Chikmagalur News; ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್; ಮುಸ್ಲಿಂ ಯುವತಿ ಮನೆಯ ಕಬೋರ್ಡ್ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಕಾರ್ಯಕರ್ತ!
ಮೂಡಿಗೆರೆ ತಾಲೂಕಿನ ಬಣಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರೆತಿದೆ.
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಣಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರೆತಿದೆ. ಮುಸ್ಲಿಂ ಯುವತಿಯ ಜೊತೆ ಸ್ನೇಹ ಬೆಳೆಸಿದ ಆರೋಪದಲ್ಲಿ ಬಿಜೆಪಿ (BJP Worker), ಭಜರಂಗದಳದ ಕಾರ್ಯಕರ್ತ ಅಜಿತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದ ಕುತೂಹಲಕಾರಿ ಮಾಹಿತಿ ಬಹಿರಂಗವಾಗಿದ್ದು, ಯುವತಿಯ ಮನೆಯಲ್ಲೇ ಅಜಿತ್ ಸಿಕ್ಕಿಬಿದ್ದಿದ್ದ. ಯುವತಿಯ ಮನೆಯ ಕಬೋರ್ಡ್ನಲ್ಲಿ ಅವಿತು ಕುಳಿತಿದ್ದ ಎಂಬ ವಿಚಾರ ಬಯಲಾಗಿದೆ.
ಅಜಿತ್ ಕಬೋರ್ಡ್ನಲ್ಲಿ ಅವಿತು ಕುಳಿತಿರುವುದು ಎನ್ನಲಾದ ವಿಡಿಯೋ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಯುವತಿಯ ಮನೆಯಲ್ಲಿ ಸಿಕ್ಕಿಬಿದ್ದ ಅಜಿತ್ ಮೇಲೆ ಯುವಕರ ಗುಂಪು ಹಲ್ಲೆ ಮಾಡಿತ್ತು. ಅನ್ಯಕೋಮಿನ ಯುವತಿಯೊಂದಿಗೆ ಸ್ನೇಹ ಮಾಡಿದ್ದಕ್ಕೆ ತನ್ನ ಮೇಲೆ ನಡು ರಸ್ತೆಯಲ್ಲಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿದ್ದ.
ಈ ಮಧ್ಯೆ, ಬಿಜೆಪಿ ಕಾರ್ಯಕರ್ತ ಅಜಿತ್ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಅಜಿತ್ಗೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: Chikmagalur News; ಮುಸ್ಲಿಂ ಯುವತಿ ಜೊತೆ ಸ್ನೇಹ, ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ
ರಾಜ್ಯದಲ್ಲಿ ಇನ್ಮುಂದೆ ನೈತಿಕ ಪೊಲೀಸ್ಗಿರಿಗೆ ಅವಕಾಶ ಇಲ್ಲ, ಹೀಗೆ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಇತ್ತೀಚೆಗೆ ಪೊಲೀಸ್ ಇಲಾಖೆಗೆ ಖಡಕ್ ಸೂಚನೆ ನೀಡಿದ್ದರು. ಬಳಿಕ ಅಧಿಕಾರಿಗಳು ಕೂಡ ನೈತಿಕ ಪೊಲೀಸ್ ಗಿರಿ ನಡೆಸುವವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇದಾದ ಬೆನ್ನಲ್ಲೆ ಚಿಕ್ಕಬಳ್ಳಾಪುರ ನಗರದ ಗೋಪಿಕಾ ಚಾಟ್ಸ್ ಬಳಿ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಹೋಟೆಲ್ಗೆ ಹೋಗಿದಕ್ಕೆ ಮುಸ್ಲಿಂ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ನಡೆದಿದೆ.
ಚಿಕ್ಕಮಗಳೂರಿನ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 3:46 pm, Fri, 26 May 23