ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಶೃಂಗೇರಿ ಬಂದ್: ಭಕ್ತರು ಒಂದು ದಿನ ದೂರ ಇರಿ ಎಂದ ಸ್ಥಳೀಯರು

ಆಡಳಿತದ ಮೇಲೆ ಒತ್ತಡ ಹೇರುವ ಉದ್ದೇಶದಿಂದಲೇ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಸ್ವಯಂಪ್ರೇರಿತ ಶೃಂಗೇರಿ ಬಂದ್ ನಡೆಸಲು ವಿನಂತಿಸಲಾಗಿದೆ

ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಶೃಂಗೇರಿ ಬಂದ್: ಭಕ್ತರು ಒಂದು ದಿನ ದೂರ ಇರಿ ಎಂದ ಸ್ಥಳೀಯರು
ಶೃಂಗೇರಿ ಪೊಲೀಸ್ ಠಾಣೆ

ಚಿಕ್ಕಮಗಳೂರು: ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ಶುಕ್ರವಾರ ಶೃಂಗೇರಿ ಬಂದ್ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸ್ಥಳೀಯ ಸಂಘಟನೆಗಳು 100 ಬೆಡ್​ಗಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವಂತೆ ಆಗ್ರಹಿಸಿವೆ. ಆಡಳಿತದ ಮೇಲೆ ಒತ್ತಡ ಹೇರುವ ಉದ್ದೇಶದಿಂದಲೇ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಸ್ವಯಂಪ್ರೇರಿತ ಶೃಂಗೇರಿ ಬಂದ್ ನಡೆಸಲು ವಿನಂತಿಸಲಾಗಿದೆ. ಪ್ರವಾಸಿಗರು, ಭಕ್ತರು ಶೃಂಗೇರಿಗೆ ಬರಬಾರದು ಎಂದು ಮನವಿ ಮಾಡಲಾಗಿದೆ.

ಕಳೆದ 14 ವರ್ಷಗಳಿಂದ ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆ ಸ್ಥಾಪನೆಗಾಗಿ ಜನರು ಆಗ್ರಹಿಸುತ್ತಲೇ ಇದ್ದಾರೆ. ಸೂಕ್ತ ಚಿಕಿತ್ಸೆ ಸಿಗದೆ ಜನರು ಪರದಾಡುತ್ತಿದ್ದಾರೆ. ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ನಾಳೆ ಸ್ವಯಂಪ್ರೇರಿತ ಶೃಂಗೇರಿ ಬಂದ್​ಗೆ ಕರೆ ನೀಡಲಾಗಿದೆ. ‘ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿ’ ಈ ಬಂದ್​ಗೆ ಕರೆ ನೀಡಿದೆ. 14 ವರ್ಷಗಳಿಂದ ಸುಸಜ್ಜಿತ ಆಸ್ಪತ್ರೆಗೆ ಶೃಂಗೇರಿಯಲ್ಲಿ ಕೇಳಿ ಬರುತ್ತಲೇ ಇದೆ. ಶೃಂಗೇರಿಯಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ಈ ಹಿಂದೆ ಸಾಕಷ್ಟು ಜನರು ಸಾವನ್ನಪ್ಪಿದ್ದಾರೆ. ಉತ್ತಮ ಚಿಕಿತ್ಸೆಗಾಗಿ ಶೃಂಗೇರಿ ಜನರು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಅವಲಂಬಿಸಿದ್ದಾರೆ. ಶೃಂಗೇರಿಯಲ್ಲಿ ಉತ್ತಮ ಆಸ್ಪತ್ರೆ ಸ್ಥಾಪಿಸಬೇಕು ಎಂದು ಆಗ್ರಹಿಸಲೆಂದು ಜನರು ಸ್ವಯಂಪ್ರೇರಿತ ಶೃಂಗೇರಿ ಬಂದ್​ಗೆ ಕರೆ ನೀಡಿದ್ದಾರೆ.

ಚಿಕ್ಕಮಗಳೂರು: ಮಳೆಗೆ ಕೊಚ್ಚಿ ಹೋದ ಸೇತುವೆ
ಭಾರಿ ಮಳೆಯಿಂದಾಗಿ ಚಿಕ್ಕಮಗಳೂರು ನಗರದ ಮಧುವನ ಲೇಔಟ್‌ನಲ್ಲಿರುವ ಸೇತುವೆ ಕೊಚ್ಚಿಹೋಗಿದೆ. ಇದರಿಂದಾಗಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳು ಪರದಾಡುವಂತಾಯಿತು. ಸೇತುವೆ ಹಾನಿಯಾಗಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಭೇಟಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ರಕ್ಷಿಸಿದರು.

ಕುಸಿದ ತಡೆಗೋಡೆ, ಕೊಚ್ಚಿಹೋಯ್ತು ಕಾಫಿ ತೋಟ
ಚಿಕ್ಕಮಗಳೂರು ತಾಲ್ಲೂಕು ಮುಳ್ಳಯ್ಯನಗಿರಿ ಭಾಗದಲ್ಲಿ ಬುಧವಾರ ರಾತ್ರಿ ಭಾರಿ ಮಳೆ ಸುರಿದಿದ್ದು, ಹೊನ್ನಮ್ಮನಹಳ್ಳ ಜಲಪಾತದ ಬಳಿ ತಡೆಗೋಡೆ ಕುಸಿದಿದೆ. ಬಾಬಾಬುಡನ್​ಗಿರಿ ಇನಾಂ ದತ್ತಾತ್ರೇಯ ಪೀಠದ ಹಾದಿಯಲ್ಲಿರುವ ಜಲಪಾತದ ಎದುರು ರಸ್ತೆ ಕೊಚ್ಚಿಹೋಗಿದೆ. ಇದರಿಂದ ಮಾಜಿ ಸಚಿವ ಸಗೀರ್ ಅಹ್ಮದ್ ಅವರ ತೋಟಕ್ಕೂ ಹಾನಿಯಾಗಿದೆ. ಸುಮಾರು ಅರ್ಧ ಎಕರೆಯಷ್ಟು ಕಾಫಿ ತೋಟ ಕೊಚ್ಚಿ ಹೋಗಿದೆ.

ಇದನ್ನೂ ಓದಿ: ಶೃಂಗೇರಿ: ಕಾರಿನಿಂದ ಇಳಿದು ಶಾಲಾ ವಿದ್ಯಾರ್ಥಿಗಳಿಗೆ‌ ಆಲ್ ದಿ ಬೆಸ್ಟ್ ಹೇಳಿದ ರಾಷ್ಟ್ರಪತಿ; ವಿಡಿಯೋ ನೋಡಿ
ಇದನ್ನೂ ಓದಿ: ಚಿಕ್ಕಮಗಳೂರು: ಕಾರ್ಮಿಕರ ಪಕ್ಕದಲ್ಲೇ ಮಲಗಿದ್ದ ನಾಯಿಯ ಮೇಲೆ ಚಿರತೆ ದಾಳಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

Click on your DTH Provider to Add TV9 Kannada