ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು: ಮಾಲೀಕನನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ

| Updated By: preethi shettigar

Updated on: Aug 01, 2021 | 12:55 PM

ಸುಮಾರು 25 ವರ್ಷದ ಒಂಟಿ ಸಲಗ ಸಾವನ್ನಪ್ಪಿದೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸದ್ಯ ಜಮೀನಿನ ಮಾಲೀಕನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು: ಮಾಲೀಕನನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ
Follow us on

ಚಿಕ್ಕಮಗಳೂರು: ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಗಾಳಿ ಪೂಜೆ ಗ್ರಾಮದಲ್ಲಿ ನಡೆದಿದೆ. ಸುಮಾರು 25 ವರ್ಷದ ಒಂಟಿ ಸಲಗ ಸಾವನ್ನಪ್ಪಿದೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸದ್ಯ ಜಮೀನಿನ ಮಾಲೀಕನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿ ನವಿಲು ಸಾವು
ಕಳೆದ ಕೆಲವು ದಿನಗಳಿಂದ ಮಳೆರಾಯನ ಆರ್ಭಟ ಜೋರಾಗಿದ್ದು, ಪ್ರವಾಹ ಭೀತಿಯಿಂದ ಜನರು ನಲುಗಿ ಹೋಗಿದ್ದಾರೆ. ಅದರಲ್ಲೂ ಬೆಳಗಾವಿ ಭಾಗದಲ್ಲಿ ಭಾರೀ ಮಳೆಯಾಗಿದ್ದು, ಕೃಷ್ಣಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ನದಿ ಪಾತ್ರದ ಜನರನ್ನು ಬೇರೆಡೆ ಸ್ಥಳಾಂತರ ಮಾಡಲಾಗುತ್ತಿದೆ. ಹೀಗಿರುವಾಗಲೇ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಬಳಿ ಇಂದು ದುರಂತವೊಂದು ಸಂಭವಿಸಿದ್ದು, ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿ ರಾಷ್ಟ್ರಪಕ್ಷಿ ನವಿಲು ಸಾವಿಗೀಡಾಗಿದೆ.

ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿ ಸಾವನ್ನಪ್ಪಿದ ನವಿಲನ್ನು ದಡಕ್ಕೆ ತಂದ ಬಳಿಕ ಎನ್‌ಡಿಆರ್‌ಎಫ್, ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಗೌರವ ಸೂಚಿಸಿದ್ದು, ರಾಷ್ಟ್ರಧ್ವಜ ಹೊದಿಸಿ ಸರ್ಕಾರಿ ಗೌರವದೊಂದಿಗೆ ನವಿಲಿನ ಅಂತ್ಯಕ್ರಿಯೆ ಮಾಡಿದ್ದಾರೆ.

ಕೊಡಗು: ದನಗಳನ್ನು ಕರೆತರಲು ಹೋದ ವ್ಯಕ್ತಿ ಮೇಲೆ ಎರಗಿದ ಕಾಡಾನೆ
ಆನೆ ದಾಳಿಗೆ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಪೈಸಾರಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕರಾದ ಉಲ್ಲಾಸ್​ (63) ಸಾವನ್ನಪ್ಪಿದ ದುರ್ದೈವಿ. ದನಗಳನ್ನು ಕರೆತರಲು ತೋಟಕ್ಕೆ ತೆರಳಿದ್ದಾಗ ಏಕಾಏಕಿ ಆನೆ ದಾಳಿ ಮಾಡಿದೆ ತೀವ್ರವಾಗಿ ಗಾಯಗೊಂಡ ಉಲ್ಲಾಸ್​ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಉಲ್ಲಾಸ್​ ಮೃತಪಟ್ಟಿದ್ದಾರೆ. ಸದ್ಯ ಕುಶಾಲನಗರ ಗ್ರಾ‌ಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:
ಕೊಡಗು ಅರಣ್ಯ ಪ್ರದೇಶದಲ್ಲಿ ಹುಲಿ ದಾಳಿಗೆ ಮರಿಯಾನೆ ಸಾವು; ಮತ್ತೊಂದೆಡೆ ಕಾಡಾನೆ ಸಾವು

ಕೊಡಗು: ದನಗಳನ್ನು ಕರೆತರಲು ಹೋದ ವ್ಯಕ್ತಿ ಮೇಲೆ ಎರಗಿದ ಕಾಡಾನೆ; ಏಕಾಏಕಿ ದಾಳಿಯಿಂದ ಕಾರ್ಮಿಕ ಸಾವು