Suicide: ಒಂದೇ ಮನೆಯಲ್ಲಿ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆ

TV9 Digital Desk

| Edited By: Ayesha Banu

Updated on:Sep 06, 2021 | 3:53 PM

ಮಕ್ಕಿಮನೆ ಗ್ರಾಮದಲ್ಲಿ ಅಜ್ಜಿ, ಮಗಳು, ಮೊಮ್ಮಗಳು ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Suicide: ಒಂದೇ ಮನೆಯಲ್ಲಿ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆ
ಒಂದೇ ಮನೆಯಲ್ಲಿ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆ

ಚಿಕ್ಕಮಗಳೂರು: ಒಂದೇ ಮನೆಯಲ್ಲಿ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮಕ್ಕಿಮನೆ ಗ್ರಾಮದಲ್ಲಿ ನಡೆದಿದೆ. ವೀಣಾ(70), ಶಾರದಾ(49), ಶ್ರಾವ್ಯಾ(16) ಆತ್ಮಹತ್ಯೆ ಮಾಡಿಕೊಂಡವರು. ಮಕ್ಕಿಮನೆ ಗ್ರಾಮದಲ್ಲಿ ಅಜ್ಜಿ, ಮಗಳು, ಮೊಮ್ಮಗಳು ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ವೀಣಾ ಶೃಂಗೇರಿಯ ಹೊನ್ನವಳ್ಳಿ ಗ್ರಾಮದ ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಅಂಗನವಾಡಿಗೆ ತೆರಳದ ಹಿನ್ನೆಲೆ ಅಂಗನವಾಡಿ ಸಹಾಯಕಿ ಪೂರ್ಣಿಮ ವೀಣಾಗೆ ಕರೆ ಮಾಡಿದ್ದಾರೆ. ಅವರು ಫೋನ್ ಪಿಕ್ ಮಾಡಿಲ್ಲ. ಆಗ ಪೂರ್ಣಿಮ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ಅವರ ಮನೆ ಬಳಿ ಹೋದಾಗ ಬಾಗಿಲು ಹಾಕಿತ್ತು. ಬಾಗಿಲು ಬಡಿದರೂ ಯಾರೂ ತೆಗೆಯದ ಹಿನ್ನೆಲೆ ಸ್ಥಳೀಯರು ಮನೆಯ ಹೆಂಚು ತೆಗೆದು ನೋಡಿದಾಗ ಮೂವರು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಆದರೆ, ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

chikkamagaluru suicide

ವೀಣಾ(70), ಶಾರದಾ(49), ಶ್ರಾವ್ಯಾ(16)

ಮೂವರು ಸಾವಿಗೆ ಶರಣಾದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಮೃತ ವೀಣಾ ಗಂಡ ಕೆಲಸಕ್ಕೆ ಹೋದಾಗ ಮನೆಯಲ್ಲಿ ಮೂವರೇ ಇದ್ದರು.ವೀಣಾ ಅವರ ಗಂಡ ಸುಧಾಕರ್ ಕೆಲಸಕ್ಕೆ ಹೋಗುತ್ತಿದ್ದಂತೆ ಮನೆಯ ಮೇಲ್ಛಾವಣಿಗೆ ಒಬ್ಬರ ಪಕ್ಕದಲ್ಲಿ ಒಬ್ಬರು ಮೂವರು ನೇಣಿಗೆ ಶರಣಾಗಿದ್ದಾರೆ. ಮೃತ ಶ್ರಾವ್ಯಾ 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಸ್ಥಳಕ್ಕೆ ಶೃಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾವಿಗೆ ಕಾರಣದ ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ:ಕೋಲಾರ: ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಫೇಲ್; ಮನನೊಂದ ಯುವತಿ ಆತ್ಮಹತ್ಯೆಗೆ ಶರಣು 

ಸಿದ್ದಾರ್ಥ್​ ಶುಕ್ಲಾ ಶ್ರದ್ದಾಂಜಲಿ ಸಭೆ: ಅಭಿಮಾನಿಗಳಿಗೂ ಆಹ್ವಾನ ನೀಡಿದ ತಾಯಿ; ಇಲ್ಲಿದೆ ಮೀಟಿಂಗ್​ ಲಿಂಕ್​

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada