ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಶೃಂಗೇರಿ ಪೋಕ್ಸೋ ಕೇಸ್: ನಾಲ್ವರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ

ಹಣಕ್ಕಾಗಿ ತಾಯಿಯೇ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣಕ್ಕೆ ಬಂಧಿಸಿದಂತೆ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ. ಸಂತ್ರಸ್ತೆ ಬಾಲಕಿ ತಾಯಿ ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳಿಗೆ ಕೋರ್ಟ್​ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಶೃಂಗೇರಿ ಪೋಕ್ಸೋ ಕೇಸ್: ನಾಲ್ವರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 11, 2024 | 2:51 PM

ಚಿಕ್ಕಮಗಳೂರು, (ಮಾರ್ಚ್ 11): ಜಿಲ್ಲೆ ಶೃಂಗೇರಿ(sringeri prostitution Case) ತಾಲೂಕಿನಲ್ಲಿ ಹಣಕ್ಕಾಗಿ ತಾಯಿಯೇ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ (prostitution) ದೂಡಿದ್ದ ಪ್ರಕರಣಕ್ಕೆ ಬಂಧಿಸಿದಂತೆ ಇದೀಗ ಚಿಕ್ಕಮಗಳೂರು (Chikkamagalur ) ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯವು ನಾಲ್ವರು ಆರೋಪಿಗಳಿಗೆ ಶಿಕ್ಷಿ ವಿಧಿಸಿದೆ. ಸಂತ್ರಸ್ತೆ ಬಾಲಕಿ ತಾಯಿ ಗೀತಾ ಮತ್ತು ಆಕೆಗೆ ಸಹಾಯ ಮಾಡಿದ್ದ ಗಿರೀಶ್, ದೇವಿಶರಣ್​​, ಅಭಿನಂದನ್ ಅಲಿಯಾಸ್ ಸ್ಮಾಲ್ ಅಭಿಗೆ ತಲಾ 25 ಸಾವಿರ ದಂಡ ಹಾಗೂ 20 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಮೂರ್ತಿ ಶಾಂತಣ್ಣ ಆಳ್ವ ಅವರು ಆದೇಶ ಹೊರಡಿಸಿದ್ದಾರೆ.

ಹಣಕ್ಕಾಗಿ ತಾಯಿಯೇ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣಕ್ಕೆ ಬಂಧಿಸಿದಂತೆ ಬಾಲಕಿಯ ತಾಯಿ ಸೇರಿದಂತೆ ನಾಲ್ಕು ಜನರ ಮೇಲೆ ಆರೋಪ ಸಾಬೀತಾಗಿತ್ತು. ನಾಲ್ಕು ಜನರನ್ನು ದೋಷಿ ಎಂದು ಚಿಕ್ಕಮಗಳೂರು ತ್ವರಿತ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದ್ದು, 53 ಜನರ ಪೈಕಿ 49 ಜನರನ್ನ ಪ್ರಕರಣದಿಂದ ಖುಲಾಸೆಗೊಳಿಸಿತ್ತು. ಈ ಮೂಲಕ ಸ್ಮಾಲ್ ಅಭಿ, ಸಂತ್ರಸ್ತೆ ತಾಯಿ ಗೀತಾ, ಗಿರೀಶ್, ದೇವಿ ಶರಣ್ ಅಪರಾಧಿಗಳೆಂದು ಸಾಬೀತಾಗಿತ್ತು.

ಇದನ್ನೂ ಓದಿ: ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣ: ತಾಯಿ ಸೇರಿದಂತೆ ನಾಲ್ವರು ದೋಷಿ, 49 ಜನ ಖುಲಾಸೆ

ತಾಯಿಯ ಕಿರುಕುಳ ತಾಳಲಾರದೆ ಬಾಲಕಿ ವೇಶ್ಯಾವಾಟಿಕೆ ಒಪ್ಪಿದ್ದಳು. ಹೀಗಾಗಿ 2020ರ ಸೆಪ್ಟೆಂಬರ್ 1 ರಿಂದ 2021ರ ಜನವರಿ 27ರ ವರೆಗೂ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ನಡೆದಿತ್ತು.ಕೊನೆಗೆ ಶೃಂಗೇರಿ ತಾಲೂಕಿನ ಕುಂಚೆಬೈಲ್ ಸಮೀಪದ ಗೋಚವಲ್ಲಿ ಗ್ರಾಮದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ 2021ರಲ್ಲಿ ಪೊಲೀಸರು ದಾಳಿ ಮಾಡಿ ಅಪ್ರಾಪ್ತ ಬಾಲಕಿಯನ್ನು ರಕ್ಷಣೆ ಮಾಡಿದ್ದರು. ಈ ಒಂದೇ ಅತ್ಯಾಚಾರ ಪ್ರಕರಣದಲ್ಲಿ ಶೃಂಗೇರಿ ಪೊಲೀಸರು 53 ಜನರನ್ನು ಬಂಧಿಸಿ ಒಂದೇ ಪ್ರಕರಣದಲ್ಲಿ 38 ವಿವಿಧ ರೀತಿಯ ಚಾರ್ಜ್ ಶೀಟ್ ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ