಣೆ ಮಾಡಲು ಆಗುತ್ತಿಲ್ಲ. ಮುಜರಾಯಿ ಇಲಾಖೆಯು ಗಾಂಧಿಜೀಯ ಮೂರು ಮಂಗಗಳಂತೆ ವರ್ತಿಸುತ್ತಿದೆ. ಮುಸ್ಲಿಮರು ಏನೇ ಮಾಡಿದರೂ ಸುಮ್ಮನಿರುತ್ತದೆ. ನೀವು ಸರ್ಕಾರದ ಅಧೀನಲ್ಲಿದ್ದೀರಾ, ಮುಸ್ಲಿಮರ ಅಧೀನದಲ್ಲಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಯಥಾಸ್ಥಿತಿ ಕಾಪಾಡಲು ಹೈಕೋರ್ಟ್​ ಸೂಚನೆ

ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಶ್ರೀಗುರು ದತ್ತಾತ್ರೇಯ ಬಾಬಾ ಬುಡನ್‌ ಸ್ವಾಮಿ ದರ್ಗಾದ ಪೂಜಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್​ (Karnataka High Court) ಆದೇಶ ಹೊರಡಿಸಿದೆ. ವಿಚಾರಣೆಯನ್ನು 3 ವಾರಗಳ ಕಾಲ ಮುಂದೂಡಿದೆ. ‘ಈ ಸಂಬಂಧ ಸರ್ಕಾರವು ಜುಲೈ 19ರಂದು ಸಂಪುಟದ ಉಪಸಮಿತಿ ಶಿಫಾರಸಿನಂತೆ ಕ್ರಮ ಕೈಗೊಂಡಿತ್ತು. ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಪೂಜಾವಿಧಿ ನಡೆಸಲು ಮುಜಾವರ್ ಹಾಗೂ ಅರ್ಚಕರಿಗೆ ಅವಕಾಶ ನೀಡಲಾಗಿದೆ’ ಎಂದು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿತ್ತು.

Published On - 3:15 pm, Wed, 12 October 22

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ