ಯಾವುದೇ ಕಾರಣಕ್ಕೂ ಮೈಸೂರಲ್ಲಿ ಟಿಪ್ಪು ಪ್ರತಿಮೆ ನಿರ್ಮಿಸಲು ಬಿಡಲ್ಲ: ತನ್ವೀರ್ ವಿರುದ್ಧ ಮುತಾಲಿಕ್ ಆಕ್ರೋಶ

ಯಾವುದೇ ಕಾರಣಕ್ಕೂ ಮೈಸೂರಲ್ಲಿ ಟಿಪ್ಪು ಪ್ರತಿಮೆ ನಿರ್ಮಿಸಲು ಬಿಡಲ್ಲ. ಒಂದು ವೇಳೆ ನಿರ್ಮಿಸಿದ್ರೆ ಬಾಬ್ರಿ ಮಸೀದಿ ರೀತಿ ಧ್ವಂಸ ಮಾಡುತ್ತೇವೆ ಎಂದು ಪ್ರಮೋದ್ ಮುತಾಲಿಕ್​ ಎಚ್ಚರಿಕೆ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ಮೈಸೂರಲ್ಲಿ ಟಿಪ್ಪು ಪ್ರತಿಮೆ ನಿರ್ಮಿಸಲು ಬಿಡಲ್ಲ: ತನ್ವೀರ್ ವಿರುದ್ಧ ಮುತಾಲಿಕ್ ಆಕ್ರೋಶ
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Nov 12, 2022 | 10:39 PM

ಚಿಕ್ಕಮಗಳೂರು: ಯಾವುದೇ ಕಾರಣಕ್ಕೂ ಮೈಸೂರಲ್ಲಿ ಟಿಪ್ಪು ಪ್ರತಿಮೆ (Tipu statue) ನಿರ್ಮಿಸಲು ಬಿಡಲ್ಲ. ಒಂದು ವೇಳೆ ನಿರ್ಮಿಸಿದರೆ ಬಾಬ್ರಿ ಮಸೀದಿ ರೀತಿ ಧ್ವಂಸ ಮಾಡುತ್ತೇವೆ ಎಂದು ಕಾಂಗ್ರೆಸ್​ ಶಾಸಕ ತನ್ವೀರ್ ಸೇಠ್ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮುಸ್ಲಿಮರಲ್ಲಿ ಮೂರ್ತಿ ಪೂಜೆ ಇಲ್ಲ. ಅಲ್ಲಾನನ್ನ ಬಿಟ್ಟರೆ ಪೈಗಂಬರ್‌ರನ್ನೂ ಪೂಜಿಸಲ್ಲ. ಇವರು 100 ಅಡಿಯ ಟಿಪ್ಪು ಮೂರ್ತಿ ಇಡುತ್ತೇವೆ ಅನ್ನೋದು ದೂರ್ತತನ ಮತ್ತು ಅದು ಸೊಕ್ಕಿನ ಮಾತು. ಹಾಗಾದರೆ ಮುಸ್ಲಿಮರು ಮೂರ್ತಿ ಪೂಜೆ ಪ್ರಾರಂಭಿಸಿದ್ದೇವೆ ಎಂದು ಒಪ್ಪಿಕೊಂಡಂತೆ ಆಯ್ತು ಎಂದರು. ಇಸ್ಲಾಂನಲ್ಲಿ ಮೂರ್ತಿ ಪೂಜೆ ಇಲ್ಲ ಅಂತ ಒಪ್ಪಿಕೊಳ್ಳಬೇಕು. ಇಲ್ಲವಾದರೆ ನಮ್ಮ ದೇವಸ್ಥಾನ ಬಿಟ್ಟುಕೊಡಬೇಕು ಎಂದು ಆಗ್ರಹಿಸಿದರು.

ಮೈಸೂರು ನಮ್ಮ ಸ್ವಾಭಿಮಾನದ ಸಾಂಸ್ಕೃತಿಕ ಕೇಂದ್ರ. ಮೈಸೂರು ಮಹಾರಾಜರ ಮಹಾರಾಣಿಯನ್ನ ಬಂಧಿಸಿ, ಮೋಸದಿಂದ ರಾಜ್ಯಭಾರ ಮಾಡಿದ ವ್ಯಕ್ತಿ ಆತ. ಅವನ ಮೂರ್ತಿಯನ್ನ ನೂರು ಅಲ್ಲ, ಒಂದಿಂಚು ಜಾಗದಲ್ಲೂ ನಿರ್ಮಾಣ ಮಾಡೋದಕ್ಕೆ ಬಿಡೋದಿಲ್ಲ. ಜ್ಞಾನವ್ಯಾಪಿ ಮಸೀದಿಯಲ್ಲಿ ಶಿವಲಿಂಗ ಮೂರ್ತಿ ಸಂಬಂಧಪಟ್ಟಂತೆ ಇದೆ. ಹಾಗಾದರೆ, ಬಿಟ್ಟುಕೊಡಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಯಲ್ಲೂ ದೇವಸ್ಥಾನದ ಸ್ವರೂಪ ಸಿಕ್ಕಿದೆ. ಅದನ್ನೂ ಬಿಡಬೇಕು. ಶ್ರೀರಂಗಪಟ್ಟಣದ ಹನುಮನ ಮಂದಿರ ಇಂದು ಮದರಸ ಆಗಿದೆ. ಅದನ್ನೂ ಬಿಟ್ಟುಕೊಡಬೇಕು. ಇಲ್ಲವಾದರೆ ತನ್ವೀರ್ ಸೇಠ್ ವಿರುದ್ಧ ಫತ್ವಾ ಹೊರಡಿಸಬೇಕು, ಬಹಿಷ್ಕಾರ ಹಾಕಬೇಕು. ನೀವು ಇವುಗಳನ್ನ ಮಾಡ್ತೀರೋ ಇಲ್ವೋ ಗೊತ್ತಿಲ್ಲ. ಆದರೆ, ಯಾವುದೇ ಪರಿಸ್ಥಿತಿಯಲ್ಲೂ ಮೈಸೂರಲ್ಲಿ ಮೂರ್ತಿ ನಿರ್ಮಾಣಕ್ಕೆ ಬಿಡಲ್ಲ. ಬಾಬ್ರಿ ಮಸೀದಿ ಒಡೆದ ರೀತಿಯಲ್ಲೇ ಲಕ್ಷಾಂತರ ಜನ ಬಂದು ಮೂರ್ತಿಯನ್ನ ಒಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

100 ಅಡಿ ಎತ್ತರದ ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಾಣ ಖಚಿತ: ತನ್ವೀರ್ ಸೇಠ್

ಮೈಸೂರಿನಲ್ಲಿ ಮಾತನಾಡಿದ ಕಾಂಗ್ರೆಸ್​ ಶಾಸಕ ತನ್ವೀರ್ ಸೇಠ್, ಮೈಸೂರು ಅಥವಾ ಶ್ರೀರಂಗಪಟ್ಟಣದಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದಾರೆ. ಕಂಚು ಅಥವಾ ಪಂಚಲೋಹ ಪ್ರತಿಮೆ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು. ಇಸ್ಲಾಂ ಧರ್ಮದಲ್ಲಿ ಪ್ರತಿಮೆ ಸ್ಥಾಪನೆ ನಿಷೇಧವಿದೆ. ಇಂದಿನ ಪರಿಸ್ಥಿತಿಯಲ್ಲಿ ಪ್ರತಿಮೆ ನಿರ್ಮಾಣ ಅನಿವಾರ್ಯವಾಗಿದೆ. ಪ್ರತಿಮೆ ಸ್ಥಾಪನೆಗೂ ಮುನ್ನವೇ ಕೆಡವುದಾಗಿ ಮಾತು ಕೇಳಿಬಂದಿವೆ. ಯಾರ ವಿರೋಧಕ್ಕೂ ನಾವು ಬಗ್ಗುವುದಿಲ್ಲ ಎಂದು ತಿಳಿಸಿದ್ದಾರೆ.

ನಮ್ಮ ರಕ್ಷಣೆಗೆ ಸಂವಿಧಾನವಿದೆ. ಟಿಪ್ಪು ವಿರೋಧಿಸಿದರೆ ತಮಗೆ ಲಾಭ ಎಂದು ಟಿಪ್ಪು ಹೆಸರನ್ನು ಬಿಜೆಪಿ ಬಳಸುತ್ತಿದೆ ಅದು ಬಿಜೆಪಿ ಭ್ರಮೆ. ಮೈಸೂರಿನಲ್ಲಿ ಟಿಪ್ಪು ವಿರುದ್ಧದ ನಾಟಕ ಪ್ರದರ್ಶನಕ್ಕೆ ನನ್ನ ವಿರೋಧವಿದೆ. ಇದನ್ನು ತಡೆಯಲು ಕೋರ್ಟ್ ಮೊರೆ ಹೋಗುತ್ತಿದ್ದೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:19 pm, Sat, 12 November 22

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?