AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ ಕಿಲ್ಲರ್ ಕಾಡಾನೆ ಸೆರೆ: ಏಕಲವ್ಯ ತಂಡದಿಂದ ಕಾರ್ಯಾಚರಣೆ ಯಶಸ್ವಿ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಕಟ್ಟೆಯಲ್ಲಿ ಇಬ್ಬರನ್ನು ಬಲಿ ಪಡೆದು ಆತಂಕ ಸೃಷ್ಟಿಸಿದ್ದ ಕಿಲ್ಲರ್ ಕಾಡಾನೆ ಕೊನೆಗೂ ಸೆರೆಯಾಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಭಗವತಿ ಬಳಿ ಓಡಾಡುತ್ತಿದ್ದ ಹಂತಕ ಸಲಗವನ್ನು ಏಕಲವ್ಯ ಟೀಮ್ ಯಶಸ್ವಿಯಾಗಿ ಲಾಕ್ ಮಾಡಿದೆ. ಅರಣ್ಯ ಇಲಾಖೆಯ ದಿಢೀರ್ ಕಾರ್ಯಾಚರಣೆ ಜನರಲ್ಲಿ ನೆಮ್ಮದಿ ತಂದಿದ್ದು, ಇದು ಶೃಂಗೇರಿ ಜನತೆಯ ಬಹುದಿನದ ಆತಂಕವನ್ನು ದೂರ ಮಾಡಿದೆ.

ಶೃಂಗೇರಿ ಕಿಲ್ಲರ್ ಕಾಡಾನೆ ಸೆರೆ: ಏಕಲವ್ಯ ತಂಡದಿಂದ ಕಾರ್ಯಾಚರಣೆ ಯಶಸ್ವಿ
ಚಿಕ್ಕಮಗಳೂರಿನಲ್ಲಿ ಎರಡು ಸಾವಿಗೆ ಕಾರವಾದ ಕಿಲ್ಲರ್ ಆನೆ ಸೆರೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Nov 03, 2025 | 8:39 AM

Share

ಚಿಕ್ಕಮಗಳೂರು, ನವೆಂಬರ್ 3: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಸಮೀಪದ ಕೆರೆಗದ್ದೆ ಗ್ರಾಮದಲ್ಲಿ ಇಬ್ಬರನ್ನು ಬಲಿ ಪಡೆದು, ಬೆಳೆ ನಾಶ ಮಾಡಿ ಆತಂಕ ಸೃಷ್ಟಿ ಮಾಡಿದ್ದ ಕಾಡಾನೆ (Wild Elephant) ಕೊನೆಗೂ ‌ಸೆರೆಯಾಗಿದೆ. ಭಾನುವಾರ ಸಂಜೆಯಿಂದ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಇಲಾಖೆ ಕೊನೆಗೂ ಹಂತಕ ಆನೆಯನ್ನು ಲಾಕ್ ಮಾಡಿದೆ.

ರಾಜ್ಯ ಸರ್ಕಾರದಿಂದ ಹಂತಕ ಕಾಡಾನೆ ಸೆರೆಗಾಗಿ ಆದೇಶ

ಶುಕ್ರವಾರ ಕೆರೆಕಟ್ಟೆ ಸಮೀಪದ ಕೆರೆಗದ್ದೆ ಗ್ರಾಮದ 44 ವರ್ಷದ ಹರೀಶ್ ಶೆಟ್ಟಿ, 55 ವರ್ಷದ ಉಮೇಶ್ ಗೌಡ ಅವರ ಮೇಲೆ ಕಾಡಾನೆ ದಾಳಿ ಮಾಡಿ ಭೀಕರವಾಗಿ ಕೊಂದು ಹಾಕಿತ್ತು. ಇದರಿಂದ ಆಕ್ರೋಶಗೊಂಡ ಜನರು ಸರ್ಕಾರ ಮತ್ತು ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಸಾವನ್ನಪ್ಪಿದ ಸ್ಥಳದಿಂದ ಮೃತ ದೇಹ ತೆಗೆಯಲು ಬಿಡದೆ ಸಂಜೆಯವರೆಗೂ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಸ್ಥಳೀಯರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ರಾಜ್ಯ ಸರ್ಕಾರ ಹಂತಕ ಕಾಡಾನೆ ಸೆರೆಗಾಗಿ ಆದೇಶ ನೀಡಿತ್ತು.

ಭಾನುವಾರ ಸಂಜೆ ಕಿಲ್ಲರ್ ಕಾಡಾನೆ ಸೆರೆ

ಹಂತಕ ಕಾಡಾನೆ ‌ಸೆರೆ ಕಾರ್ಯಾಚರಣೆಗಾಗಿ ದುಬಾರೆ ಆನೆ ಶಿಬಿರದಿಂದ ಏಕಲವ್ಯ ಟೀಮ್ ಶೃಂಗೇರಿ ತಾಲೂಕಿನ ಕೆರೆ ಕಟ್ಟೆ ಕ್ಯಾಂಪ್ಗೆ ಬಂದಿತ್ತು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಶೃಂಗೇರಿ ತಾಲೂಕಿನ ಭಗವತಿ ಪ್ರದೇಶದ ಸಮೀಪದಲ್ಲೇ ಕುಮ್ಕಿ ಆನಗೆಳಿದ್ದವು. ಇದೇ ಪ್ರದೇಶದ ಸಮೀಪ ಕಾಡಾನೆ ಓಡಾಟ ನಡೆಸಿದ್ದು ಭಾನುವಾರ ಸಂಜೆಯ ಕಾರ್ಯಾಚರಣೆ ವೇಳೆ ತಿಳಿದುಬಂದಿದೆ. ಕಿಲ್ಲರ್ ‌ಸಲಗದ ಓಡಾಟದ ಸುಳಿವು ‌ ಸಿಗುತ್ತಿದ್ದಂತೆ ಅಲರ್ಟ್ ಆದ ಅರಣ್ಯ ಇಲಾಖೆಯ ಸಿಬ್ಬಂದಿ, ರಾತ್ರಿ ವೇಳೆ ಕಾರ್ಯಾಚರಣೆ ನಡೆಸಿದ್ದಾರೆ. ಭಗವತಿ ಪ್ರದೇಶದ ಬಳಿ ಕಾಡಾನೆಗೆ ಪಶು ವೈದ್ಯರು ಡಾಟ್ ಮಾಡಿದ್ದಾರೆ. ಏಕಲವ್ಯ ನೇತೃತ್ವದ ಹರ್ಷ, ಅಜೇಯ, ಧನಂಜಯ, ಪ್ರಶಾಂತ ಕುಮ್ಕಿ ಆನೆಗಳು ಕಾರ್ಯಾಚರಣೆ ನಡೆಸಿದ್ದು, ಹಂತಕ ಕಾಡಾನೆಯನ್ನು ಲಾಕ್ ಮಾಡಲಾಗಿದೆ. ಸೋಮವಾರ ಬೆಳಗ್ಗೆ ನಡೆಯಬೇಕಿದ್ದಕಾರ್ಯಾಚರಣೆಯನ್ನು ಭಾನುವಾರ ರಾತ್ರಿಯೇ ನಡೆಸಿದ ಅರಣ್ಯ ಇಲಾಖೆ ಕಾಡಾನೆ ಸೆರೆ ಕಾರ್ಯಚರಣೆ ಯಶಸ್ವಿಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:39 am, Mon, 3 November 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್