ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ, ಯಾರು ಯಾವ ಡ್ರೆಸ್ ಹಾಕ್ಬೇಕು ಗೊತ್ತಾ?

ಶ್ರೀ ಕ್ಷೇತ್ರ ಶೃಂಗೇರಿ (Sringeri) ಎಂದರೆ ಜ್ಞಾನದಾತೆ ಶಾರದಾಂಬೆಯ ಪರಮ ಪವಿತ್ರ ಕ್ಷೇತ್ರ. ಶಾರದಾಂಬೆಯ ದರ್ಶನಕ್ಕೆ ಬೇರೆ ಬೇರೆ ರಾಜ್ಯಗಳಿಂದಲೂ ಭಕ್ತು ಆಗಮಿಸುತ್ತಿದ್ದಾರೆ. ಇದೀಗ ವಿಷಯ ಏನೆಂದರೆ ಶೃಂಗೇರಿ ಶಾರದಾಂಬೆ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ಮಾಡಲಾಗಿದೆ. ಹೀಗಾಗಿ ಇನ್ಮುಂದೆ ಶೃಂಗೇರಿ ಶಾರದೆ ದರ್ಶನಕ್ಕೆ ಆಗಮಿಸುವ ಭಕ್ತಾಧಿಗಳು ಕಡ್ಡಾಯವಾಗಿ ಭಾರತೀಯ ಸಂಪ್ರದಾಯಿಕ ಉಡುಗೆ ತೊಟ್ಟೇ ಬರಬೇಕು. ಈ ಬಗ್ಗೆ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಹಾಗಾದ್ರೆ, ಹೆಣ್ಣು ಮಕ್ಕಳಿಗೆ ಯಾವ ಉಡುಗೆ? ಪುರುಷರಿಗೆ ಯಾವ ಉಡುಗೆ ಎನ್ನುವ ವಿವರ ಇಲ್ಲಿದೆ.

ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ, ಯಾರು ಯಾವ ಡ್ರೆಸ್ ಹಾಕ್ಬೇಕು ಗೊತ್ತಾ?
ಶೃಂಗೇರಿ ಶಾರದಾಂಬೆ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on: Jul 19, 2024 | 7:15 PM

ಚಿಕ್ಕಮಗಳೂರು, (ಜುಲೈ 19) : ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಇದೇ ಆಗಸ್ಟ್ 15ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ  ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದೆ ಮೊದಲ ಬಾರಿಗೆ ಶೃಂಗೇರಿ ಶಾರದಾ ಮಠದಿಂದ ವಸ್ತ್ರ ಸಂಹಿತೆ ಜಾರಿ ಮಾಡಿದೆ.

ಇದೇ ಆಗಸ್ಟ್ 15ರಿಂದ ಅಮ್ಮನ ದರ್ಶನಕ್ಕೆ ಆಗಮಿಸುವವರು ಭಾರತೀಯ ಸಾಂಪ್ರದಾಯಕ ಉಡುಗೆಯಲ್ಲೇ ಬರಬೇಕು. ಒಂದು ವೇಳೆ ಭಾರತೀಯ ಸಾಂಪ್ರದಾಯಕವಲ್ಲದ ಉಡುಗೆಯನ್ನು ತೊಟ್ಟು ಬಂದವರಿಗೆ ಶ್ರೀ ಶಾರದಾಂಬೆ ದೇವಸ್ಥಾನದ ಅರ್ಧ ಮಂಟಪದ ಒಳಗೆ ಪ್ರವೇಶವಿರುವುದಿಲ್ಲ. ಅಂತವರು ಹೊರಗಿನ ಪ್ರಕಾರದಿಂದಲೇ ದೇವರ ದರ್ಶನವನ್ನು ಪಡೆಯಬೇಕಾಗುತ್ತದೆ.

ಇದನ್ನೂ ಓದಿ: ಭಾರೀ ಮಳೆ; ಚಿಕ್ಕಮಗಳೂರು ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಮನವಿ

ಪುರುಷರಾದಲ್ಲಿ ಧೋತಿ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್ – ದುಪಟ್ಟ ಅಥವಾ ಲಂಗ ದಾವಣಿಗಳಂತ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವರ ದರ್ಶನ ಮಾಡಬಹುದು ಎಂದು ಶೃಂಗೇರಿ ಶಾರದಾ ಪೀಠ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ಶ್ರೀಮಠದ ಗುರುನಿವಾಸದಲ್ಲಿ ಪಾದಪೂಜೆ, ಭಿಕ್ಷಾವಂದನೆ ಹಾಗೂ ಗುರು ದರ್ಶನ ಸಂದರ್ಭದಲ್ಲಿ ಈ ಹಿಂದಿನಿಂದಲೂ ಈ ನಿಯಮ ಜಾರಿಯಲ್ಲಿದ್ದು, ಆಗಸ್ಟ್ 15 ರಿಂದ ಶ್ರೀ ಮಠದಲ್ಲಿ ಭಕ್ತರು ಕಟ್ಟುನಿಟ್ಟಾಗಿ ಪಾಲಿಸಲು ಆದೇಶ ಹೊರಡಿಸಲಾಗಿದೆ.

ವಸ್ತ್ರಸಂಹಿತೆ  ಆದೇಶಕ್ಕೆ ವ್ಯಾಪಕ ಬೆಂಬಲ

ಇನ್ನು ಶೃಂಗೇರಿ ಮಠದ ಈ ವಸ್ತ್ರಸಂಹಿತೆ ಜಾರಿ ಆದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಕ್ತರು ವ್ಯಾಪಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಅರ್ಧಂಬರ್ಧ ಬಟ್ಟೆ ತೊಟ್ಟು ಕೆಲವು ಬುದ್ಧಿಹೀನರು ಪಿಕ್ನಿಕ್ ಸ್ಪಾಟ್ ನಂತೆ ದೇವಾಲಯಗಳನ್ನು ಪ್ರವೇಶಿಸುತ್ತಾರೆ. ಇಂತಹ ನಿಯಮಗಳಿಂದ ಅದಕ್ಕೆ ಕಡಿವಾಣ ಹಾಕಬಹುದು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ