ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ, ಗೊಲ್ಲರ ಬೀದಿಗೆ ಕೆಲಸಕ್ಕೆ ಬಂದ ದಲಿತ ಯುವಕನ ಮೇಲೆ ಹಲ್ಲೆ
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಗೇರಮರಡಿ ಗ್ರಾಮದ ಗೊಲ್ಲರ ಬೀದಿಯಲ್ಲಿ ಹೊಸ ವರ್ಷದಂದು ದಲಿತ ಯುವಕನ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ಖಂಡಿಸಿ ಇಂದು ಗೊಲ್ಲರ ಬೀದಿಗೆ ತೆರಳಿ ಪ್ರತಿಭಟನೆ ನಡೆಸಲು ದಲಿತ ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ.
ಚಿಕ್ಕಮಗಳೂರು, ಜ.02: ರಾಜ್ಯದಲ್ಲಿ ಅಸ್ಪೃಷ್ಯತೆ (Untouchability) ಇನ್ನೂ ಜೀವಂತವಾಗಿದೆ. ದಲಿತರಿಗೆ (Dalit) ದೇವಸ್ಥಾನ ಪ್ರವೇಶಕ್ಕೆ ನಿರಾಕರಿಸುವುದು, ಕುಡಿಯುವ ನೀರು, ಅಂಗನವಾಡಿ ಪ್ರವೇಶ ಹಾಗೂ ಪಡಿತರ ಪಡೆಯಲು ಅಡ್ಡಿ ಹೀಗೆ ನಾನಾ ಪ್ರಕರಣಗಳು ರಾಜ್ಯದಲ್ಲಿ ಪದೇ ಪದೇ ವರದಿಯಾಗುತ್ತಲೇ ಇವೆ. ಇದೀಗ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಗೊಲ್ಲರ ಬೀದಿಗೆ ಕೆಲಸಕ್ಕೆ ಹೋಗಿದ್ದ ದಲಿತ ಯುವಕನನ್ನು ಹಿಗ್ಗಾಮುಗ್ಗ ಥಳಿಸಿ (Assault) ಅಮಾನವೀಯವಾಗಿ ವರ್ತಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಗೇರಮರಡಿ ಗ್ರಾಮದ ಗೊಲ್ಲರ ಬೀದಿಯಲ್ಲಿ ಹೊಸ ವರ್ಷದಂದು ದಲಿತ ಯುವಕನ ಮೇಲೆ ಹಲ್ಲೆ ನಡೆದಿದೆ. ದಲಿತ ಯುವಕ ಮಾರುತಿ ಗೊಲ್ಲರ ಬೀದಿಗೆ ಜೆಸಿಬಿ ಜೊತೆ ಕೆಲಸಕ್ಕೆ ಬಂದಿದ್ದ. ಮಾರುತಿ ದಲಿತ ಯುವಕ ಎಂದು ತಿಳಿಯುತ್ತಿದ್ದಂತೆ ಗೊಲ್ಲರ ಬೀದಿ ನಿವಾಸಿಗಳು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಯುವಕನಿಗೆ ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲ್ಲೆ ಖಂಡಿಸಿ ಇಂದು ಗೊಲ್ಲರ ಬೀದಿಗೆ ತೆರಳಿ ಪ್ರತಿಭಟನೆ ನಡೆಸಲು ದಲಿತ ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ. ಅಸ್ಪೃಶ್ಯತೆ ವಿರುದ್ಧ ದಲಿತ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಧಾರವಾಡ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ಹೋಟೆಲ್, ಕಟಿಂಗ್ ಶಾಪ್ಗೆ ದಲಿತರಿಗಿಲ್ಲ ಪ್ರವೇಶ!
ಧಾರವಾಡ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ
ವಿದ್ಯಾಕಾಶಿ ಧಾರವಾಡ ಜಿಲ್ಲೆಯ ರೊಟ್ಟಿಗವಾಡ ಗ್ರಾಮವೊಂದರಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಗ್ರಾಮದ ದಲಿತರಿಗೆ ಅಘೋಷಿತ ಬಹಿಷ್ಕಾರ ಹಾಕಲಾಗಿದೆ. ಜೊತೆಗೆ ಹೋಟೆಲ್, ಕಟಿಂಗ್, ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶವಿಲ್ಲ. ಅನಿಷ್ಟ ಪದ್ದತಿಯ ವಿರುದ್ದ ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವದೂ ಪ್ರಯೋಜನವಾಗಿಲ್ಲವಂತೆ. ಇದು ಆ ಗ್ರಾಮದ ಯುವಕರನ್ನ ಕೆರಳಿಸಿದ್ದು, ನಮಗೂ ಸಮಾನತೆ ಬೇಕು ಎನ್ನುತ್ತಿದ್ದಾರೆ.
ರೊಟ್ಟಿಗವಾಡ ಗ್ರಾಮದ ಹೋಟೆಲ್, ದೇವಸ್ಥಾನ, ಕಟಿಂಗ್ ಶಾಪ್ಗಳಿಗೆ ಪ್ರವೇಶ ಇಲ್ಲ. ಅದರಲ್ಲೂ ಹೋಟೆಲ್ ನಲ್ಲಿ ದಲಿತರಿಗೆ ಪ್ಲಾಸ್ಟಿಕ್ ಪ್ಲೇಟ್ನಲ್ಲಿ ಉಪಹಾರ ಕೊಡಲಾಗುತ್ತಿದೆ. ನೀರು ಎತ್ತಿ ಹಾಕುವ ಪದ್ದತಿ ಇನ್ನು ಇದೆ ಅಂತೆ. ಕಟಿಂಗ್ ಶಾಪ್ಗಳಿಗೆ ಹೋದರೆ ಕಟಿಂಗ್ ಮಾಡುವುದಿಲ್ಲ. ಪಂಚಾಯತ್ಗೆ ಹೋಗಿ ಕೇಳಕೊಂಡ ಬನ್ನಿ ಅನ್ನೋದ ಮಾಲೀಕರ ಉತ್ತರವಾಗಿದೆ.
ಚಿಕ್ಕಮಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ