ಇಳಿಜಾರಿನಲ್ಲಿದ್ದ ಮನೆಗೆ ಟ್ರ್ಯಾಕ್ಟರ್ ಡಿಕ್ಕಿ: ಚಾಲಕ ಸೇರಿ ಇಬ್ಬರು ದುರ್ಮರಣ
ಚಿಕ್ಕಮಗಳೂರು: ನಿಯಂತ್ರಣ ತಪ್ಪಿ ಇಳಿಜಾರಿನಲ್ಲಿದ್ದ ಮನೆಗೆ ಟ್ರ್ಯಾಕ್ಟರ್ ಡಿಕ್ಕಿಯೊಡೆದು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬೆಟ್ಟದಮಳಲಿ ಬಳಿ ನಡೆದಿದೆ. ಮಂಜುನಾಥ್(38) ಹಾಗೂ ಗೋವಿಂದಶೆಟ್ಟಿ(62) ಮೃತ ದುರ್ದೈವಿಗಳು. ಕಣತಿಯಿಂದ ಬೆಟ್ಟದ ಮಳಲಿಗೆ ಬರುವ ವೇಳೆ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಅಪಘಾತ ಸಂಭವಿಸಿದೆ. ಅವಘಡದಲ್ಲಿ ಟ್ರ್ಯಾಕ್ಟರ್ ಚಾಲಕ ಸೇರಿ ಇಬ್ಬರು ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಆಲ್ದೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಿಕ್ಕಮಗಳೂರು: ನಿಯಂತ್ರಣ ತಪ್ಪಿ ಇಳಿಜಾರಿನಲ್ಲಿದ್ದ ಮನೆಗೆ ಟ್ರ್ಯಾಕ್ಟರ್ ಡಿಕ್ಕಿಯೊಡೆದು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬೆಟ್ಟದಮಳಲಿ ಬಳಿ ನಡೆದಿದೆ. ಮಂಜುನಾಥ್(38) ಹಾಗೂ ಗೋವಿಂದಶೆಟ್ಟಿ(62) ಮೃತ ದುರ್ದೈವಿಗಳು.
ಕಣತಿಯಿಂದ ಬೆಟ್ಟದ ಮಳಲಿಗೆ ಬರುವ ವೇಳೆ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಅಪಘಾತ ಸಂಭವಿಸಿದೆ. ಅವಘಡದಲ್ಲಿ ಟ್ರ್ಯಾಕ್ಟರ್ ಚಾಲಕ ಸೇರಿ ಇಬ್ಬರು ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಆಲ್ದೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Published On - 3:09 pm, Sat, 8 February 20