AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಶಾಸಕ ರಾಜೇಗೌಡರಿಗೆ ಬಿಗ್ ಶಾಕ್; ಅಂಚೆ ಮತಗಳ ಮರು ಎಣಿಕೆಯಲ್ಲಿ ತಿರುವು!

ಚಿಕ್ಕಮಗಳೂರು ಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಹಾಲಿ ಶಾಸಕ ಟಿ.ಡಿ. ರಾಜೇಗೌಡರಿಗೆ ಭಾರಿ ಹಿನ್ನಡೆಯಾಗಿದೆ. 'ಡಬ್ಬಲ್ ಟಿಕ್' ಕಾರಣದಿಂದ 255 ಮತಗಳು ತಿರಸ್ಕೃತಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್‌ಗೆ ಬಹುಮತದ ವಿಶ್ವಾಸ ಮೂಡಿಸಿದೆ. ಕಾಂಗ್ರೆಸ್ ಮತ ತಿದ್ದುಪಡಿಯ ಆರೋಪ ಮಾಡಿದ್ದು, ಈ ಮರು ಎಣಿಕೆಯು ಅಂತಿಮ ಫಲಿತಾಂಶದ ಚಿತ್ರಣವನ್ನೇ ಬದಲಿಸುವ ಸಾಧ್ಯತೆ ದಟ್ಟವಾಗಿದೆ. ಹೈಕೋರ್ಟ್ ಆದೇಶದಂತೆ ಮರು ಎಣಿಕೆ ನಡೆದಿದೆ.

ಕಾಂಗ್ರೆಸ್ ಶಾಸಕ ರಾಜೇಗೌಡರಿಗೆ ಬಿಗ್ ಶಾಕ್; ಅಂಚೆ ಮತಗಳ ಮರು ಎಣಿಕೆಯಲ್ಲಿ ತಿರುವು!
ಶೃಂಗೇರಿ ಅಂಚೆ ಮತ ಮರು ಎಣಿಕೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: May 03, 2026 | 6:03 AM

Share

ಚಿಕ್ಕಮಗಳೂರು, ಏ.3: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಗೆ ಸಂಬಂಧಿಸಿದಂತೆ ಮತ್ತೊಂದು ತಿರುವು ಪಡೆದುಕೊಂಡಿದೆ. ಹೈಕೋರ್ಟ್ ಆದೇಶದಂತೆ ನಡೆದ ಅಂಚೆ ಮತಗಳ (Postal Ballots) ಮರು ಎಣಿಕೆಯಲ್ಲಿ ಹಾಲಿ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಭಾರಿ ಹಿನ್ನಡೆಯಾಗಿದೆ. ನೆನ್ನೆ (ಮೇ.2) ಅವರು ಅಂಚೆ ಮತಗಳ ಮರು ಮತ‌ಎಣಿಕೆ ವಿಜಯ ಸಾಧಿಸಿದರು ಎಂದು ಹೇಳಲಾಗಿತ್ತು. ಈ ಮತ ಏಣಿಕೆಯಲ್ಲಿ ಭಾರೀ ಗೊಂದಲಗಳು ಉಂಟಾಗಿತ್ತು. ಶನಿವಾರ ಏಳು ಗಂಟೆಗೆ ಶುರವಾದ ಈ ಮತ ಎಣಿಕೆ ಮಧ್ಯರಾತ್ರಿಯವರಿಗೆ ನಡೆದಿದೆ. ಇದೀಗ ಈ ಎಲ್ಲ ಗೊಂದಲು ಮಹಾತಿರುವು ಪಡೆದುಕೊಂಡಿದೆ. 2023ರ ಮೇ 13 ರಂದು ನಡೆದಿದ್ದ ಮತ ಎಣಿಕೆ ವೇಳೆ ಸಿಂಧು (Valid) ಎಂದು ಪರಿಗಣಿಸಲಾಗಿದ್ದ ಮತಗಳು, ಈಗಿನ ಮರು ಎಣಿಕೆ ವೇಳೆ ತಿರಸ್ಕೃತಗೊಂಡಿವೆ.

ಅಂಚೆ ಮತಗಳ ಪತ್ರದಲ್ಲಿ ರಾಜೇಗೌಡ ಮತ್ತು ಮತ್ತೊಬ್ಬ ಅಭ್ಯರ್ಥಿ ಇಬ್ಬರಿಗೂ ‘ಡಬ್ಬಲ್ ಟಿಕ್’ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ 258 ಮತಗಳನ್ನು ತಿರಸ್ಕರಿಸಲಾಗಿದೆ. ಈ ಹಿಂದೆ 569 ಅಂಚೆ ಮತಗಳನ್ನು ಪಡೆದಿದ್ದ ರಾಜೇಗೌಡರ ಪಟ್ಟಿಯಿಂದ ಈಗ 255 ಮತಗಳು ಮರು ಎಣಿಕೆ ವೇಳೆ ಕಡಿತಗೊಂಡಿವೆ. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಬಂದಿದ್ದ 692 ಅಂಚೆ ಮತಗಳಲ್ಲಿ ಕೇವಲ 2 ಮತಗಳು ಮಾತ್ರ ತಿರಸ್ಕೃತಗೊಂಡಿವೆ.

ಈಗಿನ ಮರು ಎಣಿಕೆಯಲ್ಲಿ ರಾಜೇಗೌಡರ 255 ಅಂಚೆ ಮತಗಳು ಕಡಿತಗೊಂಡಿರುವುದರಿಂದ, ಚುನಾವಣಾ ಫಲಿತಾಂಶದ ಅಂತಿಮ ಚಿತ್ರಣವು ಬದಲಾಗುವ ಸಾಧ್ಯತೆ ದಟ್ಟವಾಗಿದೆ. ತನಗೆ ಬಹುಮತ ಬಂದಿದೆ ಎಂದು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಈಗಾಗಲೇ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮರು ಎಣಿಕೆಯಲ್ಲಿ ಇಷ್ಟೊಂದು ದೊಡ್ಡ ಮಟ್ಟದ ವ್ಯತ್ಯಾಸ ಕಂಡುಬಂದ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕ ರಾಜೇಗೌಡ ಅವರು ಮಧ್ಯರಾತ್ರಿ 4 ಗಂಟೆಯವರೆಗೂ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಬೀಡುಬಿಟ್ಟಿದ್ದರು.

ಇದನ್ನೂ ಓದಿ: ರಾತ್ರಿ 8 ಗಂಟೆಯಾದರೂ ಶೃಂಗೇರಿ ವಿಧಾನಸಭಾ ಕ್ಷೇತ್ರ ಮರು ಮತ ಎಣಿಕೆಯ ಅಧಿಕೃತ ಮಾಹಿತಿ ನೀಡದ ಅಧಿಕಾರಿಗಳು: ಹೈಡ್ರಾಮಾ

ಕಾಂಗ್ರೆಸ್ ಮುಖಂಡ ಸುದೀರ್ ಕುಮಾರ್ ಮುರೋಳಿ ಅವರು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಮತ್ತು ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ವಿರುದ್ಧ ಮತಗಳ ‘ಟ್ಯಾಂಪರಿಂಗ್’ (ಮತಗಳ ತಿದ್ದುಪಡಿ) ಮಾಡಲಾಗಿದೆ ಎಂದು ದೂರು ನೀಡಿದ್ದಾರೆ. ರಾಜೇಗೌಡರ ಮತಪತ್ರಗಳಲ್ಲಿ ‘ಡಬ್ಬಲ್ ಟಿಕ್’ ಮಾಡಿ ಉದ್ದೇಶಪೂರ್ವಕವಾಗಿ ಅವುಗಳನ್ನು ತಿರಸ್ಕೃತಗೊಳಿಸಲಾಗಿದೆ ಎಂಬುದು ಕಾಂಗ್ರೆಸ್ ಆರೋಪ. ಇನ್ನು “ನಾವು ಸಂಪೂರ್ಣವಾಗಿ ಹೈಕೋರ್ಟ್ ಆದೇಶದಂತೆ ಮರು ಎಣಿಕೆ ಮಾಡಿದ್ದೇವೆ. ಹ್ಯಾಂಡ್ ಬುಕ್ ನಿಯಮಗಳ ಪ್ರಕಾರವೇ ಸಿಂಧು ಮತ್ತು ಅಸಿಂಧು ಮತಗಳನ್ನು ನಿರ್ಧರಿಸಲಾಗಿದೆ. ವರದಿಯನ್ನು ಈಗ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ,” ಎಂದು ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಾವಣಗೆರೆ: 20 ಲಕ್ಷ ಮೌಲ್ಯದ ಚಿನ್ನ ಹಿಂದಿರುಗಿಸಿದ ಅಂಗಡಿ ಮಾಲೀಕ
ದಾವಣಗೆರೆ: 20 ಲಕ್ಷ ಮೌಲ್ಯದ ಚಿನ್ನ ಹಿಂದಿರುಗಿಸಿದ ಅಂಗಡಿ ಮಾಲೀಕ
ಫೆಮಿನಾ ಮಿಸ್ ಇಂಡಿಯಾ ಗೆದ್ದ ಶಾಸಕ ಸತೀಶ್ ಸೈಲ್ ಪುತ್ರಿಗೆ ಭರ್ಜರಿ ಸ್ವಾಗತ
ಫೆಮಿನಾ ಮಿಸ್ ಇಂಡಿಯಾ ಗೆದ್ದ ಶಾಸಕ ಸತೀಶ್ ಸೈಲ್ ಪುತ್ರಿಗೆ ಭರ್ಜರಿ ಸ್ವಾಗತ
ನಟಿ ಸಾರಾ ಅಲಿ ಖಾನ್ ಡೈಲಿ ವ್ಯಾಯಾಮ ಹೀಗಿರುತ್ತೆ: ವಿಡಿಯೋ
ನಟಿ ಸಾರಾ ಅಲಿ ಖಾನ್ ಡೈಲಿ ವ್ಯಾಯಾಮ ಹೀಗಿರುತ್ತೆ: ವಿಡಿಯೋ
ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆಲುವು: ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು
ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆಲುವು: ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ