ಚಿಕ್ಕಮಗಳೂರು: ಈಜಲು ತುಂಗಾ ನದಿಗೆ ಇಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಈಜಲೆಂದು ತುಂಗಾ ನದಿಗೆ ಇಳಿದ ಇಬ್ಬರು ವಿದ್ಯಾರ್ಥಿಗಳಿಬ್ಬರು ನೀರುಪಾಲದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದರೆ, ಇತ್ತ ಗದಗದಲ್ಲಿ ಬೈಕ್ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು: ಈಜಲು ತುಂಗಾ ನದಿಗೆ ಇಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು
ಈಜಲು ತುಂಬಾ ನದಿಗೆ ಇಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು (ಸಾಂದರ್ಭಿಕ ಚಿತ್ರ)
Follow us
Rakesh Nayak Manchi
|

Updated on:May 19, 2023 | 6:27 PM

ಚಿಕ್ಕಮಗಳೂರು: ಈಜಲೆಂದು ತುಂಗಾ ನದಿಗೆ (Tunga River) ಇಳಿದ ಇಬ್ಬರು ವಿದ್ಯಾರ್ಥಿಗಳಿಬ್ಬರು ನೀರುಪಾಲದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದಲ್ಲಿ ನಡೆದಿದೆ. ಪ್ರಜ್ವಲ್ (20) ಹಾಗೂ ರಕ್ಷಿತ್ (20) ನೀರುಪಾಲಾದ ವಿದ್ಯಾರ್ಥಿಗಳು. ಶೃಂಗೇರಿ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ರಕ್ಷಿತ್, ಪ್ರಜ್ವಲ್ ನೆಮ್ಮಾರಿನ ಸುಂಕದಮಕ್ಕಿ ತೂಗುಸೇತುವೆ ಬಳಿ ಈಜಲೆಂದು ನದಿಗಿಳಿದಿದ್ದಾರೆ. ಈ ವೇಳೆ ನೀರು ಪಾಲಾಗಿದ್ದಾರೆ. ಘಟನೆ ಸಂಬಂಧ ಶೃಂಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರಕ್ಕೆ ಬೈಕ್ ಡಿಕ್ಕಿ, ಇಬ್ಬರು ಬಾಲಕರು ಸಾವು

ಮರಕ್ಕೆ ಬೈಕ್​ ಡಿಕ್ಕಿಯಾಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿರುವ ಬಸ್ ಡಿಪೋ‌ ಬಳಿ ನಡೆದಿದೆ. ಅನೂಪ್​ ಇಟಗಿ (15), ಶ್ರೀಶಾಂತ್​ ಗಡಗಿ (15) ಮೃತ ಬಾಲಕರು. ಅಬ್ಬಿಗೇರಿ ಗ್ರಾಮದ ಬಳಿಯ ಕಲಾಕಾಶಿ ಈಜು‌ಕೊಳ್ಳದಿಂದ ವಾಪಸಾಗುವಾಗ ನಿಯಂತ್ರಣ ಕಳೆದುಕೊಂಡು ಮರಕ್ಕೆ ಬೈಕ್ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಬಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ರಾಯಚೂರು: ಈಜಲು ಹೋಗಿದ್ದ ಅಣ್ಣ-ತಮ್ಮ ನದಿ ಪಾಲು

ಮೃತ ಬಾಲಕರು ರೋಣ ಪಟ್ಟಣದ ನಿವಾಸಿಗಳಾಗಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ ರೋಣಾ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Fri, 19 May 23

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ