ದತ್ತಪೀಠದಲ್ಲಿ ಅನಗತ್ಯವಾಗಿ ನಿರ್ಮಾಣ ಮಾಡಿರುವ ಘೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರ ಮಾಡಿ; ಸಚಿವ ಸುನಿಲ್ ಕುಮಾರ್ ಸೂಚನೆ
ದತ್ತಪೀಠ ಕುರಿತು ಹೈಕೋರ್ಟ್ ಆದೇಶ ನೀಡಿದ ಹಿನ್ನೆಲೆ ಸಚಿವ ಸುನಿಲ್ ಕುಮಾರ್ ಇಂದು (ಅ.4) ದತ್ತಪೀಠಕ್ಕೆ ಭೇಟಿ ನೀಡಿದ್ದರು. ಸುನಿಲ್ ಕುಮಾರ್ ಹಿಂದಿನಿಂದಲೂ ದತ್ತಪೀಠ ಹೋರಾಟದಲ್ಲಿ ಭಾಗಿಯಾಗಿದ್ದರು.
ಚಿಕ್ಕಮಗಳೂರು: ದತ್ತಪೀಠದಲ್ಲಿ ಅನಗತ್ಯವಾಗಿ ನಿರ್ಮಾಣ ಮಾಡಿರುವ ಘೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರ ಮಾಡಿ ಅಂತ ಸಚಿವ ಸಚಿವ ಸುನಿಲ್ ಕುಮಾರ್(Sunil Kumar) ಸೂಚಿಸಿದ್ದಾರೆ. ದತ್ತಪೀಠದಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ಮಾಡಿಕೊಡಬೇಕು. ಕೋರ್ಟ್ ನಿರ್ದೇಶನದ ಮೇರೆಗೆ ನಾನು ಸೂಚಿಸುತ್ತೇನೆ ಅಂತ ಐಡಿ ಪೀಠದಲ್ಲಿ ಸಚಿವರು ಹೇಳಿಕೆ ನೀಡಿದ್ದಾರೆ. ದತ್ತಾತ್ರೇಯ ಪೀಠ ಬೇರೆ, ನಾಗೇನಹಳ್ಳಿಯಲ್ಲಿರುವ ಬಾಬಾಬುಡನ್ ದರ್ಗಾ ಬೇರೆ. ಈ ವಿಚಾರ ದಾಖಲೆಗಳಲ್ಲಿ ಸಾಬೀತಾಗಿದೆ. ದತ್ತಪೀಠದಲ್ಲಿ ಹಿಂದುಗಳ ಮೂಲಕವೇ ಪೂಜೆಯಾಗಬೇಕು ಎಂಬ ನಿರ್ದೇಶನ ಕೊಟ್ಟಿದೆ. ಮುಸಲ್ಮಾನರು ಕಣ್ಣು ತೆರೆದು ನೋಡಬೇಕು. ನಿಮ್ಮ ನಾಗೇನಹಳ್ಳಿಯ ದರ್ಗಾವನ್ನು ನೀವು ಅಭಿವೃದ್ಧಿ ಮಾಡಿ ಅಂತ ಸುನಿಲ್ ಕುಮಾರ್ ಹೇಳಿದರು.
ದತ್ತಪೀಠ ಕುರಿತು ಹೈಕೋರ್ಟ್ ಆದೇಶ ನೀಡಿದ ಹಿನ್ನೆಲೆ ಸಚಿವ ಸುನಿಲ್ ಕುಮಾರ್ ಇಂದು (ಅ.4) ದತ್ತಪೀಠಕ್ಕೆ ಭೇಟಿ ನೀಡಿದ್ದರು. ಸುನಿಲ್ ಕುಮಾರ್ ಹಿಂದಿನಿಂದಲೂ ದತ್ತಪೀಠ ಹೋರಾಟದಲ್ಲಿ ಭಾಗಿಯಾಗಿದ್ದರು. ಹಿಂದೂ ಅರ್ಚಕರನ್ನು ನೇಮಕ ಮಾಡುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿದ್ದವು. ಸದ್ಯ ಹೊಸ ತೀರ್ಮಾನವನ್ನು ತೆಗೆದುಕೊಳ್ಳುವ ಅಧಿಕಾರವನ್ನು ಕೋರ್ಟ್ ಸರ್ಕಾರಕ್ಕೆ ಬಿಟ್ಟಿದೆ.
ದತ್ತಪೀಠಕ್ಕೆ ಭೇಟಿ ಕೊಟ್ಟ ಬಳಿಕ ಪ್ರತಿಕ್ರಿಯಿಸಿದ ಸುನೀಲ್ ಕುಮಾರ್, ದತ್ತಪೀಠದ ಹೋರಾಟದ ಮೂಲಕವೇ ನಾನು ಗುರುತಿಸಿಕೊಂಡಿದ್ದೇನೆ. ಹೈಕೋರ್ಟ್ ಹಿಂದೂಗಳ ಭಾವನೆಗಳಿಗೆ ಪರವಾದ ತೀರ್ಪನ್ನು ಕೊಟ್ಟಿದೆ. ನಾನು ಮಂತ್ರಿಯಾದ ಸಂದರ್ಭದಲ್ಲಿ ಈ ತೀರ್ಪು ನೀಡಿರುವುದು ನನ್ನ ಜೀವನದ ಯೋಗ. ಈ ಹಿನ್ನೆಲೆಯಲ್ಲಿ ಅತ್ಯಂತ ಸಂತೋಷದಿಂದ ದತ್ತಾತ್ರೇಯನ ದರ್ಶನ ಮಾಡಿದ್ದೇನೆ ಎಂದು ಅಭಿಪ್ರಾಯಪಟ್ಟರು.
ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ಹಿಂದೂಗಳ ವಿರುದ್ಧದ ನಿರ್ಣಯ ತೆಗೆದುಕೊಂಡಿತು. ಮುಜಾವರ್ ನೇಮಕ ಮಾಡಿ ಹಿಂದೂ ವಿರೋಧಿಯಾಗಿ ನಡೆದುಕೊಂಡಿತು. ಈಗ ನ್ಯಾಯಾಲಯ ನಮ್ಮ ಪರವಾದ ತೀರ್ಪನ್ನು ನೀಡಿದೆ. ದತ್ತಪೀಠದಲ್ಲಿ ಮುಜಾವರ್ ಪೂಜೆ ಮಾಡೋದಲ್ಲ, ಹಿಂದೂ ಅರ್ಚಕರು ಪೂಜೆ ಮಾಡಬೇಕೆಂದು ಕೋರ್ಟ್ ಹೇಳಿದೆ. ಹಿಂದೂಗಳ ಭಾವನೆಗಳ ಪರವಾಗಿ ನಮ್ಮ ಸರ್ಕಾರ ನಿಲ್ಲುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ
ಬಾಬಾಬುಡನ್ಗಿರಿ ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ: ಹೈಕೋರ್ಟ್ ನಿರ್ದೇಶನ ಸ್ವಾಗತಿಸಿದ ಸುನಿಲ್ಕುಮಾರ್
ಮೈಸೂರಿನಲ್ಲಿ ಬೋನಿಗೆ ಬಿತ್ತು ಹೆಣ್ಣು ಚಿರತೆ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ