Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkamagaluru News: ಫೇಸ್​ಬುಕ್​ನಲ್ಲಿ ಸ್ಪೀಕರ್​ ಯುಟಿ ಖಾದರ್ ವಿರುದ್ಧ ಶ್ರೀರಾಮಸೇನೆ ಮುಖಂಡ ಅವಹೇಳನಕಾರಿ ಪೋಸ್ಟ್; ದೂರು ದಾಖಲು

ನೂತನ ಸ್ಪೀಕರ್ ಯುಟಿ ಖಾದರ್ ವಿರುದ್ದ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿದ್ದು, ತಪ್ಪಿತಸ್ಥನ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್​ ಕಾರ್ಯಕರ್ತರು ಪೊಲೀಸ್​ಗೆ ದೂರು ನೀಡಿದ್ದಾರೆ.

Chikkamagaluru News: ಫೇಸ್​ಬುಕ್​ನಲ್ಲಿ ಸ್ಪೀಕರ್​ ಯುಟಿ ಖಾದರ್ ವಿರುದ್ಧ ಶ್ರೀರಾಮಸೇನೆ ಮುಖಂಡ ಅವಹೇಳನಕಾರಿ ಪೋಸ್ಟ್; ದೂರು ದಾಖಲು
ಯುಟಿ ಖಾದರ್​ ವಿರುದ್ದ ಅವಹೇಳನಕಾರಿ ಪೋಸ್ಟ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 27, 2023 | 9:17 AM

ಚಿಕ್ಕಮಗಳೂರು: ವಿಧಾನಸಭೆಯಲ್ಲಿ ಭರ್ಜರಿ ಜಯಗಳಿಸಿದ ಕಾಂಗ್ರೆಸ್​, ಆಡಳಿತ ಚುಕ್ಕಾಣಿ ಹಿಡಿದಿದೆ. ಅದರಂತೆ ನೂತನ ಸಭಾಧ್ಯಕ್ಷರಾದ ಉಳ್ಳಾಲ ಕ್ಷೇತ್ರದ ಯು.ಟಿ ಖಾದರ್(U T Khader), ಸಭಾಧ್ಯಕ್ಷರಾಗಿದ್ದಾರೆ. ಇದೀಗ ಸ್ಪೀಕರ್ ಖಾದರ್ ವಿರುದ್ದ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಹೌದು ಶ್ರೀರಾಮಸೇನೆ ಮುಖಂಡ ಪ್ರೀತೇಶ್ ಎಂಬಾತ ಖಾದರ್ ವಿರುದ್ಧ ಪೋಸ್ಟ್ ಮಾಡಿದ್ದಾನೆ. ಈ ಹಿನ್ನಲೆ ಇದೀಗ ಕಾಂಗ್ರೆಸ್​​ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಸೆನ್ ಠಾಣೆಯಲ್ಲಿ ಪ್ರೀತೇಶ್ ವಿರುದ್ದ ದೂರು ಸಲ್ಲಿಸಿದ್ದಾರೆ. ಈ ಕೂಡಲೇ ಇತನ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಪೋಸ್ಟ್​ನಲ್ಲಿ ಏನಿದೆ?

ನೂತನ ಸಭಾಧ್ಯಕ್ಷ ಸ್ಥಾನವನ್ನ ಯು.ಟಿ ಖಾದರ್ ಅಲಂಕರಿಸಿದ್ದಾರೆ. ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತರಿಗೆ ಈ ಅವಕಾಶ ನೀಡಲಾಗಿದೆ. ಈ ಮದ್ಯೆ ಇದೀಗ ಶ್ರೀರಾಮಸೇನೆ ಮುಖಂಡ ಪ್ರೀತೇಶ್ ಎಂಬಾತ ‘ಸದನದಲ್ಲಿ ಸಭಾಧ್ಯಕ್ಷರೇ ಅನ್ನಬೇಕಾ ಅಥವಾ ಸಾಬಾಧ್ಯಕ್ಷರೇ ಅನ್ನಬೇಕಾ? ಎಂಬತಹ ಅವಹೇಳನಕಾರಿ ಪೋಸ್ಟ್​ ಮಾಡಿದ್ದಾನೆ. ಇತನ ಕುರಿತು ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್​ ಕಾರ್ಯಕರ್ತರು ಶ್ರೀರಾಮಸೇನೆ ಮುಖಂಡ ಪ್ರೀತೇಶ್ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.

ಇದನ್ನೂ ಓದಿ:ಡಿಕೆ ಶಿವಕುಮಾರ್, ಡಿಕೆ ಸುರೇಶ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ; ಪ್ರಶಾಂತ್ ಸಂಬರಗಿ ವಿರುದ್ಧ ಎಫ್​ಐಆರ್ ದಾಖಲು

ಸಭಾಧ್ಯಕ್ಷರಾದ ಬಳಿಕ ಸ್ವಕ್ಷೇತ್ರಕ್ಕೆ ಯುಟಿ ಖಾದರ್

ಮಂಗಳೂರು: ನೂತನ ಸಭಾಧ್ಯಕ್ಷರಾದ ಮೇಲೆ ಮೇ.25 ರಂದು ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ್ದರು. ಈ ವೇಳೆ ಮಾತನಾಡಿದ್ದ ಅವರು ‘ನಾನು ಸಭಾಧ್ಯಕ್ಷ ಸ್ಥಾನದಲ್ಲಿ ಇದ್ದರೂ, ಉಳ್ಳಾಲ ಕ್ಷೇತ್ರದ ಸೇವೆ ಮಾಡ್ತೇನೆ. ಕ್ಷೇತ್ರದ ಜನರ, ಕಾರ್ಯಕರ್ತರ ಜೊತೆ ನಿಕಟ ಸಂಪರ್ಕ ಇರಲಿದೆ. ಈ ಸ್ಥಾನ ನನ್ನ ಸೇವೆಗೆ ಅಡ್ಡಿ ಬರಲ್ಲ, ನಾನು ಅದಕ್ಕೆ ಅಡ್ಡಿ ಪಡಿಸಲ್ಲ. ಈ ಹಂತಕ್ಕೆ ಬರಲು ಎಲ್ಲರ ಸಹಕಾರ, ಮಾರ್ಗದರ್ಶನವೇ ಕಾರಣ. ಈ ಗೌರವ ಉಳಿಸಿಕೊಂಡು ಜಿಲ್ಲೆಗೆ ಮತ್ತು ಕ್ಷೇತ್ರಕ್ಕೆ ಗೌರವ ತರುತ್ತೇನೆ ಎಂದು ಹೇಳಿದ್ದರು.

ಮಂಗಳೂರಿನಲ್ಲಿ ಮಾತನಾಡಿದ್ದ ನೂತನ ಸ್ಪೀಕರ್ ಯು.ಟಿ ಖಾದರ್ ‘ವಿಧಾನಸಭೆಯಲ್ಲಿ ದ್ವೇಷ, ಆವೇಶ ಇಲ್ಲದೇ ಸದಸ್ಯರ ಜೊತೆ ಇರಬೇಕು. ಸಭಾಧ್ಯಕ್ಷ ಸ್ಥಾನದಲ್ಲಿ ಜನರ ಜೊತೆ ಒಡನಾಟದ ಜೊತೆ ಸ್ಥಾನದ ಘನತೆ ಕೂಡ ಉಳಿಸಬೇಕಿದೆ. ಈ ಹೊತ್ತಲ್ಲಿ‌ ಕ್ಷೇತ್ರದ ಜನತೆ ಕೂಡ ನನಗೆ ಬೆಂಬಲ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ. ಕ್ಷೇತ್ರದ ಜನರು, ಕಾರ್ಯಕರ್ತರಿಗೆ ಮಂತ್ರಿ ಸ್ಥಾನದ ಬಗ್ಗೆ ಹೆಚ್ಚು ತಿಳುವಳಿಕೆ ಇದೆ. ಆದರೆ, ಸಭಾಧ್ಯಕ್ಷ ಸ್ಥಾನದ ಬಗ್ಗೆ ಹೆಚ್ಚಿನವರಿಗೆ ಗೊತ್ತಿರಲ್ಲ. ಇದರಿಂದ ನಾನು ಅವರ ಕೈಗೆ ಸಿಗಲ್ಲ, ಎಂಬ ಪ್ರೀತಿಯ ಆತಂಕ ಇದೆ. ಆದರೆ ಕೆಲವೇ ತಿಂಗಳುಗಳಲ್ಲಿ ಈ ಬಗ್ಗೆ ಅವರಿಗೆ ಅರಿವಾಗಲಿದೆ ಎಂದಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ