ವಿವಾಹಿತ ಗ್ರಾಮ ಲೆಕ್ಕಿಗನೊಂದಿಗೆ ತಹಶೀಲ್ದಾರ್ ಮದುವೆ; ಚಿಕ್ಕಮಗಳೂರು ಡಿಸಿಯಿಂದ ಗೀತಾಗೆ ನೋಟಿಸ್

ಈಗಾಗಲೇ ಕಡೂರು ಮೂಲದ ಶಿಕ್ಷಕಿಯನ್ನು ಮದುವೆಯಾಗಿರುವ ಶ್ರೀನಿಧಿ, ವಿಚ್ಚೇದನ ಪಡೆದುಕೊಳ್ಳುವ ಮುನ್ನವೇ ತಹಶೀಲ್ದಾರ್ ಜೊತೆ ವಿವಾಹವಾಗಿದ್ದಾನೆ. ಹೀಗಾಗಿ ತಹಶೀಲ್ದಾರ್ ಗೀತಾಗೆ ಚಿಕ್ಕಮಗಳೂರು ಡಿಸಿ ನೋಟಿಸ್ ನೀಡಿದ್ದಾರೆ.

ವಿವಾಹಿತ ಗ್ರಾಮ ಲೆಕ್ಕಿಗನೊಂದಿಗೆ ತಹಶೀಲ್ದಾರ್ ಮದುವೆ; ಚಿಕ್ಕಮಗಳೂರು ಡಿಸಿಯಿಂದ ಗೀತಾಗೆ ನೋಟಿಸ್
ತಹಶೀಲ್ದಾರ್ ಗೀತಾ ಹಾಗೂ ಗ್ರಾಮ ಲೆಕ್ಕಿಗ ಶ್ರೀನಿಧಿ
Follow us
TV9 Web
| Updated By: preethi shettigar

Updated on:Sep 21, 2021 | 1:20 PM

ಚಿಕ್ಕಮಗಳೂರು: ವಿವಾಹಿತ ಗ್ರಾಮ ಲೆಕ್ಕಿಗನೊಂದಿಗೆ ತಹಶೀಲ್ದಾರ್ ಮದುವೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ಪಟ್ಟಣದಲ್ಲಿ ನಡೆದಿದೆ. ಕಾನೂನನ್ನು ಗಾಳಿಗೆ ತೂರಿದ ಎನ್.ಆರ್ ಪುರ ತಹಶೀಲ್ದಾರ್ ಗೀತಾ, ಗ್ರಾಮ ಲೆಕ್ಕಿಗ ಶ್ರೀನಿಧಿ ಎಂಬುವವರನ್ನು ಮದುವೆಯಾಗಿದ್ದಾರೆ.

ಈಗಾಗಲೇ ಕಡೂರು ಮೂಲದ ಶಿಕ್ಷಕಿಯನ್ನು ಮದುವೆಯಾಗಿರುವ ಶ್ರೀನಿಧಿ, ವಿಚ್ಚೇದನ ಪಡೆದುಕೊಳ್ಳುವ ಮುನ್ನವೇ ತಹಶೀಲ್ದಾರ್ ಜೊತೆ ವಿವಾಹವಾಗಿದ್ದಾನೆ. ಹೀಗಾಗಿ ತಹಶೀಲ್ದಾರ್ ಗೀತಾಗೆ ಚಿಕ್ಕಮಗಳೂರು ಡಿಸಿ ನೋಟಿಸ್ ನೀಡಿದ್ದಾರೆ.

ಜುಲೈ 19ರಂದು ಎನ್.ಆರ್ ಪುರದಲ್ಲಿ ತಹಶೀಲ್ದಾರ್ ಗೀತಾ ಹಾಗೂ ಗ್ರಾಮ ಲೆಕ್ಕಿಗ ಶ್ರೀನಿಧಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ. ಈ ಹಿಂದೆ ಮದುವೆಯಾಗಿ, ತಹಶೀಲ್ದಾರ್ ಗೀತಾ ವಿಚ್ಛೇದನ ಪಡೆದಿದ್ದಾರೆ. ಆದರೂ ಶ್ರೀನಿಧಿ ಜೊತೆ ಮದುವೆ ವೇಳೆ ಅವಿವಾಹಿತೆ ಎಂದು ಗೀತಾ ತೋರಿಸಿರುವುದು ಕೂಡ ಈ ವೇಳೆ ಬೆಳಕಿಗೆ ಬಂದಿದೆ.

marriage

ಚಿಕ್ಕಮಗಳೂರು ಡಿಸಿಯಿಂದ ಗೀತಾಗೆ ನೋಟಿಸ್

ಬೆಂಗಳೂರು: ಸರ್ಕಾರಿ ಕಚೇರಿಗೆ ನುಗ್ಗಿ ಕೊಲೆ ಬೆದರಿಕೆ ಸರ್ಕಾರಿ ಕಚೇರಿಗೆ ನುಗ್ಗಿ ಕೆಎಎಸ್ ಅಧಿಕಾರಿಗೆ ದುಷ್ಕರ್ಮಿಗಳು ಕೊಲೆ ಬೆದರಿಕೆ ಒಡ್ಡಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಕೊಲೆ ಬೆದರಿಕೆ ಹಾಕಿದ್ದ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಟಿ. ಕುಮಾರ್, ಇತರರ ವಿರುದ್ಧ ಬಿ.ಕೆ. ನಾಗರಾಜಪ್ಪ ದೂರು ನೀಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆಗೆ ದೂರು ಸಲ್ಲಿಕೆ ಮಾಡಲಾಗಿದೆ.

ಹಾವೇರಿ: ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಬಸವಣ್ಣನ ಮೂರ್ತಿ ತೆರವು ರಾತ್ರೋರಾತ್ರಿ ಪ್ರತಿಷ್ಠಾಪನೆ ಆಗಿದ್ದ ಬಸವಣ್ಣನ ಮೂರ್ತಿಯನ್ನು ತೆರವುಗೊಳಿಸಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪ್ರಮುಖ ವೃತ್ತದಲ್ಲಿ ಪ್ರತಿಷ್ಠಾಪನೆಗೊಂಡಿದ್ದ ಬಸವಣ್ಣನ ಮೂರ್ತಿಯನ್ನು ಅಧಿಕಾರಿಗಳು ತೆರವು ಮಾಡಿಸಿದ್ದಾರೆ. ರಾಜಕೀಯ ನಾಯಕರ ಮೂರ್ತಿ ಪ್ರತಿಷ್ಠಾಪನೆಗೆ ಗ್ರಾಮದಲ್ಲಿ ಯೋಜನೆ ರೂಪಿಸಿದ್ದಾರೆ ಎಂದುಕೊಂಡು ಗ್ರಾಮದ ಕೆಲವರು ಬಸವಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನಂತರ ಮೂರ್ತಿ ತೆರವು ಕಾರ್ಯ ನಡೆದಿದೆ. ಸರಕಾರದ ಅನುಮತಿ ಪಡೆದು ಗೌರವಯುತವಾಗಿ ಮೂರ್ತಿ ಪ್ರತಿಷ್ಠಾಪನೆ ಮಾಡೋಣ ಎಂದು ತಿಳಿ ಹೇಳಿ ಅಧಿಕಾರಿಗಳು ಮೂರ್ತಿ ತೆರವು ಮಾಡಿಸಿದ್ದಾರೆ. ಮೊನ್ನೆ ರಾತ್ರಿ ಪ್ರತಿಷ್ಠಾಪನೆ ಆಗಿದ್ದ ಮೂರ್ತಿಯನ್ನು, ನಿನ್ನೆ ರಾತ್ರಿ ತೆರವು ಮಾಡಿಸಲಾಗಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇದನ್ನೂ ಓದಿ: ಕೇರಳದ ರಹಸ್ಯ ಪ್ರೇಮಿಗಳ ವಿವಾಹ; 10 ವರ್ಷದ ನಿಗೂಢ ಪ್ರೀತಿಗೆ ಸಿಕ್ತು ಅಧಿಕೃತ ಮುದ್ರೆ

ಲಾಕ್​ಡೌನ್​ನಲ್ಲಿ ಕೆಲಸ ಕಳೆದುಕೊಂಡ ಗಂಡ ವಿಟಪುರುಷನಾದ; ನೊಂದ ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ

Published On - 12:36 pm, Tue, 21 September 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ