AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hijab Verdict: ನಾವು ಸುಪ್ರೀಂಕೋರ್ಟ್​ ತೀರ್ಪು ಪ್ರಶ್ನಿಸಿರಲಿಲ್ಲ; ಹಿಜಾಬ್ ಪ್ರಕರಣದ ಅರ್ಜಿದಾರ ಹುಸೇನ್ ಕೋಡಿ ಬೇಂಗ್ರೆ

ನಾವು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿದ್ದು ಸಾಂವಿಧಾನಿಕ ಹಕ್ಕುಗಳ ಬಗ್ಗೆ. ಮುಂದಿನ ದಿನಗಳಲ್ಲಿ ಸುಪ್ರೀಂಕೋರ್ಟ್​ನಿಂದ ಸಂವಿಧಾನ ಬದ್ಧ ತೀರ್ಪೇ ಹೊರ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Hijab Verdict: ನಾವು ಸುಪ್ರೀಂಕೋರ್ಟ್​ ತೀರ್ಪು ಪ್ರಶ್ನಿಸಿರಲಿಲ್ಲ; ಹಿಜಾಬ್ ಪ್ರಕರಣದ ಅರ್ಜಿದಾರ ಹುಸೇನ್ ಕೋಡಿ ಬೇಂಗ್ರೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 13, 2022 | 1:34 PM

Share

ಚಿಕ್ಕಮಗಳೂರು: ಸುಪ್ರೀಂಕೋರ್ಟ್ ತೀರ್ಪನ್ನು (Supreme Court Judgement) ನಾವು ಸ್ವಾಗತಿಸುತ್ತೇವೆ. ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಕಾಳಜಿ ಬಗ್ಗೆ ನ್ಯಾಯಮೂರ್ತಿಗಳು ಮಾತನಾಡಿದ್ದಾರೆ. ಈ ದಿನ ಬಂದ ಅಭಿಪ್ರಾಯ ನಮಗೆ ಖುಷಿ ತಂದಿದೆ ಎಂದು ಸುಪ್ರೀಂಕೋರ್ಟ್​ನಲ್ಲಿ ಹಿಜಾಬ್ ಪ್ರಕರಣದ ಬಗ್ಗೆ ಮೇಲ್ಮನವಿ ಸಲ್ಲಿಸಿದ್ದ ಹುಸೇನ್ ಕೋಡಿ ಬೇಂಗ್ರೆ (Hussain Kodibengre) ಪ್ರತಿಕ್ರಿಯಿಸಿದರು. ಈ ಕುರಿತು ‘ಟಿವಿ9’ಗೆ ಪ್ರತಿನಿಧಿಗೆ ಪ್ರತಿಕ್ರಿಯಿಸಿದ ಅವರು, ಕೇವಲ ಹಿಜಾಬ್​ಗೋಸ್ಕರ ಹೆಣ್ಣುಮಕ್ಕಳ ಶಿಕ್ಷಣವನ್ನ ಬಲಿಕೊಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. ಹೈಕೋರ್ಟಿನ ತೀರ್ಪಿನ ಸಿಂಧುತ್ವದ ಕುರಿತು ಗೊಂದಲಗಳಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಸುಪ್ರೀಂಕೋರ್ಟ್​ನಲ್ಲಿ ನಾವು ಈ ಸಂಬಂಧ ಪ್ರಶ್ನೆಯನ್ನೇ ಮಾಡಿರಲಿಲ್ಲ ಎಂದರು.

ನಾವು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿದ್ದು ಸಾಂವಿಧಾನಿಕ ಹಕ್ಕುಗಳ ಬಗ್ಗೆ. ಮುಂದಿನ ದಿನಗಳಲ್ಲಿ ಸುಪ್ರೀಂಕೋರ್ಟ್​ನಿಂದ ಸಂವಿಧಾನ ಬದ್ಧ ತೀರ್ಪೇ ಹೊರ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಪ್ರಕರಣ

ಇಡೀ ವಿಶ್ವ ಕಾತರದಿಂದ ಎದುರು ನೋಡುತ್ತಿದ್ದ ಹಿಜಾಬ್ ವಿವಾದ (Hijab Controversy) ಕುರಿತು ಸುಪ್ರೀಂಕೋರ್ಟ್ (Supreme Court of India) ಗುರುವಾರ (ಅ 13) ಐತಿಹಾಸಿಕ ತೀರ್ಪು ನೀಡಿತು. ಹಿಜಾಬ್​ನ ಪರ ಹಾಗೂ ವಿರುದ್ಧ ವಾದ ಮಂಡಿಸಿದ್ದ ಬಹುತೇಕ ವಕೀಲರು ಈ ವೇಳೆ ನ್ಯಾಯಾಲಯದಲ್ಲಿ ಉಪಸ್ಥಿತರಿದ್ದರು. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಮತ್ತು ಸುಧಾಂಶು ಧುಲಿಯಾ ವಿಭಜಿತ ತೀರ್ಪು ನೀಡಿದ್ದಾರೆ. ಪ್ರಸ್ತುತ ನ್ಯಾಯಮೂರ್ತಿ ಹೇಮಂತ್ ಗುಪ್ತ ತೀರ್ಪು ಓದುತ್ತಿದ್ದಾರೆ. ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿ ಅರ್ಜಿಯನ್ನು ಅವರು ವಜಾ ಮಾಡಿದ್ದಾರೆ. ಆದರೆ ನ್ಯಾಯಮೂರ್ತಿ ಸುಧಾಂಶು ಅವರು ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದ್ದಾರೆ. ಒಬ್ಬ ನ್ಯಾಯಮೂರ್ತಿ ಹಿಜಾಬ್ ಪರವಾಗಿ ತೀರ್ಪು ನೀಡಿದ್ದರೆ, ಮತ್ತೊಬ್ಬರು ಹಿಜಾಬ್ ವಿರುದ್ಧ ತೀರ್ಪು ನೀಡಿದ್ದಾರೆ. ಇಬ್ಬರು ವಿಭಿನ್ನ ತೀರ್ಪು ನೀಡಿರುವುದರಿಂದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠಕ್ಕೆ (Chief Justice Bench) ವರ್ಗಾವಣೆ ಮಾಡಲಾಗಿದೆ.

ಪ್ರಕರಣದ ವಿಚಾರಣೆಗಾಗಿ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮುಂದಿನ ದಿನಗಳಲ್ಲಿ ವಿಸ್ತೃತ ನ್ಯಾಯಪೀಠ (Larger Bench) ರಚಿಸುವ ಸಾಧ್ಯತೆಯಿದೆ. ಪ್ರಕರಣವನ್ನು ಮತ್ತೊಮ್ಮೆ ಆಮೂಲಾಗ್ರ ಪರಿಶೀಲಿಸಿದ ನಂತರ ವಿಸ್ತೃತ ನ್ಯಾಯಪೀಠವು ತನ್ನ ತೀರ್ಪು ನೀಡಲಿದೆ. ವಿಸ್ತೃತ ನ್ಯಾಯಪೀಠ ರಚಿಸುವುದು ಮತ್ತು ವಿಚಾರಣೆಯ ಸ್ವರೂಪ ನಿರ್ಧರಿಸುವುದು ಮುಖ್ಯ ನ್ಯಾಯಮೂರ್ತಿಯ ವಿವೇಚನೆಗೆ ಬಿಟ್ಟ ಅಧಿಕಾರವಾಗಿರುತ್ತದೆ.

ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಪೀಠವು ಯಾವುದೇ ಮಧ್ಯಂತರ ಆದೇಶ ಪ್ರಕಟಿಸಿಲ್ಲ. ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ನಿಲುವಿನ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಹಿಜಾಬ್ ವಿವಾದದ ಬಗ್ಗೆ ಕರ್ನಾಟಕ ಹೈಕೋರ್ಟ್​ನ ಆದೇಶವು ಯಥಾಸ್ಥಿತಿಯಲ್ಲಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಸುಪ್ರೀಂಕೋರ್ಟ್​ನ ಹಿರಿಯ ವಕೀಲರು ವಿಶ್ಲೇಷಿಸಿದ್ದಾರೆ. ಆದರೆ ಈವರೆಗೆ ಸುಪ್ರೀಂಕೋರ್ಟ್​ನ ವಿಭಜಿತ ತೀರ್ಪಿನ ಪ್ರತಿ ಲಭ್ಯವಾಗಿಲ್ಲ. ಹೀಗಾಗಿ ಸ್ಪಷ್ಟವಾಗಿ ಹೀಗೆ ಎಂದು ಹೇಳಲು ಆಗುವುದಿಲ್ಲ. ಒಮ್ಮೆ ತೀರ್ಪಿನ ಪ್ರತಿಯನ್ನು ಪೂರ್ತಿ ಓದಿದ ನಂತರವೇ ನ್ಯಾಯಮೂರ್ತಿಗಳ ನಿಲುವು ಇಂಥದ್ದು ಎಂದು ಸ್ಪಷ್ಟವಾಗುತ್ತದೆ ಎಂದು ವಕೀಲರು ಪ್ರತಿಕ್ರಿಯಿಸಿದ್ದಾರೆ.

Published On - 1:34 pm, Thu, 13 October 22

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್