AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 22ರಿಂದ 27ರವರೆಗೆ ಚಿಕ್ಕಮಗಳೂರಿನ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ

Chikkamagaluru Tourist spots: ಡಿಸೆಂಬರ್ 26ಕ್ಕೆ 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಡಿಸೆಂಬರ್ 22ರಿಂದ 27ರವರೆಗೆ ಚಿಕ್ಕಮಗಳೂರಿನ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ
ಡಿಸೆಂಬರ್ 22ರಿಂದ 27ರವರೆಗೆ ಚಿಕ್ಕಮಗಳೂರಿನ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Ganapathi Sharma|

Updated on:Dec 14, 2023 | 9:41 AM

Share

ಚಿಕ್ಕಮಗಳೂರು, ಡಿಸೆಂಬರ್ 14: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ (Baba Budan giri) ದರ್ಗಾ, ದತ್ತಪೀಠದಲ್ಲಿ ಡಿಸೆಂಬರ್​ 24, 25 ಮತ್ತು 26ರಂದು ದತ್ತಜಯಂತಿ ನಡೆಯಲಿರುವ ಕಾರಣ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ (Chikkamagaluru Tourist spots) ನಿರ್ಬಂಧ ಹೇರಲಾಗಿದೆ. 6 ದಿನ ಚಂದ್ರದ್ರೋಣ ಪರ್ವತ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಡಿಸೆಂಬರ್ 22ರಿಂದ 27ರವರೆಗೆ ಪ್ರವಾಸಿ ತಾಣಗಳಿಗೆ ನಿರ್ಬಂಧ ಇರಲಿದೆ.

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಡಿಸೆಂಬರ್ 26ಕ್ಕೆ 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಡಿಸೆಂಬರ್ 23, 24 ವಾರಾಂತ್ಯ ಇದೆ. 25ರಂದು ಸೋಮವಾರ ಕ್ರಿಸ್ಮಸ್ ಪ್ರಯುಕ್ತ ಸಾರ್ವಜನಿಕ ರಜೆ ಇದೆ. ಹೀಗಾಗಿ ಈ ಸಂದರ್ಭದಲ್ಲಿ ಅನೇಕರು ಪ್ರವಾಸಕ್ಕೆ ಪ್ಲ್ಯಾನ್ ಮಾಡಿರುವ ಸಾಧ್ಯತೆ ಇದ್ದು, ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಯೋಚಿಸಿರುವ ಸಾಧ್ಯತೆಯೂ ಇದೆ. ಹೀಗಾಗಿ ಜಿಲ್ಲಾಡಳಿತ ಮುಂಚಿತವಾಗಿಯೇ ಮಾಹಿತಿ ನೀಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಇದೇ ಮೊದಲ ಬಾರಿಗೆ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹುಣ್ಣಿಮೆ ಪೂಜೆ

ಈ ಮಧ್ಯೆ, ವಿವಾದದಿಂದಲೇ ಸದ್ದು ಮಾಡಿರುವ ದತ್ತಜಯಂತಿ ಕಾರ್ಯಕ್ರಮ ನಡೆಯುವ ದತ್ತಪೀಠದಲ್ಲಿ ಇತ್ತೀಚೆಗೆ ನಡೆದ ಹುಣ್ಣಿಮೆ ಪೂಜೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:39 am, Thu, 14 December 23