ಚಿಕ್ಕಮಗಳೂರು: ಪರಿಷತ್ ಚುನಾವಣೆಯಲ್ಲಿ ಪ್ರಾಣೇಶ್ಗೆ ಪ್ರಯಾಸದ ಗೆಲುವು ಹಿನ್ನೆಲೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದವರಿಗೆ ಗೇಟ್ ಪಾಸ್ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಘಟಕದ ಉಪಾಧ್ಯಕ್ಷ ನಿರಂಜನ್, ರೈತ ಮೋರ್ಚಾ ಕಾರ್ಯದರ್ಶಿ ಪೂರ್ಣೇಶ್ ಮೈಲಿಮನೆ, ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯದರ್ಶಿ ಗಿರೀಶ್ಗೆ ಜವಾಬ್ದಾರಿಯಿಂದ ಮುಕ್ತಿಗೊಳಿಸಿ ವಜಾಗೊಳಿಸಲಾಗಿದೆ.
ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ ಕೆ ಪ್ರಾಣೇಶ್ಗೆ ಪ್ರಯಾಸದ ಗೆಲುವು ಸಿಕ್ಕಿದೆ. ಇವರು ಕೇವಲ 3 ಮತಗಳ ಅಂತರದಿಂದ ಗೆದ್ದಿದ್ದಾರೆ. ಆದರೆ 500 ಮತಗಳ ಅಂತರದಿಂದ ಜಯ ಸಾಧಿಸುವುದಾಗಿ ಬಿಜೆಪಿಯ ಕೆಲವರು ಹೇಳಿಕೊಂಡಿದ್ದಾರೆ. ಚುನಾವಣೆಯಲ್ಲಿ ಎಂ ಕೆ ಪ್ರಾಣೇಶ್ ವಿರುದ್ಧ ಅಪಪ್ರಚಾರ ಮಾಡುವ ಮೂಲಕ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಮೂವರನ್ನ ಜವಾಬ್ದಾರಿಯಿಂದ ಮುಕ್ತಿಗೊಳಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಆದೇಶ ಹೊರಡಿಸಿದ್ದಾರೆ.
ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ
ಈ ಬಾರಿ ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಎಂಕೆ ಪ್ರಾಣೇಶ್ ಸ್ಪರ್ಧಿಸಿ ಗೆದ್ದಿದ್ದಾರೆ. ಇವರಿಗೆ ಟಿಕೆಟ್ ಖಾತ್ರಿ ಮಾಡಿಕೊಂಡರೂ ಗೆಲುವು ಮಾತ್ರ ಅವರು ಅಂದುಕೊಂಡಷ್ಟು ಸುಲಭವಾಗಿರಲಿಲ್ಲ. ಈ ಮಧ್ಯೆ ರಣೋತ್ಸಾಹ ತೋರಿದ್ದ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡರ ಛಲ ಕಮಲ ಪಡೆಯನ್ನು ಚಕಿತಗೊಳಿಸಿದ್ದು ಸುಳ್ಳಲ್ಲ. ತೀವ್ರ ಕುತೂಹಲ ಕೆರಳಿಸಿದ್ದ ಮತ ಎಣಿಕೆಯಲ್ಲಿ ಇಬ್ಬರ ನಡುವೆ ಆರಂಭದಿಂದಲೂ ಜಿದ್ದಾಜಿದ್ದಿ ಸ್ಪರ್ಧೆ ನಡೆಯುತ್ತಿತ್ತು. ಈ ಬಗ್ಗೆ ಕಳೆದ ಡಿ 6ರಂದು ಟಿವಿ9 ಜಾಲತಾಣವು ವಿಶ್ಲೇಷಣೆ ಪ್ರಕಟಿಸಿ, ಕಾಫಿನಾಡಿನಲ್ಲಿ ಸಮಬಲದ ಹೋರಾಟ ನಡೆಯಲಿದೆ ಎಂದು ತಿಳಿಸಿತ್ತು. ಕಳೆದ ಬಾರಿ ಬಿಜೆಪಿ ಅಭ್ಯರ್ಥಿ 315 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರೂ, ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಸಮಬಲದ ಹೋರಾಟ ನಡೆಯಲಿದೆ ಎನ್ನುವುದನ್ನು ಘಂಟಾಘೋಷವಾಗಿ ಖಚಿತಪಡಿಸಿತ್ತು.
ಇದನ್ನೂ ಓದಿ
ಊಟದ ನಂತರ ಒಂದು ಲೋಟ ಮಜ್ಜಿಗೆ ಕುಡಿದು ವಜ್ರಾಸನ ಮಾಡಿ; ದೇಹದಲ್ಲಿನ ಬದಲಾವಣೆ ನಿಮ್ಮನ್ನು ಅಚ್ಚರಿಗೊಳಿಸುತ್ತದೆ