ಕಾಶ್ಮೀರದ ಶಾರದಾ ದೇಗುಲಕ್ಕೆ ಶೃಂಗೇರಿ ಮಠದಿಂದ ವಿಗ್ರಹ; ಶಾರದೆ ಮೂಲ ವಿಗ್ರಹದ ಪ್ರತಿಕೃತಿ ನೀಡಲು ಒಪ್ಪಿಗೆ!

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿಯ ಕುಪ್ವಾರ ಜಿಲ್ಲೆಯ ಟ್ವಿಟಾಲ್​ನಲ್ಲಿ ಈ ದೇವಸ್ಥಾನ ನಿರ್ಮಾಣವಾಗಲಿದ್ದು, 2021ರ ಡಿಸೆಂಬರ್​ನಲ್ಲೇ ದೇವಸ್ಥಾನಕ್ಕೆ ಶಂಕುಸ್ಥಾಪನೆ ಕೂಡ ನೆರವೇರಿದೆ. ದೇವಸ್ಥಾನ ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಶಾರದಾ ಸೇವಾ ಸಮಿತಿ ಸದಸ್ಯರು ಶೃಂಗೇರಿಗೆ ಬಂದು ಶ್ರೀಗಳ ಜೊತೆ ಚರ್ಚಿಸಿದ್ದಾರೆ.

ಕಾಶ್ಮೀರದ ಶಾರದಾ ದೇಗುಲಕ್ಕೆ ಶೃಂಗೇರಿ ಮಠದಿಂದ ವಿಗ್ರಹ; ಶಾರದೆ ಮೂಲ ವಿಗ್ರಹದ ಪ್ರತಿಕೃತಿ ನೀಡಲು ಒಪ್ಪಿಗೆ!
ಮಠದ ಗುರುಗಳು ಕಾಶ್ಮೀರ ಶಾರದಾ ಸೇವಾ ಸಮಿತಿಯ ರವೀಂದ್ರ ಪಂಡಿತ್‍ಗೆ ಭರವಸೆ ನೀಡಿದ್ದಾರೆ
Follow us
TV9 Web
| Updated By: preethi shettigar

Updated on:Feb 04, 2022 | 1:20 PM

ಚಿಕ್ಕಮಗಳೂರು: 1200 ವರ್ಷಗಳ ಹಿಂದೆ ಕಾಶ್ಮೀರದ ಶಾರದಾ ಪೀಠದಿಂದ ಶಂಕರಾಚಾರ್ಯರು(Shankaracharya) ತಂದಿದ್ದರು ಎನ್ನುವ ಐತಿಹ್ಯವಿರುವ ಶೃಂಗೇರಿ ಶಾರದಾಂಬೆಯ(sharadamba) ಮೂರ್ತಿಯ ಪ್ರತಿರೂಪವನ್ನು ಶೃಂಗೇರಿ ಮಠದ ವತಿಯಿಂದ ಕಾಶ್ಮೀರದ ಶಾರದಾ ಪೀಠಕ್ಕೆ ಮಾಡಿಸಿ ಕೊಡಲು ಶೃಂಗೇರಿ ಮಠದ(sringeri mutt) ಗುರುವತ್ರಯರು ಒಪ್ಪಿಗೆ ಸೂಚಿಸಿದ್ದಾರೆ. ಕಾಶ್ಮೀರ ಶಾರದಾ ಸೇವಾ ಸಮಿತಿ ಅಧ್ಯಕ್ಷ ರವೀಂದ್ರ ಪಂಡಿತ್ ಶೃಂಗೇರಿಗೆ ಬಂದು ಮಠದ ಗುರವತ್ರಯರಾದ ಜಗದ್ಗುರು ಭಾರತೀ ತೀರ್ಥ ಹಾಗೂ ವಿಧುಶೇಖರ ಶ್ರೀಗಳ ಜೊತೆ ಈ ಕುರಿತು ಮಾತುಕತೆ ನಡೆಸಿದ್ದಾರೆ. ಈ ವೇಳೆ, ಶೃಂಗೇರಿ ಮಠದ ಗುರವತ್ರಯರು ಶೃಂಗೇರಿ ಶಾರದಾಂಬೆಯ ಮೂಲ ವಿಗ್ರಹದ ಪ್ರತಿಕೃತಿಯನ್ನು ಕಾಶ್ಮೀರ ಶಾರದಾ ಮಠಕ್ಕೆ ಕಳುಹಿಸಿಕೊಡಲು ಒಪ್ಪಿಗೆ ಸೂಚಿಸಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿಯ ಕುಪ್ವಾರ ಜಿಲ್ಲೆಯ ಟ್ವಿಟಾಲ್​ನಲ್ಲಿ ಈ ದೇವಸ್ಥಾನ ನಿರ್ಮಾಣವಾಗಲಿದ್ದು, 2021ರ ಡಿಸೆಂಬರ್​ನಲ್ಲೇ ದೇವಸ್ಥಾನಕ್ಕೆ ಶಂಕುಸ್ಥಾಪನೆ ಕೂಡ ನೆರವೇರಿದೆ. ದೇವಸ್ಥಾನ ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಶಾರದಾ ಸೇವಾ ಸಮಿತಿ ಸದಸ್ಯರು ಶೃಂಗೇರಿಗೆ ಬಂದು ಶ್ರೀಗಳ ಜೊತೆ ಚರ್ಚಿಸಿದ್ದಾರೆ.

ಹಿಂದೆ ಕಾಶ್ಮೀರಿಯಲ್ಲಿದ್ದ ಶಾರದಾ ದೇವಿ ವಿಗ್ರಹ ನಂತರ ಶೃಂಗೇರಿ ಪೀಠಕ್ಕೆ ಸೇರಿತ್ತು. ಅಂದರೆ ಮೂಲ ವಿಗ್ರಹ ಈಗ ಶೃಂಗೇರಿ ಮಠದಲ್ಲಿದೆ. ಹಾಗಾಗಿ, ಅದೇ ರೂಪವನ್ನು ಹೋಲುವ ಶೃಂಗೇರಿ ಶಾರದಾಂಬೆಯ ಪ್ರತಿರೂಪದ ಮೂರ್ತಿಯನ್ನು ನಿರ್ಮಾಣ ಮಾಡಿಕೊಡಲಾಗುತ್ತದೆ ಎಂದು ಮಠದ ಗುರುಗಳು ಕಾಶ್ಮೀರ ಶಾರದಾ ಸೇವಾ ಸಮಿತಿಯ ರವೀಂದ್ರ ಪಂಡಿತ್‍ಗೆ ಭರವಸೆ ನೀಡಿದ್ದಾರೆ.

ಕಾಶ್ಮೀರದಲ್ಲಿ 2021ರ ಡಿಸೆಂಬರ್ 2 ರಂದೇ ಭೂಮಿ ಪೂಜೆ ನಡೆದಿದ್ದು, ದೇಗುಲದ ವಾಸ್ತುಶಿಲ್ಪ ಹಿಂದಿನ ಸರ್ವಜ್ಞ ಪೀಠದ ಮಾದರಿಯಲ್ಲೇ ಇರಲಿದೆ. ದೇವಾಲಯ ಕಲ್ಲುಗಳಿಂದ ನಿರ್ಮಾಣವಾಗಲಿದ್ದು, ನಾಲ್ಕು ದಿಕ್ಕಿಗೂ ನಾಲ್ಕು ಬಾಗಿಲು ಇರಲಿದೆ. ಚಳಿಗಾಲ ಹೊರತುಪಡಿಸಿ ಉಳಿದ ಎಲ್ಲಾ ಕಾಲದಲ್ಲೂ ದೇವರ ದರ್ಶನಕ್ಕೆ ಅವಕಾಶ ಇರಲಿದೆ.

ಇದನ್ನೂ ಓದಿ: ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ 10 ಅಡಿ ಕಾಳಿಂಗ ಸರ್ಪ ಪ್ರತ್ಯಕ್ಷ! ವಿಡಿಯೋ ನೋಡಿ

Shocking News: ಕಾಳಿ ದೇವಿ ವಿಗ್ರಹದ ಪಾದದ ಮೇಲೆ ಕತ್ತರಿಸಿದ ತಲೆ ಪತ್ತೆ; ಉಳಿದ ದೇಹಕ್ಕಾಗಿ ಪೊಲೀಸರಿಂದ ಹುಡುಕಾಟ

Published On - 1:17 pm, Fri, 4 February 22

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ