ಹುಲಿ ಉಗುರು ವಿವಾದ: ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದ ಡಿಆರ್​ಎಫ್​ಒ ಅಮಾನತು

ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಕೊಪ್ಪ ಡಿಎಫ್​ಒ ನಂದೀಶ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಡಿಆರ್​ಎಫ್​ಒ ಅವರನ್ನು ದರ್ಶನ್ ಅಮಾನತು ಮಾಡಲಾಗಿದೆ.

ಹುಲಿ ಉಗುರು ವಿವಾದ: ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದ ಡಿಆರ್​ಎಫ್​ಒ ಅಮಾನತು
ಡಿಆರ್​ಎಫ್​ಒ ದರ್ಶನ್​
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ

Updated on:Oct 27, 2023 | 2:02 PM

ಚಿಕ್ಕಮಗಳೂರು ಅ.27: ರಾಜ್ಯದಲ್ಲಿ ಹುಲಿ ಉಗುರಿನ ಸದ್ದು ಜೋರಾಗಿದೆ. ಹುಲಿ ಉಗುರು (Tiger Claw) ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು ಧರಿಸಿರುವ ರಾಜ್ಯದ ವಿಐಪಿ ಮಂದಿಗೆ ತಲೆನೋವು ಶುರುವಾಗಿದೆ. ಕನ್ನಡ ಚಿತ್ರರಂಗದ (Sandalwood) ಪ್ರಮುಖರ ವಿರುದ್ಧ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪ ಕೇಳಿಬಂತು. ಸೆಲೆಬ್ರೆಟಿಗಳು ಬೆನ್ನಲ್ಲೇ ರಾಜಕಾರಣಿಗಳು, ಉದ್ಯಮಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಆರೋಪ ಕೇಳಿಬಂದಿದೆ. ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದ ಡಿಆರ್​ಎಫ್​ಒ (DRFO) ದರ್ಶನ್ ಅವರ ವಿರುದ್ಧ ದೂರು ದಾಖಲಾಗಿತ್ತು.

ಇದೀಗ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಕೊಪ್ಪ ಡಿಎಫ್​ಒ ನಂದೀಶ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಡಿಆರ್​ಎಫ್​ಒ ಅವರನ್ನು ದರ್ಶನ್ ಅಮಾನತು ಮಾಡಲಾಗಿದೆ. ಅರಣ್ಯ ಇಲಾಖೆಯ ಕಳಸ ಉಪ ವಲಯ ಅರಣ್ಯಾಧಿಕಾರಿ (DRFO) ದರ್ಶನ್‌ ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದಾರೆ ತನಿಖೆ ನಡೆಸಿ, ಕ್ರಮಕೈಗೊಳ್ಳಿ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಅರೆನೂರು ಗ್ರಾಮದ ಸುಪ್ರೀತ್ ಮತ್ತು ಅಬ್ದುಲ್ ಅವರು ಚಿಕ್ಕಮಗಳೂರು ಜಿಲ್ಲೆ ಆಲ್ದೂರು ವಲಯ ಅರಣ್ಯಾಧಿಕಾರಿಗೆ ಲಿಖಿತ ದೂರು ನೀಡಿದ್ದರು.

ಏನಿದು ಹುಲಿ ಉಗುರು ವಿವಾದ

ಹುಲಿ ಉಗುರು ಧರಿಸಿದ್ದ ವರ್ತೂರು ಸಂತೋಷ್ ಅವರನ್ನು ಕಳೆದ ಎರಡು ದಿನಗಳ ಹಿಂದೆ ಅರಣ್ಯ ಅಧಿಕಾರಿಗಳು ಬಿಗ್ ಬಾಸ್ ಮನೆಯಿಂದಲೇ ಬಂಧಿಸಿ ಕರೆತಂದಿದ್ದಾರೆ. ಸದ್ಯ ವರ್ತೂರು ಸಂತೋಷ್​​​ 14 ದಿನ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇವರ ಬಂಧನ ಬಳಿಕ ಹುಲಿ ಉಗುರು ಪ್ರಕರಣದ ರಾಜ್ಯದಲ್ಲಿ ಒಂದು ಮಟ್ಟಿಗೆ ಕಾವು ಎದ್ದಿತ್ತು. ಆದರೆ ಯಾವಾಗ ಕನ್ನಡದ ಖ್ಯಾತ ಚಲನಚಿತ್ರ ನಟರೂ ಹುಲಿ ಉಗುರು ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭಿಸಿದವು ಈ ಕಾವು ಜಾಸ್ತಿ ಆಯ್ತು.

ಇದನ್ನೂ ಓದಿ: ಆರ್​ಎಫ್​ಒ ವಿರುದ್ಧ ಕೇಳಿಬಂತು ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಆರೋಪ

ಹೌದು ಚಿತ್ರನಟ ಚಾಲೆಂಜಿಂಗ್​ ಸ್ಟಾರ್​ ದರ್ಶನ, ನಟ ಜಗ್ಗೇಶ್​, ನಟ ನಿಖಿಲ್​ ಕುಮಾರಸ್ವಾಮಿ, ನಿರ್ಮಾಪಕ ರಾಕ್​​ಲೈನ್ ವೆಂಕಟೇಶ್​ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವ ಪೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರದಾಡಲು ಆರಂಭಸಿದವು. ಇದನ್ನು ಕಂಡು ಪ್ರಾಣಿಪ್ರಿಯರು ಮತ್ತು ಸಂಘಟನೆಯವರು ಅರಣ್ಯ ಅಧಿಕಾರಿಗಳಿಗೆ ದೂರು ನೀಡಲು ಆರಂಭಿಸಿದರು. ಅದರಂತೆ ಅರಣ್ಯ ಅಧಿಕಾರಿಗಳು ನಟರ ಮನೆಗಳಿಗೆ ತೆರಳಿ ಶೋಧ ನಡೆಸಿದ್ದರು.

ಈ ಹುಲಿ ಉಗುರಿನ ನಂಜು ರಾಜಕಾರಣಿಗಳಿಗೂ ಅಂಟಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಪುತ್ರ, ​ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಹುಲಿ ಉಗುರಿನ ಪೆಂಡೆಂಟ್ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರಿನ ಲಾಕೆಟ್ ಧರಿಸಿರುವ ಫೋಟೋ ಕೂಡ ವೈರಲ್ ಆಗಿದೆ. ಅಧಿಕಾರಿಗಳು ಲಕ್ಷ್ಮೀ ಹೆಬ್ಬಾಳಕರ್ ಮನೆಗೆ ತೆರಳಿ ಪರಿಶೀಲಿಸಿದ್ದಾರೆ.

ಇನ್ನು ಲಕ್ಷ್ಮಿ ಹೆಬ್ಬಾಳ್ಕರ್​ ಅಕ್ಕನ ಮಗಳನ್ನು ಮದುವೆಯಾಗಿರುವ ರಜತ್ ಉಳ್ಳಾಗಡ್ಡಿಮಠ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಪೋಟೋ ವೈರಲ್​ ಆಗಿದೆ. ಅಲ್ಲದೆ ವಿಜಯಪುರದಲ್ಲಿ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಪುತ್ರ ಶಾಶ್ವತ ಗೌಡ ಪಾಟೀಲ್ ಕೂಡ ಹುಲಿ ಉಗುರು ಧರಿಸಿರುವ ಫೋಟೋ ವೈರಲ್​​ ಆಗಿದೆ. ಇದನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:01 pm, Fri, 27 October 23

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು