ರಾಮ ಮೂರ್ತಿ ಪ್ರತಿಷ್ಠಾಪನೆಗೆ ವಿರೋಧ: ಶೃಂಗೇರಿ ಭಾರತಿ ತೀರ್ಥ ಸ್ವಾಮೀಜಿ ಹೆಸರಿನಲ್ಲಿ ಅಪಪ್ರಚಾರ, ಇಲ್ಲಿದೆ ಸ್ಪಷ್ಟನೆ

ಶೃಂಗೇರಿ ಶ್ರೀಗಳ ಭಾವಚಿತ್ರ ಹಾಗೂ ಹೆಸರು ಬಳಸಿ ಅಯೋಧ್ಯೆಯ ಪವಿತ್ರ ಪ್ರಾಣ ಪ್ರತಿಷ್ಠಾಪನ ಮಹೋತ್ಸವವನ್ನು ವಿರೋಧಿಸುತ್ತಾರೆಂದು ಅಪಪ್ರಚಾರ ಮಾಡಲಾಗುತ್ತಿದೆ. ಈ ಬಗ್ಗೆ ಶೃಂಗೇರಿ ಪೀಠದ ಆಡಳಿತ ಮಂಡಳಿ ಬಹಿರಂಗ ಪತ್ರದ ಮೂಲಕ ಸ್ಪಷ್ಟನೆ ನೀಡಿದೆ.

ರಾಮ ಮೂರ್ತಿ ಪ್ರತಿಷ್ಠಾಪನೆಗೆ ವಿರೋಧ: ಶೃಂಗೇರಿ ಭಾರತಿ ತೀರ್ಥ ಸ್ವಾಮೀಜಿ ಹೆಸರಿನಲ್ಲಿ ಅಪಪ್ರಚಾರ, ಇಲ್ಲಿದೆ ಸ್ಪಷ್ಟನೆ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on:Jan 08, 2024 | 8:01 PM

ಚಿಕ್ಕಮಗಳೂರು, (ಜನವರಿ.08): ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮೂರ್ತಿ(ayodhya ram mandir)  ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಸಕಲ ಸಿದ್ಧತೆಗಳು ನಡೆದಿವೆ. ಮತ್ತೊಂದೆಡೆ ಈ ಬಗ್ಗೆ ರಾಜಕೀಯ ಆರೋಪ=ಪ್ರತ್ಯಾರೋಪಗಳು ಜೋರಾಗಿವೆ. ಇನ್ನು ಇದರ ಮಧ್ಯೆ ಶೃಂಗೇರಿ ಶ್ರೀಗಳ ಭಾವಚಿತ್ರ ಹಾಗೂ ಹೆಸರು ಬಳಸಿ ಅಯೋಧ್ಯೆಯ ಪವಿತ್ರ ಪ್ರಾಣ ಪ್ರತಿಷ್ಠಾಪನ ಮಹೋತ್ಸವವನ್ನು ವಿರೋಧಿಸುತ್ತಾರೆಂದು ಅಪಪ್ರಚಾರ ಮಾಡಲಾಗುತ್ತಿದೆ. ಈ ಬಗ್ಗೆ ಶೃಂಗೇರಿ ಪೀಠದ(sringeri sharada peetha) ಆಡಳಿತ ಮಂಡಳಿ ಬಹಿರಂಗ ಪತ್ರದ ಮೂಲಕ ಸ್ಪಷ್ಟನೆ ನೀಡಿದ್ದು, ಯಾವುದೇ ಅಪಪ್ರಚಾರಗಳಿಗೆ ಕಿವಿ ಕೊಡದಂತೆ ಶ್ರೀಗಳು ಕರೆ ನೀಡಿದ್ದಾರೆ.

ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ವಿರೋಧಿಸುವಂತೆ ಶ್ರೀಗಳು ಕರೆ ನೀಡಿದ್ದಾರೆಂದು ಶೃಂಗೇರಿ ಶ್ರೀ ಭಾರತಿ ತೀರ್ಥ ಸ್ವಾಮೀಜಿಗಳ ಹೆಸರಲ್ಲಿ WWW.jainikajagaran.com ಎಂಬ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪ್ರಚಾರ ಮಾಡಲಾಗಿದೆ. ಇದನ್ನೇ ನಿಜವೆಂದು ತಿಳಿದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಶ್ರೀಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಶ್ರೀಗಳ ಗಮನಕ್ಕೆ ಬಂದಿದೆ. ಇದರಿಂದ ಎಚ್ಚೆತ್ತ ಶೃಂಗೇರಿ ಪೀಠದ ಆಡಳಿತ ಮಂಡಳಿ ಅಧಿಕಾರಿ ಗೌರಿ ಶಂಕರ್ ಬಹಿರಂಗ ಪತ್ರವೊಂದು ಬಿಡುಗಡೆ ಮಾಡಿದ್ದು, ಯಾವುದೇ ಅಪಪ್ರಚಾರಗಳಿಗೆ ಕಿವಿ ಕೊಡದಂತೆ ಶ್ರೀಗಳು ಕರೆ ನೀಡಿದ್ದಾರೆ.

ಇದನ್ನೂ ಓದಿ: ಮೋದಿ, ಯೋಗಿ ಆಡಳಿತಾವಧಿ ಮುಗಿದ ನಂತರ ರಾಮ ಮಂದಿರ ಕೆಡವುತ್ತೇವೆ ಎಂಬ ಮಾತು ಬರಬಾರದು: ಪೇಜಾವರ ಶ್ರೀ

ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ನೆನಪಿನಲ್ಲಿ ಇಟ್ಟುಕೊಂಡು ಶ್ರೀರಾಮ ತಾರಕ ಜಪ ಮಂತ್ರಿಸುವಂತೆ ಶೃಂಗೇರಿ ಶ್ರೀಗಳು ಕರೆ ನೀಡಿದ್ದರು. ಆದರೆ, ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ವಿರೋಧಿಸುತ್ತಾರೆಂದು ಅಪಪ್ರಚಾರ ಮಾಡಲಾಗಿತ್ತು. ಇದರಿಂದ ಮಠದ ಆಡಳಿತ ಅಧಿಕಾರಿ ಗೌರಿ ಶಂಕರ್ ಅವರು ಇದೀಗ ಶ್ರೀಗಳ ಹಾಗೂ ಮಠದ ಕುರಿತು ಸ್ಪಷ್ಟನೆ ನೀಡಿದ್ದು, ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಶೃಂಗೇರಿ ಮಠದ ಸ್ಪಷ್ಟೀಕರಣ

ದೇಶದಲ್ಲಿ ಸುಮಾರು 500 ವರ್ಷಗಳ ಸುಧೀರ್ಗ ಹೋರಾಟದ ಬಳಿಕ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಲಾಗಿದ್ದು, ಜ.22ಕ್ಕೆ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾನ ಮಾಡಲಾಗುತ್ತಿದೆ. ಆದರೆ, ಕೆಲವು ಧರ್ಮ ದ್ವೇಷಿಗಳು ಶೃಂಗೇರಿ ಮಠದಿಂದ ಶ್ರೀರಾಮ ಪ್ರಾಣ ಪ್ರತಿಷ್ಠೆಗೆ ವಿರೋಧವಿದೆ ಎಂದು ಸುಳ್ಳು ಸುದ್ದಿಯನ್ನು ಬಿತ್ತರಿಸಿದ್ದಾರೆ. ಆದರೆ, ಶೃಂಗೇರಿ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ರಾಮಮಂದಿರಕ್ಕೆ ನಮ್ಮ ವಿರೋಧವಿಲ್ಲ ಎಂದು ಸ್ಪಷ್ಟೀಕರಣ ಕೊಟ್ಟಿದ್ದಾರೆ.

ಸುಮಾರು 500 ವರ್ಷಗಳ ಸುದೀರ್ಘವಾದ ಹೋರಾಟದ ನಂತರ ಶ್ರೀರಾಮಚಂದ್ರನ ಅವತಾರ ಕ್ಷೇತ್ರವಾದ ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನಿಗೆ ಭವ್ಯವಾದ ದೇವಸ್ಥಾನದ ನಿರ್ಮಾಣವು ನೆರವೇರಿ ಇದೇ ಶೋಭಕೃತ್ ಪುಷ್ಯ ಶುಕ್ಲದ್ವಾದಶಿ (22-1-2024) ಸೋಮವಾರದಂದು ಪ್ರಾಣಪ್ರತಿಷ್ಠಾಮಹೋತ್ಸವವು ಅತ್ಯಂತ ವೈಭವೋಪೇತವಾಗಿ ಸಂಪನ್ನಗೊಳ್ಳಲಿದೆ. ವಿಷಯವು ಸಮಸ್ತ ಆಸ್ತಿಕಸ್ತೋಮಕ್ಕೂ ಸಂತಸವಾಗಿದೆ. ಆದರೆ, ಇಂತಹ ಸಂದರ್ಭದಲ್ಲಿ ಕೆಲವರು ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ www.dainikjagran.com ಎಂಬ ಹೆಸರನ್ನು ಉಪಯೋಗಿಸಿಕೊಂಡು ಶೃಂಗೇರಿ ಶಾರದಾಪೀಠದ ಪ್ರಸ್ತುತ ಅಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಛಾಯಾಚಿತ್ರದ ಜೊತೆಗೆ ಶ್ರೀಗಳು ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ವಿರೋಧಿಸುತ್ತಿದ್ದಾರೆ ಎಂಬ ಅರ್ಥವು ಬರುವ ಹಾಗೆ ಸಂದೇಶವನ್ನು ಹಾಕಿ ಪ್ರಚಾರ ಮಾಡುತ್ತಿದ್ದಾರೆ. ಆದರೆ, ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಇಂತಹ ಯಾವುದೇ ಸಂದೇಶ ನೀಡಿಲ್ಲ.

ಇದು ಕೇವಲ ಧರ್ಮದ್ವೇಷಿಗಳಾದ ಕೆಲವರು ಮಾಡುತ್ತಿರುವ ಮಿಥ್ಯಾಪ್ರಚಾರವೇ ಸರಿ. ಆದ್ದರಿಂದ ಅಸ್ತಿಕ ಮಹಾಜನರು ಯಾವುದೇ ಕಾರಣಕ್ಕೆ ಇಂತಹ ಅಪಪ್ರಚಾರಗಳಿಗೆ ಬೆಲೆಯನ್ನು ಕೊಡಬಾರದು. ಹಾಗೆಯೇ ದಕ್ಷಿಣಾಮ್ನಾಯ ಶೃಂಗೇರಿ ಶಾರದಾಪೀಠದ ಅಧಿಕೃತವಾದ www.sringeri.net ಎಂಬ ವೆಬ್‌ಸೈಟಿನಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾದ ವಿಷಯಗಳನ್ನು ಮಾತ್ರವೇ ಪ್ರಾಮಾಣಿಕವಾಗಿ ಪರಿಗಣಿಸಬೇಕೆಂದು ಈ ಮೂಲಕ ನಿವೇದಿಸುತ್ತಿದ್ದೇವೆ.

‘sharadapeetham’ ಯೂಟ್ಯೂಬ್ ಚ್ಯಾನೆಲ್ ಮೂಲಕ ಕಳೆದ ದೀಪಾವಳಿಯ (12-11-2023) ಸಂದರ್ಭದಲ್ಲಿ ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ಮನಸ್ಸಿನಲ್ಲಿಟ್ಟುಕೊಂಡು ಶ್ರೀರಾಮತಾರಕ ಮಹಾಮಂತ್ರವನ್ನು ಜಪಿಸುವಂತೆ ಎಲ್ಲಾ ಆಸ್ತಿಕರಿಗೂ ಶೃಂಗೇರಿ ಜಗದ್ಗುರುಗಳು ಸಂದೇಶವನ್ನು ನೀಡಿದ್ದರು. ಅದನ್ನನುಸರಿಸಿ ಆಸ್ತಿಕರು ಅತ್ಯಧಿಕ ಸಂಖ್ಯೆಯಲ್ಲಿ ಮಂತ್ರಜಪವನ್ನು ಮಾಡುತ್ತಿರುವುದು ಈ ಸಂದರ್ಭದಲ್ಲಿ ಗಮನಾರ್ಹವಾಗಿದೆ. ಹಾಗೆಯೇ ಅತ್ಯಂತ ಪವಿತ್ರವೂ ಅಪರೂಪವು ಆದ ಈ ಪ್ರಾಣಪ್ರತಿಷ್ಠಾಮಹೋತ್ಸವದ ಸುಸಂದರ್ಭದಲ್ಲಿ ಎಲ್ಲಾ ಆಸ್ತಿಕರು ಯಥಾಯೋಗ್ಯವಾಗಿ ಭಾಗವಹಿಸಿ ಶ್ರೀರಾಮನ ಪರಿಪೂರ್ಣಕೃಪೆಗೆ ಪಾತ್ರರಾಗಿ ಕೃತಾರ್ಥರಾಗಬೇಕೆಂದು ಸ್ವಾಮೀಜಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:46 pm, Mon, 8 January 24

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!