AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮಳೆಗೆ ಮುಳುಗಿದ ಸ್ಮಶಾನ: ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲದೆ 2 ದಿನ ಮನೆಯಲ್ಲೇ ಉಳಿದ ಮೃತದೇಹ

ಕಡೂರು ತಾಲೂಕಿನ ಚಿಕ್ಕ ದೇವನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್. ಬೊಮ್ಮನಹಳ್ಳಿಯಲ್ಲಿ ಬಹಳ ವರ್ಷಗಳ ನಂತರ ದೇವನೂರು ಕೆರೆ ತುಂಬಿದ್ದು, ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿತ್ತು.

ಭಾರಿ ಮಳೆಗೆ ಮುಳುಗಿದ ಸ್ಮಶಾನ: ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲದೆ 2 ದಿನ ಮನೆಯಲ್ಲೇ ಉಳಿದ ಮೃತದೇಹ
ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲದೆ ಪರದಾಡಿದ ಗ್ರಾಮಸ್ಥರು.
TV9 Web
| Edited By: |

Updated on:Sep 07, 2022 | 11:47 AM

Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ (Rain) ಅವಾಂತರಗಳು ಸೃಷ್ಟಿಯಾಗಿದ್ದು, ಮೃತವ್ಯಕ್ತಿಯ ಶವವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ದಾರಿ ಇಲ್ಲದೆ ಎರಡು ದಿನಗಳ ಕಾಲ ಮನೆಯಲ್ಲೇ ಇಟ್ಟುಕೊಂಡಿರುವಂತಹ ಘಟನೆ ಜಿಲ್ಲೆಯ ಕಡೂರು ತಾಲೂಕಿನ ದೇವನೂರು ಸಮೀಪದ ಎಸ್.ಬೊಮ್ಮೇನಹಳ್ಳಿಯಲ್ಲಿ ನಡೆದಿದೆ. ಪ್ರಮೋದ್(55) ಮೃತಪಟ್ಟಿರುವ ವ್ಯಕ್ತಿ. ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ದಾರಿ ಇಲ್ಲದೆ ಜನ ಪರದಾಡಿದ್ದು, ಎರಡು ದಿನಗಳ ಬಳಿಕ ಅಂತ್ಯಸಂಸ್ಕಾರ ಮಾಡಿದ್ದಾರೆ. ಕಡೂರು ತಾಲೂಕಿನ ಚಿಕ್ಕ ದೇವನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್. ಬೊಮ್ಮನಹಳ್ಳಿಯಲ್ಲಿ ಬಹಳ ವರ್ಷಗಳ ನಂತರ ದೇವನೂರು ಕೆರೆ ತುಂಬಿದ್ದು, ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿತ್ತು. ಹೀಗಾಗಿ ಈ ಗ್ರಾಮದಿಂದ ಸ್ಮಶಾನಕ್ಕೆ ಹೋಗುವ ದಾರಿ ಕೂಡ ನೀರಿನಿಂದ ಜಲಾವೃತವಾಗಿದ್ದು, ಮೃತದೇಹ ಕೊಂಡೊಯ್ಯಲು ಸಾಧ್ಯವಾಗದಿರುವುದರಿಂದ ಎರಡು ದಿನಗಳ ಕಾಲ ಶವವಿಟ್ಟು ಕಾದಿದ್ದಾರೆ.

ಎರಡು ದಿನದ ಬಳಿಕ ನೀರು ಸ್ವಲ್ಪ ಕಡಿಮೆಯಾದ ನಂತರ ನೀರಲ್ಲೇ ಶವವನ್ನು ಸ್ಮಶಾನಕ್ಕೆ ಗ್ರಾಮಸ್ಥರು ತೆಗೆದುಕೊಂಡು ಹೋಗಿದ್ದಾರೆ. ದೇವರು ವರ ಕೊಟ್ಟರು, ಪೂಜಾರಿ ವರ ಕೊಡಲಿಲ್ಲ ಎನ್ನುವ ಹಾಗೆ, ವಶ ಹೊಳಲು ಗುಂಡಿ ತೆಗೆದರೂ ಬರೀ ನೀರೇ ಬಂದಿದ್ದು, ಹೀಗಾಗಿ ಶವಸಂಸ್ಕಾರ ಮಾಡಲು ಗ್ರಾಮಸ್ಥರು ಪರದಾಡಿದ್ದಾರೆ. ಬಳಿಕ ಸ್ವಲ್ಪ ಎತ್ತರದ ಭಾಗದಲ್ಲಿ ಗುಂಡಿ ತೆಗೆದು ಅಲ್ಲಿ ಮೃತರ ಅಂತ್ಯಕ್ರಿಯೆ ಮಾಡಲಾಗಿದೆ.

ಇದನ್ನೂ ಓದಿ: Chikmagalur: ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್​ ಪ್ರವಹಿಸಿ ಮೂವರು ಸಾವು: 6 ಜನರಿಗೆ ಗಾಯ, ಸ್ಥಳೀಯ ಆಸ್ಪತ್ರೆಗೆ ಶಿಫ್ಟ್

ಈ ಸಮಸ್ಯೆ ಇಂದು-ನಿನ್ನೆಯದ್ದಲ್ಲ. ಕಳೆದ ಸುಮಾರು ವರ್ಷಗಳಿಂದಲೂ ಇದೇ ಸಮಸ್ಯೆ ಇದ್ದು, ಜನಪ್ರತಿನಿಧಿಗಳ ಬಳಿ ಹಲವು ಬಾರಿ ಈ ಸಮಸ್ಯೆ ಬಗ್ಗೆ ಹೇಳಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಬೆಸತ್ತು ಸ್ಥಳೀಯರು ಆಕ್ರೋಶ ಹೊರಹಾಕಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:45 am, Wed, 7 September 22