ಕಾಡಾನೆಗಳ ಸ್ಥಳಾಂತರ ವಿವಾದ: ಸರ್ಕಾರದ ಭರವಸೆ ಬೆನ್ನಲ್ಲೇ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಕೈ ಶಾಸಕರು

ಹಾಸನದಿಂದ ಮೂಡಿಗೆರೆಗೆ ಕಾಡಾನೆಗಳ ಸ್ಥಳಾಂತರ ವಿರೋಧಿಸಿ ಶಾಸಕರಾದ ಎಚ್.ಡಿ. ತಮ್ಮಯ್ಯ ಮತ್ತು ನಯನಾ ಮೋಟಮ್ಮ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ್ದರು. ಕಾರ್ಯಾಚರಣೆ ನಿಲ್ಲಿಸುವ ಸರ್ಕಾರದ ಭರವಸೆ ಬೆನ್ನಲ್ಲೇ ಶಾಸಕರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಮತ್ತೊಂದೆಡೆ ನೆಗಳ ಸ್ಥಳಾಂತರ ವಿರೋಧಿಸಿ ಮೂಡಿಗೆರೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೂಡಿಗೆರೆ ಅರಣ್ಯ ಇಲಾಖೆಗೆ ಮುತ್ತಿಗೆ ಯತ್ನವೂ ನಡೆದಿದ್ದು, ಸ್ಥಳಕ್ಕೆ DFO, CCF ಬರುವಂತೆ ಸಾರ್ವಜನಿಕರು ಪಟ್ಟು ಹಿಡಿದ ಪ್ರಸಂಗೂ ನಡೆದಿದೆ.

ಕಾಡಾನೆಗಳ ಸ್ಥಳಾಂತರ ವಿವಾದ: ಸರ್ಕಾರದ ಭರವಸೆ ಬೆನ್ನಲ್ಲೇ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಕೈ ಶಾಸಕರು
ಸ್ಪೀಕರ್ ಜಿ.ಎಸ್. ಪಾಟೀಲ್ ಅವರನ್ನು ಭೇಟಿ ಮಾಡಿ ಚರ್ಚೆ
Image Credit source: Nayana Motamma Facebook Page
Edited By:

Updated on: Nov 25, 2026 | 2:02 PM

ಚಿಕ್ಕಮಗಳೂರು, ನವೆಂಬರ್​​ 25: ಹಾಸನದಿಂದ ಚಿಕ್ಕಮಗಳೂರು ಕಡೆಗೆ, ವಿಶೇಷವಾಗಿ ಮೂಡಿಗೆರೆ ಪ್ರದೇಶಕ್ಕೆ ಆನೆಗಳನ್ನು ಸ್ಥಳಾಂತರಿಸುವ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ನಿರ್ಧಾರದಿಂದ ಜನರ ಜೀವಕ್ಕೆ ಅಪಾಯವಿದೆ, ತೋಟಗಳು ಹಾಳಾಗುತ್ತಿವೆ ಮತ್ತು ಜನರು ನಿರ್ಭೀತಿಯಿಂದ ಓಡಾಡಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಜನರಿಗೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ ಎಂದು ಚಿಕ್ಕಮಗಳೂರು ಭಾಗದ ಶಾಸಕರಾದ ಎಚ್.ಡಿ. ತಮ್ಮಯ್ಯ ಮತ್ತು ನಯನಾ ಮೋಟಮ್ಮ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ್ದರು. ಸ್ಪೀಕರ್ ಜಿ.ಎಸ್. ಪಾಟೀಲ್ ಅವರನ್ನು ಭೇಟಿ ಮಾಡಿ ಚರ್ಚೆಯನ್ನೂ ನಡೆಸಿದ್ದರು. ಆದರೆ ರಾಜ್ಯ ಸರ್ಕಾರ ಕಾರ್ಯಾಚರಣೆ ನಿಲ್ಲಿಸುವುದಾಗಿ ಭರವಸೆ ನೀಡಿದ ಹಿನ್ನೆಲೆ ಶಾಸಕರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಕಟ್ಟೆಯೊಡೆದ ಸಾರ್ವಜನಿಕರ ಆಕ್ರೋಶ

ಇನ್ನು ಮತ್ತೊಂದೆಡೆ ಆನೆಗಳ ಸ್ಥಳಾಂತರ ವಿರೋಧಿಸಿ ಮೂಡಿಗೆರೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೂಡಿಗೆರೆ ಅರಣ್ಯ ಇಲಾಖೆಗೆ ಮುತ್ತಿಗೆ ಯತ್ನವೂ ನಡೆದಿದ್ದು, ಸ್ಥಳಕ್ಕೆ DFO, CCF ಬರುವಂತೆ ಸಾರ್ವಜನಿಕರು ಪಟ್ಟು ಹಿಡಿದ ಪ್ರಸಂಗೂ ನಡೆದಿದೆ. ಹಾಸನ ಉಸ್ತುವಾರಿ ಸಚಿವ ಶಿವಲಿಂಗೇಗೌಡ, ಅರಣ್ಯ ಸಚಿವ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಸಿಡಿದೆ್ದಿರುವ ಚಿಕ್ಕಮಗಳೂರಿಗರು ಮೂಡಿಗೆರೆ ಪಟ್ಟಣ ಬಂದ್​​ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಜಾಗೃತಾ ಕ್ರಮವಾಗಿ ಅರಣ್ಯ ಇಲಾಖೆಯ ಕಚೇರಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಮೂಡಿಗೆರೆ ಬಸ್ ನಿಲ್ದಾಣದ ಬಳಿ ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆ ಕೂಡ ನಡೆಸಲಾಗಿದ್ದು, ಹಾಸನ ಜಿಲ್ಲೆಯ ಉಸ್ತುವಾರಿ ಸಚಿವ ಶಿವಲಿಂಗೇಗೌಡರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Loading...

ಇದನ್ನೂ ಓದಿ: ಶಾಸಕರೇ ಸಲಹೆ ಕೊಡಲಿ, ಅವರು ಹೇಳಿದಂತೆಯೇ ಆನೆಗಳನ್ನು ಓಡಿಸುತ್ತೇವೆ: ರಾಮಲಿಂಗಾರೆಡ್ಡಿ ಖಡಕ್ ಮಾತು

ಈ ನಡುವೆ 38 ಆನೆಗಳನ್ನು ಮೂಡಿಗೆರೆ ಅರಣ್ಯದತ್ತ ಓಡಿಸಿದರೂ ಹಾಸನ ಜಿಲ್ಲೆಯ ಬೇಲೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಮಾತ್ರ ನಿಂತಿಲ್ಲ. ಕೊಗೋಡು ಬಳಿ 7 ಎಕರೆ ಭತ್ತದ ಬೆಳೆಯನ್ನು ಕಾಡಾನೆ ನಾಶ ಮಾಡಿದ್ದು, ರೈತ ಮಂಜುನಾಥ ಎಂಬುವರಿಗೆ ಸೇರಿದ ಗದ್ದೆಯಲ್ಲಿನ ಬೆಳೆ ಮಣ್ಣುಪಾಲಾಗಿದೆ. ಸಾಲಸೋಲಮಾಡಿ ಭತ್ತ ಬೆಳೆದಿದ್ದ ರೈತ ಮಂಜುನಾಥ ಘಟನೆಯಿಂದ ಕಂಗಾಲಾಗಿದ್ದು, ಕಾಡಾನೆ ಹಾವಳಿಯಿಂದ ಶಾಶ್ವತ ಪರಿಹಾರಕ್ಕೆ ರೈತರು ಒತ್ತಾಯಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:01 pm, Wed, 25 November 26

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us