AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿ ಆದೇಶ ಉಲ್ಲಂಘಿಸಿ ಲಾರಿಗಳ ಓಡಾಟ; ಚಾರ್ಮಾಡಿ ಘಾಟ್ ಬಳಿ ಬೆಳಗ್ಗೆಯಿಂದಲೇ ಟ್ರಾಫಿಕ್ ಜಾಮ್

ಡಿಸಿ ಆದೇಶದ ಮಧ್ಯೆಯೂ ಕಿರಿದಾದ ರಸ್ತೆಯಲ್ಲಿ ದೊಡ್ಡ ಲಾರಿ, ಬಸ್ಸುಗಳ ಸಂಚಾರಕ್ಕೆ ಅವಕಾಶ ಕಲ್ಪಸಿದ್ದು, ಸಂಚಾರ ಬಂದ್ ಆಗಲು ಇದು ಪ್ರಮುಖ ಕಾರಣವಾಗಿದೆ ಎಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಸಿ ಆದೇಶ ಉಲ್ಲಂಘಿಸಿ ಲಾರಿಗಳ ಓಡಾಟ; ಚಾರ್ಮಾಡಿ ಘಾಟ್ ಬಳಿ ಬೆಳಗ್ಗೆಯಿಂದಲೇ ಟ್ರಾಫಿಕ್ ಜಾಮ್
ಚಾರ್ಮಾಡಿ ಘಾಟ್ ಬಳಿ ಬೆಳಗ್ಗೆಯಿಂದಲೇ ಟ್ರಾಫಿಕ್ ಜಾಮ್
TV9 Web
| Updated By: preethi shettigar|

Updated on: Jul 30, 2021 | 12:20 PM

Share

ಚಿಕ್ಕಮಗಳೂರು: ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್ ಬಳಿ ರಸ್ತೆ ಕುಸಿತ ಸಂಭವಿಸಿದ ಪರಿಣಾಮ ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಚಾರ್ಮಾಡಿ ಘಾಟ್ ಮೂಲಕ ಪರ್ಯಾಯ ಮಾರ್ಗ ಕಲ್ಪಿಸಲಾಗಿತ್ತು. ಆದರೆ, ಬಹುತೇಕ ವಾಹನಗಳು ಚಾರ್ಮಾಡಿ ಘಾಟ್ ಮೂಲಕ ಸಂಚರಿಸುತ್ತಿದ್ದ ಕಾರಣದಿಂದ ವಾಹನ ದಟ್ಟಣೆ ಹೆಚ್ಚಾಗಿತ್ತು. ಪರಿಣಾಮ ಮರಗಳು ನೆಲಕ್ಕುರುಳಲಾರಂಭಿಸಿದ್ದು, ಹಠಾತ್ತಾಗಿ ಚಾರ್ಮಾಡಿ ಘಾಟ್ ಮಾರ್ಗವನ್ನು ಸಂಜೆ 7 ರಿಂದ ಬೆಳಗ್ಗೆ 6 ರ ತನಕ ಬಂದ್ ಮಾಡುವುದಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಜುಲೈ 21 ರಂದು ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿ ಆದೇಶ ಪ್ರಕಟಗೊಂಡ ನಂತರ ಪೊಲೀಸರು ಕೊಟ್ಟಿಗೆಹಾರದ ಬಳಿಯೇ ವಾಹನಗಳನ್ನು ತಡೆದು ನಿಲ್ಲಿಸಿದ್ದರು. ಜನರ ಪರದಾಟದ ಬಗ್ಗೆ ಟಿವಿ9ನಲ್ಲಿ ವರದಿ ಪ್ರಕಟವಾಗಿತ್ತು. ಜನರ ಸಂಕಷ್ಟವನ್ನು ಗಮನಕ್ಕೆ ತೆಗೆದುಕೊಂಡ ಜಿಲ್ಲಾಡಳಿತ ನಂತರ ಅಂದರೆ ಜುಲೈ 23 ರಿಂದ ರಾತ್ರಿ 10 ಗಂಟೆಯವರೆಗೂ ವಾಹನ ಸಂಚಾರಕ್ಕೆ ಅವಕಾಶ ನೀಡಿತು. ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಇನ್ನೂ ಕೂಡ ದೊಡ್ಡ ಲಾರಿ ಮತ್ತು ಬಸ್ಸುಗಳ ಸಂಚಾರಕ್ಕೆ ಅವಕಾಶ ಇಲ್ಲ. ಆದರೆ ಲಾರಿ- ಬಸ್ಸುಗಳು ಓಡಾಡುತ್ತಿದ್ದು, ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ಸಂಪೂರ್ಣವಾಗಿ ಟ್ರಾಫಿಕ್ ಜಾಮ್ ಉಂಟಾಗಿ ಜನ ಸಮಸ್ಯೆ ಎದುರಿಸುವಂತಾಗಿದೆ. ಕೊಟ್ಟಿಗೆಹಾರದಿಂದ ನಾಲ್ಕೈದು ಕಿಲೋಮೀಟರ್ ವರೆಗೂ ವಾಹನಗಳು ನಿಂತಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಅಲ್ಲದೆ ಭಾರಿ ಗಾತ್ರದ ಲಾರಿ-ಬಸ್ಸುಗಳು ಸಂಚರಿಸಲು ಜಿಲ್ಲಾಡಳಿತ ನಿರ್ಬಂಧಿಸಿತ್ತು, ಆದರೆ ಡಿಸಿ ಆದೇಶದ ಮಧ್ಯೆಯೂ ಕಿರಿದಾದ ರಸ್ತೆಯಲ್ಲಿ ದೊಡ್ಡ ಲಾರಿ, ಬಸ್ಸುಗಳ ಸಂಚಾರಕ್ಕೆ ಅವಕಾಶ ಕಲ್ಪಸಿದ್ದು, ಸಂಚಾರ ಬಂದ್ ಆಗಲು ಇದು ಪ್ರಮುಖ ಕಾರಣವಾಗಿದೆ ಎಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Charmady Ghat: ಪ್ರಯಾಣಿಕರೇ ಗಮನಿಸಿ: ರಾತ್ರಿ ಸಂಚಾರಕ್ಕೆ ಚಾರ್ಮಾಡಿ ಘಾಟ್ ಬಂದ್: ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್​ನಲ್ಲಿ ರಾತ್ರಿ 10 ಗಂಟೆಯವರೆಗೂ ವಾಹನ ಸಂಚಾರಕ್ಕೆ ಅವಕಾಶ