ಮೂರು ದಿನ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ, ಜಿಲ್ಲೆಯಾದ್ಯಂತ ಹೈ ಅಲರ್ಟ್

ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಸಾವಿರಕ್ಕೂ ಹೆಚ್ಚು ದತ್ತ ಭಕ್ತರು ಮಾಲಾಧಾರಿಗಳಾಗಿ, 7 ದಿನಗಳ ಕಾಲ ವ್ರತಾಚರಣೆಯಲ್ಲಿದ್ದು, ನವೆಂಬರ್ 5ರಂದು ದತ್ತಪೀಠದಲ್ಲಿ ವಿಶೇಷ ಹೋಮ-ಹವನ ನಡೆಸಲಿದ್ದಾರೆ. ಈ ಹಿನ್ನೆಲೆ ನವೆಂಬರ್ 4ರಿಂದ 6ರವರೆಗೂ ಚಂದ್ರದ್ರೋಣ ಪವರ್ತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರನ್ನ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧ ವಿಧಿಸಿದೆ.

ಮೂರು ದಿನ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ, ಜಿಲ್ಲೆಯಾದ್ಯಂತ ಹೈ ಅಲರ್ಟ್
ಕೈಮರ‌ ಚೆಕ್ ಪೋಸ್ಟ್
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು

Updated on: Nov 04, 2023 | 9:54 AM

ಚಿಕ್ಕಮಗಳೂರು, ನ.04: ಶ್ರೀರಾಮಸೇನೆ (Sriram Sena) ಕಾರ್ಯಕರ್ತರಿಂದ ದತ್ತಮಾಲಾ (Dattamala) ಅಭಿಯಾನ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪವರ್ತದ ಸಾಲಿನ ಪ್ರವಾಸಿತಾಣಗಳಿಗೆ ಮೂರು ದಿನ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಕೈಮರ‌ ಚೆಕ್ ಪೋಸ್ಟ್ ಬಳಿ ವಾಹನ ತಡೆದು ವಾಪಸ್ ಕಳಿಸಲಾಗುತ್ತಿದೆ. ವೀಕೆಂಡ್ ಹಿನ್ನೆಲೆ ಸಾವಿರಾರು ಪ್ರವಾಸಿಗರು ಪ್ರವಾಸಿತಾಣಗಳಿಗೆ ಪ್ರವಾಸಕ್ಕೆ ಬಂದಿದ್ದಾರೆ. ಸದ್ಯ ನಿರ್ಬಂಧ ಹಿನ್ನೆಲೆ ಪ್ರವಾಸಿಗರನ್ನು ವಾಪಸ್ ಕಳಿಸಲಾಗುತ್ತಿದೆ.

ಕಾಫಿನಾಡಿನ ಇನಾಂ ದತ್ತಾತ್ರೇಯ ಪೀಠದಲ್ಲಿ ಶ್ರೀರಾಮಸೇನೆ ವತಿಯಿಂದ 20ನೇ ವರ್ಷದ ದತ್ತಮಾಲಾ ಅಭಿಯಾನ ನಡೆಯುತ್ತಿದೆ. ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಸಾವಿರಕ್ಕೂ ಹೆಚ್ಚು ದತ್ತ ಭಕ್ತರು ಮಾಲಾಧಾರಿಗಳಾಗಿ, 7 ದಿನಗಳ ಕಾಲ ವ್ರತಾಚರಣೆಯಲ್ಲಿದ್ದು, ನವೆಂಬರ್ 5ರಂದು ದತ್ತಪೀಠದಲ್ಲಿ ವಿಶೇಷ ಹೋಮ-ಹವನ ನಡೆಸಲಿದ್ದಾರೆ. ಈ ವರ್ಷದ ದತ್ತಮಾಲಾ ಅಭಿಯಾನಕ್ಕೆ ನಾಗಸಾಧು ಕೂಡ ಆಗಮಿಸಲಿದ್ದಾರೆ‌. ಹೀಗಾಗಿ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದ್ದು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: ಅ.30ರಿಂದ ರಾಜ್ಯಾದ್ಯಂತ ದತ್ತಮಾಲೆ ಅಭಿಯಾನ; 7 ಪ್ರಮುಖ ಬೇಡಿಕೆ ಮುಂದಿಟ್ಟ ಶ್ರೀರಾಮಸೇನೆ

ದತ್ತಪೀಠ ಸಂಪೂರ್ಣ ಹಿಂದೂಗಳ ಪೀಠ. ಅಲ್ಲಿ ಯಾವ ಬಾಬಾಬುಡನ್ ಇಲ್ಲ. ದತ್ತಪೀಠದಲ್ಲಿ ಯಾವ ಶಾಖಾದ್ರಿಗೂ ಕೆಲಸವಿಲ್ಲ‌. ಶಾಖಾದ್ರಿ ನಾಗೇನಹಳ್ಳಿಗೆ ಹೋಗಿ ಅವರ ಕಾರ್ಯ ಮಾಡಿಕೊಳ್ಳಲಿ. ಶಾಖಾದ್ರಿ ಕುಟುಂಬ ಜಿಂಕೆ-ಚಿರತೆ ಕೇಸಿನಲ್ಲಿ ಸಿಕ್ಕಿಬಿದ್ದಿದ್ದಾರೆ. ದತ್ತಪೀಠದ ಹೆಸರಿನಲ್ಲಿ ಅವ್ಯವಹಾರ ಮಾಡುತ್ತಿದ್ದಾರೆ. ‌ದತ್ತಪೀಠದಲ್ಲಿರುವ ವನ್ಯಸಂಪತ್ತು ಹಾಗೂ ವನ್ಯಜೀವಿಯನ್ನ ಲೂಟಿ ಮಾಡುತ್ತಿದ್ದಾರೆ. ಶಾಖಾದ್ರಿಯಮ್ನ ಹಿಂದೂ ಧರ್ಮಪೀಠದಲ್ಲಿ ಇರಲು ಒಪ್ಪಲು ಸಾಧ್ಯವಿಲ್ಲ. ಶಾಖಾದ್ರಿಯನ್ನ ದತ್ತಪೀಠದಿಂದ ಜಿಲ್ಲಾಡಳಿತ ಹೊರ ಹಾಕುತ್ತೋ ಇಲ್ಲ ಶ್ರೀರಾಮಸೇನೆ ಹಾಕ್ಬೇಕೋ ಎಂದು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಈ ಹಿಂದೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ ಕೂಡ ಆಗಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿನ ದೇವಾಲಯದಲ್ಲಿ ಶಾಖಾದ್ರಿಗೆ ಏನು ಕೆಲಸ ಎಂದು ಶ್ರೀರಾಮಸೇನೆ ಪ್ರಶ್ನಿಸಿದೆ. ದತ್ತಪೀಠದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಬೇಕು. ಪುರುಷರು-ಮಹಿಳೆಯರು ಹಿಂದೂ ಧರ್ಮದ, ಸಂಸ್ಕೃತಿಯ ವಸ್ತ್ರಗಳನ್ನೇ ಧರಿಸಿ ಬರುವಂತೆ ಸರ್ಕಾರ ಕಾನೂನು ರಚಿಸಬೇಕು. ದತ್ತಪೀಠದಲ್ಲಿನ ಗೋರಿಗಳನ್ನ ನಾಗೇನಗಳ್ಳಿಗೆ ಸ್ಥಳಾಂತರಿಸಬೇಕು ಎಂದು ಶ್ರೀರಾಮಸೇನೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಈ ನಡುವೆ ಪೊಲೀಸ್ ಇಲಾಖೆ ಕೂಡ ದತ್ತಪೀಠ ಹಾಗೂ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಹದ್ದಿನ ಕಣ್ಣಿಟ್ಟಿದೆ. ಮುಂಜಾಗೃತ ಕ್ರಮವಾಗಿ ಎಸ್ಪಿ ವಿಕ್ರಂ ಅಮಟೆ ದತ್ತಪೀಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ನವೆಂಬರ್ 4ರಿಂದ 6ರವರೆಗೂ ಚಂದ್ರದ್ರೋಣ ಪವರ್ತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರನ್ನ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧ ವಿಧಿಸಿದೆ.

ಚಿಕ್ಕಮಗಳೂರು ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್