Chikmagalur: ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್​ ಪ್ರವಹಿಸಿ ಮೂವರು ಸಾವು: 6 ಜನರಿಗೆ ಗಾಯ, ಸ್ಥಳೀಯ ಆಸ್ಪತ್ರೆಗೆ ಶಿಫ್ಟ್

ಟ್ರ್ಯಾಕ್ಟರ್​​ನಲ್ಲಿದ್ದ ಪೆಂಡಾಲ್​​ಗೆ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಗಾಯಗೊಂಡ 6 ಜನರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಗಾಯಗೊಂಡ ಸಂಗೀತಾ, ಪಲ್ಲವಿ ಹಾಸನಕ್ಕೆ ಶಿಫ್ಟ್​ ಮಾಡಲಾಗಿದೆ.

Chikmagalur: ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್​ ಪ್ರವಹಿಸಿ ಮೂವರು ಸಾವು: 6 ಜನರಿಗೆ ಗಾಯ, ಸ್ಥಳೀಯ ಆಸ್ಪತ್ರೆಗೆ ಶಿಫ್ಟ್
ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್​ ಪ್ರವಹಿಸಿ ಮೂವರು ಸಾವು.
Updated By: ಗಂಗಾಧರ​ ಬ. ಸಾಬೋಜಿ

Updated on: Sep 07, 2022 | 8:05 AM

ಚಿಕ್ಕಮಗಳೂರು: ವಿದ್ಯುತ್​ ಪ್ರವಹಿಸಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ಗಣಪತಿ ವಿಸರ್ಜಿಸಿ ಬರುವಾಗ ದುರಂತ ನಡೆದಿದ್ದು, ರಾಜು(47), ಪಾರ್ವತಿ(35), ರಚನಾ(28) ದುರ್ಮರಣ ಹೊಂದಿದ್ದಾರೆ. ಟ್ರ್ಯಾಕ್ಟರ್​​ನಲ್ಲಿದ್ದ ಪೆಂಡಾಲ್​​ಗೆ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಗಾಯಗೊಂಡ 6 ಜನರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಗಾಯಗೊಂಡ ಸಂಗೀತಾ, ಪಲ್ಲವಿ ಹಾಸನಕ್ಕೆ ಶಿಫ್ಟ್​ ಮಾಡಲಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆಯಿಂದಾಗಿ ಮನೆ ಗೋಡೆ ಕುಸಿದು ಮಹಿಳೆ ಸಾವು

ಬಳ್ಳಾರಿ: ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಕುರಗೋಡು ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ನಡೆದಿದೆ. ಮನೆ ಗೋಡೆ ಕುಸಿದು ಉಮಾದೇವಿ(50) ಸಾವನ್ನಪ್ಪಿದ ಆಶಾ ಕಾರ್ಯಕರ್ತೆ. ಮನೆಯಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದು, ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ನೀವು ಸೈಬರ್​​ ಕ್ರೈಮ್​​ ಸಂತ್ರಸ್ತರಾಗಿದ್ದರೆ ಏನು ಮಾಡಬೇಕು? ದೂರು ನೀಡುವುದು ಹೇಗೆ?

ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಯುವಕನ ಕೊಲೆ

ಯಾದಗಿರಿ: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಯುವಕನನ್ನು ಪತಿ ಕೊಲೆ  ಮಾಡಿರುವ ಘಟನೆ ಯಾದಗಿರಿ  ತಾಲೂಕಿನ ಕಡೇಚೂರ್ ಬಳಿ ನಿನ್ನೆ (ಆ 4) ರಂದು ನಡೆದಿದೆ. ಸಿದ್ದಪ್ಪ(25) ಕೊಲೆಯಾದ ಯುವಕ. ನಾಗರಾಜ್ ಕೊಲೆಗೈದ ಆರೋಪಿ. ಶಹಾಪುರ‌ ತಾಲೂಕಿನ ಬೋಳಾರಿ ನಿವಾಸಿಯಾಗಿರುವ ಸಿದ್ದಪ್ಪ ಮತ್ತು ನಾಗರಾಜ್​ ಪತ್ನಿ ಬೆಂಗಳೂರಿನಲ್ಲಿ ಒಂದೇ ಕಡೆ ಕೆಲಸ ಮಾಡುವಾಗ ಪರಿಚಯವಾಗಿದ್ದರು. ಮುಂದೆ ಸಿದ್ದಪ್ಪ ನಾಗರಾಜ್​ ಪತ್ನಿಯೊಂದಿಗೆ ಕಳೆದ 2 ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದನು. ಈಗ ನಾಗರಾಜ್​ನಿಗೆ ವಿಷಯ ತಿಳಿದು ಸಿದ್ದಪ್ಪನನ್ನು ಬಡಿಗೆಯಿಂದ ಹೊಡೆದು ಕೊಲೆಗೈದಿದ್ದಾನೆ ಎಂದು ಆರೋಪಿಸಲಾಗಿದೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:04 am, Wed, 7 September 22