ದತ್ತ ಪೀಠ ಹೋರಾಟಗಾರರ ಮೇಲೆ ಸಮನ್ಸ್ ಜಾರಿ; ಇಂದು ನ್ಯಾಯಾಲಯಕ್ಕೆ ಹಾಜರಾಗಲಿರುವ ಆರೋಪಿಗಳು

ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ದತ್ತ ಪೀಠ ಹೋರಾಟಗಾರರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.

ದತ್ತ ಪೀಠ ಹೋರಾಟಗಾರರ ಮೇಲೆ ಸಮನ್ಸ್ ಜಾರಿ; ಇಂದು ನ್ಯಾಯಾಲಯಕ್ಕೆ ಹಾಜರಾಗಲಿರುವ ಆರೋಪಿಗಳು
ಸಾಂದರ್ಭಿಕ ಚಿತ್ರ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು

Updated on: Jan 08, 2024 | 7:51 AM

ಚಿಕ್ಕಮಗಳೂರು, ಜ.08: ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ (Baba Budangiri Dargah) 7 ವರ್ಷಗಳ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದತ್ತಜಯಂತಿಯ (Datta Jayanti) ವೇಳೆ ನಡೆದಿದ್ದ ಘಟನೆಗಳು ಇದೀಗ ರಾಜಕೀಯ ಅಸ್ತ್ರಗಳಾಗಿವೆ. ಗೋರಿ ಧ್ವಂಸ ಮಾಡಿದ್ದ 14 ಹಿಂದೂ ಕಾರ್ಯಕರ್ತರ ಮೇಲಿನ ಕೇಸ್​ಗೆ ಚಾರ್ಜ್ ಶೀಟ್ ಸಲ್ಲಿಸಲು ಸರ್ಕಾರ ಅನುಮತಿ ನೀಡಿ ಸಮನ್ಸ್ ಜಾರಿ ಮಾಡಿದೆ. ದತ್ತ ಪೀಠ ಹೋರಾಟಗಾರರ ಮೇಲೆ ಸಮನ್ಸ್ ಜಾರಿ ಹಿನ್ನಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.

ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್ ಮಹೇಂದ್ರ, ಸಂದೀಪ್, ರಾಮು ಸೇರಿದಂತೆ 14 ಆರೋಪಿಗಳು ಡಿ.8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.

ಘಟನೆ ಹಿನ್ನೆಲೆ

ಕಾಫಿನಾಡು ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ 7 ವರ್ಷಗಳ ಹಿಂದೆ ಅಂದ್ರೆ 2017ರ ಡಿ.03ರಂದು ದತ್ತಜಯಂತಿ ವೇಳೆ ಗಲಾಟೆ ನಡೆಸಿ ಗೋರಿ ಧ್ವಂಸ ಮಾಡಲಾಗಿತ್ತು. ನಿಷೇಧಿತ ಪ್ರದೇಶಕ್ಕೆ ನುಗ್ಗಿದ್ದ ದತ್ತಮಾಲಾಧಾರಿಗಳ ಗುಂಪು ಭಗವದ್ವಜ ಹಾರಿಸಿ ಗೋರಿಗಳನ್ನ ಧ್ವಂಸ ಮಾಡಿತ್ತು. ಇದರಿಂದ ಉದ್ರಿಕ್ತರಾದ ಮತ್ತೊಂದು ಸಮುದಾಯದ ಗುಂಪು ಸಿಕ್ಕ ಸಿಕ್ಕ ಕಡೆ ಕಲ್ಲು ತೂರಾಟ ನಡೆಸಿತ್ತು. ಇದರಿಂದ ಚಿಕ್ಕಮಗಳೂರು ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಯಾಗಿತ್ತು. ಸದ್ಯ ಈ ಘಟನೆ ಸಂಬಂಧ 14 ಆರೋಪಿಗಳ ಮೇಲೆ ಸಮನ್ಸ್ ಜಾರಿ ಮಾಡಲಾಗಿದೆ.

ಇನ್ನು ಮತ್ತೊಂದೆಡೆ ಈ ಗಲಾಟೆ ಆದ ಮೇಳೆ ಕೆಲ ಯುವಕರು ಪೆಟ್ರೋಲ್ ಬಾಂಬ್ ನೊಂದಿಗೆ ದಾಳಿಗೆ ಮುಂದಾಗಿದ್ದರು. ಆಗ ಪೊಲೀಸರು ಯುವಕರನ್ನು ವಶಕ್ಕೆ ಪಡೆದಿದ್ರು. ಇದೆ ವಿಚಾರವನ್ನ ಮುಂದಿಟ್ಟಿರುವ ಶ್ರೀ ರಾಮ ಸೇನೆ ಪೆಟ್ರೋಲ್ ಬಾಂಬ್ ಕೇಸ್ ಎಲ್ಲಿಗೆ ಬಂತು? ಇದರ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಸವಾಲು ಹಾಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ