ಪ್ರಾಣ ಕಸಿದ ಸೆಲ್ಫಿ ಕ್ರೇಜ್; ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು

ಸೆಲ್ಫಿ ಕ್ರೇಜ್‌ಗೆ (Selfie Craze)​ ಯುವಕನೊಬ್ಬ ಬಲಿಯಾಗಿದ್ದಾನೆ. ಫಾಲ್ಸ್‌ನಲ್ಲಿ (Hebbe Waterfalls) ಕಾಲು ಜಾರಿ ಬಿದ್ದು ಪ್ರವಾಸಿಗ ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್‌ನಲ್ಲಿ ಘಟನೆ ನಡೆದಿದೆ.

ಪ್ರಾಣ ಕಸಿದ ಸೆಲ್ಫಿ ಕ್ರೇಜ್; ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು
ಶ್ರವಣ್ (25)
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jun 10, 2024 | 6:14 PM

ಚಿಕ್ಕಮಗಳೂರು, (ಜೂನ್ 10): ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಫಾಲ್ಸ್​ನಲ್ಲಿ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್‌ನಲ್ಲಿ ನಡೆದಿದೆ. ಹೈದರಾಬಾದ್ ಮೂಲದ ಶ್ರವಣ್ (25) ಮೃತ ದುರ್ದೈವಿ. ತನ್ನ ಸ್ನೇಹಿತನೊಂದಿಗೆ ಹೈದರಾಬಾದ್‌ನಿಂದ‌ ಚಿಕ್ಕಮಗಳೂರು ಪ್ರವಾಸ ಕೈಗೊಂಡಿದ್ದ ಶ್ರವಣ್‌, ಇಂದು (ಜೂನ್ 10) ಬೆಳಗ್ಗೆ ಬೈಕ್‌ನಲ್ಲಿ ಹೆಬ್ಬೆ ಫಾಲ್ಸ್‌ಗೆ ತೆರಳಿದ್ದ. ಈ ವೇಳೆ ಹೆಬ್ಬೆ ಫಾಲ್ಸ್‌ನಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಮಲ್ಬೆ ಬೀಚ್‌ಗೆ ಇಳಿಯದಂತೆ ತಡೆಬೇಲಿ

ಉಡುಪಿಯ ಮಲ್ಪೆ ಬೀಚ್‌ನಲ್ಲಿ ಕಡಲು ಪ್ರಕ್ಷುಬ್ಧ, ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ತಡೆಬೇಲಿ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಬೀಚ್ ಗೆ ಎಂಜಾಯ್ ಮಾಡಲೆಂದು ಬರುವ ಪ್ರವಾಸಿಗರಿಗೆ ಭಾರಿ ನಿರಾಸೆಯಾಗಿದೆ. ಮಲ್ಪೆಯಲ್ಲಿ ಸಮುದ್ರದ ಅಲೆಗಳ ಅಬ್ಬರ ಜೋರಾಗಿದ್ದು, ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಲ್ಪೆ ಬೀಚ್ ಗೆ ಪ್ರವಾಸಿಗರು ಪ್ರವೇಶಿಸದಂತೆ ಬಲೆಯಿಂದ ದಿಗ್ಬಂಧನ ಹಾಕಲಾಗಿದೆ.

ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮನನೊಂದು ಮಗಳ ಜೊತೆ ಆತ್ಮಹತ್ಯೆಗೆ ಶರಣು

ದೊಡ್ಡಬಳ್ಳಾಪುರದಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ವೃದ್ಧ ಬಲಿ

ಹಿಟ್‌ ಆ್ಯಂಡ್‌ ರನ್‌ಗೆ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಬೆಂಗಳೂರಿನ ದೊಡ್ಡಬಳ್ಳಾಪುರದ ಕೊಡಿಗೇಹಳ್ಳಿ ಫ್ಲೈ ಓವರ್ ಬಳಿ ಘಟನೆ ನಡೆದಿದೆ. ವೃದ್ಧನ ಗುರುತು ಪತ್ತೆಯಾಗಿಲ್ಲ. ಭಾನುವಾರ ತಡರಾತ್ರಿ ಘಟನೆ ನಡೆದಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ನಡು ರಸ್ತೆಯಲ್ಲೇ ಬಿದ್ದಿದ್ದ ಶವವನ್ನು ತೆರೆವು ಮಾಡಿದ್ದಾರೆ. ಮೃತದೇಹವನ್ನು ದೊಡ್ಡಬಳ್ಳಾಪುರ ಸರ್ಕಾರಿ ಶವಗಾರಕ್ಕೆ ರವಾನೆ ಮಾಡಲಾಗಿದೆ. ಅಪಘಾತ ಮಾಡಿ ಪರಾರಿ ಆಗಿರುವ ಆರೋಪಿಗಳಿಗೆ ಹುಡುಕಾಟ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್