ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಶೋಭಾ ಹಠಾವೋ ಬಿಜೆಪಿ ಬಚಾವೋ ಅಭಿಯಾನ ತೀವ್ರ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಆರಂಭವಾಗಿದ್ದ ಗೋ ಬ್ಯಾಕ್ ಶೋಬಾ ಅಭಿಯಾನ ಇದೀಗ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಶಾಸಕ ಸಿಟಿ ರವಿ ಬೆಂಬಲಿಗರ ನಡುವಣ ಸಂಘರ್ಷವಾಗಿ ಬದಲಾಗಿದೆ. ಶೋಭಾಗೆ ಲೋಕಸಭೆ ಟಿಕೆಟ್ ನೀಡಬಾರದು, ಸಿಟಿ ರವಿಗೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ವರಿಷ್ಠರಿಗೆ ಪತ್ರ ಬರೆದಿದ್ದಾರೆ.

ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಶೋಭಾ ಹಠಾವೋ ಬಿಜೆಪಿ ಬಚಾವೋ ಅಭಿಯಾನ ತೀವ್ರ
ಸಿಟಿ ರವಿ & ಶೋಭಾ ಕರಂದ್ಲಾಜೆ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Ganapathi Sharma

Updated on:Feb 22, 2024 | 1:04 PM

ಚಿಕ್ಕಮಗಳೂರು, ಫೆಬ್ರವರಿ 22: ಲೋಕಸಭೆ ಚುನಾವಣೆ (Lok Sabha Elections) ಸಮೀಪಿಸುತ್ತಿರುವಂತೆಯೇ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ (Udupi Chikkamagaluru Lok Sabha Constituency) ಬಿಜೆಪಿ ನಾಯಕರ ಟಿಕೆಟ್ ಪೈಪೋಟಿ ಜೋರಾಗಿದೆ. ಹಾಲಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹಾಗೂ ಮಾಜಿ ಶಾಸಕ ಸಿಟಿ ರವಿ (CT Ravi) ಬಣಗಳ ನಡುವಣ ಸಂಘರ್ಷ ತಾರಕಕ್ಕೇರಿದೆ. ಈ ಮಧ್ಯೆ, ಬಿಜೆಪಿ ಕಾರ್ಯಕರ್ತರ ಒಂದು ಬಣದ ‘ಶೋಭಾ ಹಠಾವೋ ಬಿಜೆಪಿ ಬಚಾವೋ’ ಅಭಿಯಾನ ತೀವ್ರಗೊಂಡಿದೆ. ಪಕ್ಷದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಹೈಕಮಾಂಡ್ ನಾಯಕರಿಗೆ ಪತ್ರ ಬರೆದು ಶೋಭಾ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಶೋಭಾ ಕರಂದ್ಲಾಜೆ ವಿರುದ್ಧ ‘ಗೋ ಬ್ಯಾಕ್ ಶೋಭಾ’ ಅಭಿಯಾನದ ಮುಂದುವರಿದ ಭಾಗವಾಗಿ ಇದೀಗ ‘ಹಠಾವೋ ಅಭಿಯಾನ’ ಆರಂಭಗೊಂಡಿದೆ. ಪತ್ರ ಅಭಿಯಾನ, ಗೋ ಬ್ಯಾಕ್ ಶೋಭಾ ಅಭಿಯಾನದ ಜೊತೆ ಬಿಜೆಪಿ ಬಚಾವೋ ಅಭಿಯಾನ ಆರಂಭವಾಗಿದೆ.

3583 ದಿನಗಳಲ್ಲಿ 100 ದಿನವೂ ಕ್ಷೇತ್ರಕ್ಕೆ ಬಾರದ ಸಂಸದೆ ನಮಗೆ ಬೇಕೇ? ಕ್ಷೇತ್ರಕ್ಕೆ ಬಾರದ ಸಂಸದೆ ನಮಗೆ ಬೇಡವೇ ಬೇಡ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಸಿಟಿ‌ ರವಿಗೆ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರಿಗೆ ಪತ್ರ ಬರೆದಿದ್ದಾರೆ. ಒಂದು ಕಡೆ ಶೋಭಾ ವಿರುದ್ಧ ಹಠಾವೋ ಅಭಿಯಾನ ನಡೆಯುತ್ತಿದ್ದು, ಮತ್ತೊಂದು ಕಡೆ ಸಿಟಿ ರವಿಗೆ ಟಿಕೆಟ್ ನೀಡುವಂತೆ ಪತ್ರ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ವಿದ್ಯಮಾನ ಬಿಜೆಪಿ ನಾಯಕರಿಗೆ ಮುಜುಗರ ತರಿಸಿದೆ.

ದಾಖಲೆ ಬಿಡುಗಡೆ ಮಾಡಿದ ಕಾರ್ಯಕರ್ತರು

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಕಾರ್ಯಕರ್ತರ ಆಕ್ರೋಶ ಹೆಚ್ಚಾಗಿದ್ದು, ಅನುದಾನ ವಿಚಾರವಾಗಿ ದಾಖಲೆ ಬಿಡುಗಡೆ ಮಾಡಿದ್ದಾರೆ. ತರೀಕೆರೆ, ಅಜ್ಜಂಪುರ ತಾಲೂಕಿಗೆ 2019ರಿಂದ 2024ರವರೆಗೂ ಒಂದು ರೂಪಾಯಿ ಅನುದಾನ ತಂದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಕಾರ್ಯಕರ್ತರು ಪೋಸ್ಟ್ ಮಾಡಿದ್ದಾರೆ.

ಬಿಜೆಪಿಗೆ ಕೆಲವೆಡೆ ಆಡಳಿತ ವಿರೋಧಿ ಅಲೆ

ಬಿಜೆಪಿಗೆ ರಾಜ್ಯದ ಕೆಲವು ಕ್ಷೇತ್ರಗಳಲ್ಲಿ ಆಡಳಿತ ವಿರೋಧಿ ಅಲೆಯ ಬಿಸಿ ತಟ್ಟುತ್ತಿದೆ. ವಿಶೇಷವೆಂದರೆ, ಸ್ವಪಕ್ಷದ ಕಾರ್ಯಕರ್ತರಿಂದಲೇ ಹಾಲಿ ಸಂಸದರ ವಿರುದ್ಧ ವಿರೋಧ ಹೆಚ್ಚಾಗುತ್ತಿದೆ. ಪ್ರಧಾನಿ ಮೋದಿ ಪರ ಅಲೆ, ಒಲವು ಇದ್ದರೂ ಕ್ಷೇತ್ರದ ಸಂಸದರನ್ನು ಕಾರ್ಯಕರ್ತರು ಒಪ್ಪದ ಸ್ಥಿತಿ ಇದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಘರ್ಷ ಒಂದು ರೀತಿಯದ್ದಾದರೆ ನೆರೆಯ ದಕ್ಷಿಣ ಕನ್ನಡದಲ್ಲಿಯೂ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಅನೇಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಚುನಾವಣೆಯಲ್ಲಿ ಪ್ರತಾಪ್​ ಸಿಂಹ ವಿರುದ್ಧ ಡಾಲಿ ಸ್ಪರ್ಧಿಸೋದು ನಿಜವೇ? ಉತ್ತರಿಸಿದ ಧನಂಜಯ

ಅತ್ತ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿಯೂ ಹಾಲಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಜನಾಕ್ರೋಶವಿದೆ. ಅಲ್ಲದೆ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಅನಂತಕುಮಾರ್ ಹೆಗಡೆ ಬಣ ಜಗಳವೂ ಆರಂಭವಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಇಂಥ ಬೆಳವಣಿಗೆಗಳು ಆಗುತ್ತಿರುವುದು ಬಿಜೆಪಿ ನಾಯಕತ್ವಕ್ಕೆ ಸವಾಲಾಗಿ ಪರಿಣಮಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:40 am, Thu, 22 February 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ