ಚಿಕ್ಕಮಗಳೂರು, ಜೂ.19: ಭದ್ರಾ ಹಿನ್ನೀರಿನಲ್ಲಿ ಮುಳುಗಿ ಮೂವರು ನೀರು ಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ(N.R Pura) ತಾಲೂಕಿನ ಬೈರಾಪುರ ಗ್ರಾಮದ ಬಳಿ ನಡೆದಿದೆ. ತೆಪ್ಪದಲ್ಲಿ ಮೂವರು ಯುವಕರು ಭದ್ರಾ ಹಿನ್ನೀರಿನಲ್ಲಿ ತೆರಳಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ನಾಪತ್ತೆ ಆದವರು ಶಿವಮೊಗ್ಗ ಮೂಲದ ಅಫ್ದಾಖಾನ್, ಆದೀಲ್ ಹಾಗೂ ಸಾಜೀದ್ ಎಂದು ತಿಳಿದುಬಂದಿದೆ. ಇದೀಗ ಎನ್.ಆರ್ ಪುರ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಬೆಂಗಳೂರು: ಯಲಹಂಕ ತಾಲೂಕಿನ ರಾಜಾನುಕುಂಟೆ ಬಳಿ ಮಣ್ಣು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಕಲಬುರಗಿ ಮೂಲದ ಟ್ರ್ಯಾಕ್ಟರ್ ಚಾಲಕ ಬಸವರಾಜ(30) ಮೃತ ವ್ಯಕ್ತಿ. ಕಟ್ಟಡ ಕಾಮಗಾರಿಗೆ ಮಣ್ಣು ತೆಗೆದು ಸಾಗಿಸುವ ವೇಳೆ ಲೋಡ್ ಹೆಚ್ಚಾಗಿ ಟ್ರಾಕ್ಟರ್ ಇಂಜಿನ್ ಪಲ್ಟಿಯಾಗಿದೆ. ಇಂಜಿನ್ ಮತ್ತು ಟ್ರಾಲಿ ನಡುವೆ ಸಿಲುಕಿ ಬಸವರಾಜ ಮೃತನಾಗಿದ್ದಾನೆ. ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗದ ತುಂಗಾ ನದಿಯಲ್ಲಿ ಈಜಲು ಬಂದಿದ್ದ ಬೆಂಗಳೂರಿನ ಇಬ್ಬರು ಯುವಕರು ನೀರು ಪಾಲು
ಕೊಡಗು: ಪೊನ್ನಂಪೇಟೆ ತಾಲೂಕಿನ ಅರುವತ್ತೊಕ್ಕಲು ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ ಎರಡಕ್ಕೆ ಏರಿದೆ. ಹೌದು, ಘಟನೆಯಲ್ಲಿ ಗಾಯಗೊಂಡಿದ್ದ ಗೋಣಿಕೊಪ್ಪಲು ನಿವಾಸಿ 12 ವರ್ಷದ ಅನು ಎಂಬ ಬಾಲಕಿಯೂ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಳಾಗಿದ್ದಾಳೆ. ಕಳೆದ ರಾತ್ರಿ ಪೊನ್ನಂಪೇಟೆ ತಾಲ್ಲೂಕಿನ ಅರುವತ್ತೊಕ್ಕಲು ಬಳಿ ಅಪಘಾತ ಸಂಭವಿಸಿತ್ತು. ಸ್ಕೂಟಿಗೆ ಪಿಕ್ ಅಪ್ ಜೀಪ್ ಚಾಲಕ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಸ್ಕೂಟಿ ಚಲಾಯಿಸುತ್ತಿದ್ದ ಪದ್ಮಾವತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಸ್ಕೂಟಿ ಹಿಂಬದಿಯಲ್ಲಿದ್ದ ಬಾಲಕಿ ಅನು ತೀವ್ರ ಗಾಯವಾಗಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನೆ ಮಾಡಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:15 pm, Wed, 19 June 24