ರಾಜ್ಯದಲ್ಲೇ ಅತಿ ಹೆಚ್ಚು ಸರ್ಕಾರಿ ಭೂಮಿ ಕಬಳಿಕೆ ಚಿಕ್ಕಮಗಳೂರಿನಲ್ಲಿ! 15 ತಹಶಿಲ್ದಾರ್ಗಳ ನೇತೃತ್ವದಲ್ಲಿ ತನಿಖೆ ಆರಂಭ
Chikkamagalur government land: ರಾಜ್ಯದ ಅತಿದೊಡ್ಡ ಭೂ ಹಗರಣದ ತನಿಖೆ ಇಂದು ಗುರುವಾರದಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರಂಭವಾಗಿದೆ. 15 ತಹಶಿಲ್ದಾರ್ಗಳ ನೇತೃತ್ವದಲ್ಲಿ ಮೊದಲ ಹಂತದಲ್ಲಿ ಕಡೂರು, ಮೂಡಿಗೆರೆ ತಾಲೂಕಿನಾದ್ಯಂತ ತನಿಖೆ ನಡೆಯಲಿದೆ. ಇದರಿಂದ ರಾಜಕಾರಣಿಗಳು, ಪ್ರಭಾವಿ ವ್ಯಕ್ತಿಗಳು, ಭ್ರಷ್ಟ ಅಧಿಕಾರಿಗಳಿಗೆ ಟೆನ್ಶನ್ ಶುರುವಾಗಿದೆ.
ಚಿಕ್ಕಮಗಳೂರು, ಆಗಸ್ಟ್ 10: ರಾಜ್ಯದ ಅತಿದೊಡ್ಡ ಭೂ ಹಗರಣದ ತನಿಖೆ (Tehsildar) ಇಂದು ಗುರುವಾರದಿಂದ ಆರಂಭವಾಗಿದೆ. ಸಾವಿರಾರು ಕೋಟಿ ಭೂ ಹಗರಣದ ತನಿಖೆಗೆ ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರದ ಆದೇಶ ಹೊರಡಿಸಿದೆ. ರಾಜ್ಯದಲ್ಲೇ ಅತಿ ಹೆಚ್ಚು ಸರ್ಕಾರಿ ಭೂಮಿ (government land) ಕಬಳಿಕೆ ಚಿಕ್ಕಮಗಳೂರಿನಲ್ಲಿ (Chikkamagalur) ನಡೆದಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ತನಿಖೆ (Investigation) ಕೈಗೆತ್ತಿಕೊಳ್ಳಲಾಗಿದೆ. ಸರ್ಕಾರಿ ಭೂಮಿ ಒತ್ತುವರಿ , ಅಕ್ರಮ ಭೂಮಂಜೂರಾತಿ ಕುರಿತು ತನಿಖೆ ನಡೆಯಲಿದೆ. ಇದರಿಂದ ರಾಜಕಾರಣಿಗಳು, ಪ್ರಭಾವಿ ವ್ಯಕ್ತಿಗಳು, ಭ್ರಷ್ಟ ಅಧಿಕಾರಿಗಳಿಗೆ ಟೆನ್ಶನ್ ಶುರುವಾಗಿದೆ (Chikkamagalur revenue land encroachment).
ಇಂದಿನಿಂದ ಚಿಕ್ಕಮಗಳೂರಿನಲ್ಲಿ ಈ ಬೃಹತ್ ಭೂ ಹಗರಣದ ತನಿಖೆ 15 ತಹಶಿಲ್ದಾರ್ಗಳ ನೇತೃತ್ವದಲ್ಲಿ ನಡೆಯಲಿದೆ. ಮೊದಲ ಹಂತವಾಗಿ ಕಡೂರು, ಮೂಡಿಗೆರೆ ತಾಲೂಕಿನಾದ್ಯಂತ ಭೂ ಅಕ್ರಮದ ಬಗ್ಗೆ ತನಿಖೆ ನಡೆಯಲಿದೆ.
ಭೂ ಹಗರಣದ ತನಿಖೆಗೆ ಸರ್ಕಾರ 15 ತಹಶಿಲ್ದಾರ್ ನೇತೃತ್ವದಲ್ಲಿ ತಂಡ ರಚನೆ ಮಾಡಿದೆ. ಭೂ ಅಕ್ರಮದ ತನಿಖೆಗೆ ತಹಶಿಲ್ದಾರ್ ಗ್ರೇಡ್ 1, ಗ್ರೇಡ್ 2 ತಹಶಿಲ್ದಾರ್ ಗಳ ತಂಡ ರಚನೆಗೊಂಡಿದೆ. ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆಯಾಗಿದೆ ಎಂಬುದು ಗಂಭೀರ ಆರೋಪ. ಜಿಲ್ಲೆಯಾದ್ಯಂತ ಎರಡು ಲಕ್ಷಕ್ಕೂ ಅಧಿಕ ಸರ್ಕಾರಿ ಭೂಮಿಯಲ್ಲಿ ಅಕ್ರಮಗಳು ನಡೆದಿವೆ. ಸರ್ಕಾರಿ ಶಾಲೆ, ಆಸ್ಪತ್ರೆ ಸೇರಿದಂತೆ ಸರ್ಕಾರಿ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರಿ ಭೂಮಿ ಕೊರತೆಯಾಗಿದೆ.
ಇದನ್ನೂ ಓದಿ: ಸರಕಾರಿ ಜಮೀನನ್ನು ಖಾಸಗಿಗೆ ಪರಭಾರೆ ಮಾಡಿದ್ದ ಸಹಕಾರಿ ಸಂಸ್ಥೆ! ಗನ್ ಇಟ್ಟು ಬೆದರಿಕೆ! ಆದರೂ ಸ್ವಾಧೀನಪಡಿಸಿಕೊಂಡ ಜಿಲ್ಲಾಡಳಿತ
ರಾಜಕಾರಣಿ, ಪ್ರಭಾವಿ ವ್ಯಕ್ತಿಗಳು, ಭ್ರಷ್ಟ ಅಧಿಕಾರಿಗಳಿಗೆ ಟೆನ್ಶನ್ ಶುರುವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಡಿಗೆರೆ ತಾಲೂಕು ಭಾಗಗಳಿಗೆ ಸೇರಿದ ಅಧಿಕಾರಿಗಳು ಸಾವಿರಾರು ಕೋಟಿ ಭೂ ಮಂಜೂರಾತಿ ಅಕ್ರಮದಲ್ಲಿ ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಇದರೊಂದಿಗೆ ಕಂದಾಯ ಇಲಾಖೆಯಲ್ಲಿ ನಡೆದಿರುವ ಅತಿದೊಡ್ಡ ಅಕ್ರಮದ ಬಗ್ಗೆ ತನಿಖೆ ಆರಂಭವಾಗಿದೆ.
ಚಿಕ್ಕಮಗಳೂರು ಜಿಲ್ಲಾ ನೋಡಲ್ ಕಾರ್ಯದರ್ಶಿ ಹೇಳುವುದೇನು?
ಜಿಲ್ಲೆಯಾದ್ಯಂತ ಎರಡು ಲಕ್ಷ ಎಕರೆಗೂ ಹೆಚ್ಚು ಸರಕಾರಿ ಭೂಮಿ ಒತ್ತುವರಿಯಾಗಿದೆ ಎಂದು ಜಿಲ್ಲಾ ನೋಡಲ್ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ ಹೇಳಿದ್ದಾರೆ. ಸಾಗುವಳಿ ಮಾಡಲು ಗೋಮಾಳ ಜಮೀನು ಮಂಜೂರು ಮಾಡಲು ಯಾವುದೇ ಅಧಿಕಾರಿಗಳಿಗೆ ಅಧಿಕಾರವಿಲ್ಲ, ಮಂಜೂರು ಮಾಡಿದರೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. 2002ಕ್ಕಿಂತ ಮೊದಲು ಯಾರಾದರೂ ಗೋಮಾಳದ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದರೆ ಅದನ್ನು ಮಂಜೂರು ಮಾಡಬಹುದು. ಆದರೆ, ಖಾಸಗಿಯವರಿಗೆ ಗೋಮಾಳ ಭೂಮಿ ಮಂಜೂರು ಮಾಡುವಂತಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಕಟಾರಿಯಾ ಅವರು, ನಿಯಮಾವಳಿ ಉಲ್ಲಂಘಿಸಿ ಅಕ್ರಮವಾಗಿ ಭೂಮಿ ಮಂಜೂರು ಮಾಡಿರುವ 48 ಪ್ರಕರಣಗಳಿದ್ದು, ಒಂಬತ್ತು ತಹಶೀಲ್ದಾರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅಧಿಕಾರಿಗಳು ತಪ್ಪಿತಸ್ಥರೆಂದು ಕಂಡುಬಂದರೆ ಅವರನ್ನು ಜೈಲಿಗೆ ಹಾಕಲಾಗುವುದು ಎಂದು ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:40 am, Thu, 10 August 23