AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾ ಹಿನ್ನೀರಿನಲ್ಲಿ ಮುಳುಗಿ ಶಿವಮೊಗ್ಗ ಮೂಲದ ಮೂವರು ನೀರು ಪಾಲು

ಭದ್ರಾ ಹಿನ್ನೀರಿನಲ್ಲಿ ತೆಪ್ಪದಲ್ಲಿ ತೆರಳಿದ್ದ ಮೂವರು ಯುವಕರು ನೀರು ಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ(N.R Pura) ತಾಲೂಕಿನ ಬೈರಾಪುರ ಗ್ರಾಮದ ಬಳಿ ನಡೆದಿದೆ. ನಾಪತ್ತೆ ಆದವರಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ಮುಂದುವರೆದಿದೆ.

ಭದ್ರಾ ಹಿನ್ನೀರಿನಲ್ಲಿ ಮುಳುಗಿ ಶಿವಮೊಗ್ಗ ಮೂಲದ ಮೂವರು ನೀರು ಪಾಲು
ಭದ್ರಾ ಹಿನ್ನೀರಿನಲ್ಲಿ ಮುಳುಗಿ ಮೂವರು ನೀರು ಪಾಲು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Jun 19, 2024 | 8:26 PM

Share

ಚಿಕ್ಕಮಗಳೂರು, ಜೂ.19: ಭದ್ರಾ ಹಿನ್ನೀರಿನಲ್ಲಿ ಮುಳುಗಿ ಮೂವರು ನೀರು ಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ(N.R Pura) ತಾಲೂಕಿನ ಬೈರಾಪುರ ಗ್ರಾಮದ ಬಳಿ ನಡೆದಿದೆ. ತೆಪ್ಪದಲ್ಲಿ ಮೂವರು ಯುವಕರು ಭದ್ರಾ ಹಿನ್ನೀರಿನಲ್ಲಿ ತೆರಳಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ನಾಪತ್ತೆ ಆದವರು ಶಿವಮೊಗ್ಗ ಮೂಲದ ಅಫ್ದಾಖಾನ್, ಆದೀಲ್ ಹಾಗೂ ಸಾಜೀದ್ ಎಂದು ತಿಳಿದುಬಂದಿದೆ. ಇದೀಗ ಎನ್.ಆರ್ ಪುರ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಟ್ರಾಕ್ಟರ್ ಪಲ್ಟಿಯಾಗಿ ಚಾಲಕ ಸಾವು

ಬೆಂಗಳೂರು: ಯಲಹಂಕ ತಾಲೂಕಿನ ರಾಜಾನುಕುಂಟೆ ಬಳಿ ಮಣ್ಣು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ  ಕೊನೆಯುಸಿರೆಳೆದಿದ್ದಾನೆ. ಕಲಬುರಗಿ ಮೂಲದ ಟ್ರ್ಯಾಕ್ಟರ್​ ಚಾಲಕ ಬಸವರಾಜ(30) ಮೃತ ವ್ಯಕ್ತಿ. ಕಟ್ಟಡ ಕಾಮಗಾರಿಗೆ ಮಣ್ಣು ತೆಗೆದು ಸಾಗಿಸುವ ವೇಳೆ ಲೋಡ್ ಹೆಚ್ಚಾಗಿ ಟ್ರಾಕ್ಟರ್ ಇಂಜಿನ್ ಪಲ್ಟಿಯಾಗಿದೆ. ಇಂಜಿನ್ ಮತ್ತು ಟ್ರಾಲಿ ನಡುವೆ ಸಿಲುಕಿ ಬಸವರಾಜ ಮೃತನಾಗಿದ್ದಾನೆ. ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗದ ತುಂಗಾ ನದಿಯಲ್ಲಿ ಈಜಲು ಬಂದಿದ್ದ ಬೆಂಗಳೂರಿನ ಇಬ್ಬರು ಯುವಕರು ನೀರು ಪಾಲು

ಅಪರಿಚಿತ ವಾಹನ ಡಿಕ್ಕಿ ಪ್ರಕರಣ; ಸಾವಿನ ಸಂಖ್ಯೆ ಎರಡಕ್ಕೇರಿಕೆ

ಕೊಡಗು: ಪೊನ್ನಂಪೇಟೆ ತಾಲೂಕಿನ ಅರುವತ್ತೊಕ್ಕಲು ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ ಎರಡಕ್ಕೆ ಏರಿದೆ. ಹೌದು, ಘಟನೆಯಲ್ಲಿ ಗಾಯಗೊಂಡಿದ್ದ ಗೋಣಿಕೊಪ್ಪಲು ನಿವಾಸಿ 12 ವರ್ಷದ ಅನು ಎಂಬ ಬಾಲಕಿಯೂ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಳಾಗಿದ್ದಾಳೆ. ಕಳೆದ ರಾತ್ರಿ ಪೊನ್ನಂಪೇಟೆ ತಾಲ್ಲೂಕಿನ ಅರುವತ್ತೊಕ್ಕಲು ಬಳಿ ಅಪಘಾತ ಸಂಭವಿಸಿತ್ತು. ಸ್ಕೂಟಿಗೆ ಪಿಕ್ ಅಪ್ ಜೀಪ್ ಚಾಲಕ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಸ್ಕೂಟಿ ಚಲಾಯಿಸುತ್ತಿದ್ದ ಪದ್ಮಾವತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಸ್ಕೂಟಿ ಹಿಂಬದಿಯಲ್ಲಿದ್ದ ಬಾಲಕಿ ಅನು ತೀವ್ರ ಗಾಯವಾಗಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನೆ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:15 pm, Wed, 19 June 24

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ