Chikkamagaluru News: ಚಿಕ್ಕಮಗಳೂರು: ಎತ್ತು ತಿವಿದು ಯುವ ರೈತ ಸಾವು

ಚಿಕ್ಕಮಗಳೂರಿನಲ್ಲಿ ಆನೆಗಳ ದಾಳಿ ಜನರನ್ನು ಭಯಬೀತಿಗೊಳಿಸಿವೆ. ಈ ಆತಂಕದ ಮಧ್ಯೆ ಯುವ ರೈತನೋರ್ವನನ ಮೇಲೆ ಎತ್ತು ದಾಳಿ ಮಾಡಿ ಬಲಿ ಪಡೆದುಕೊಂಡಿದ್ದು, ಇದೀಗ ಎತ್ತಿನ ಮಾಲೀಕನ ವಿರುದ್ಧ ದೂರು ದಾಖಲಾಗಿದೆ.

Chikkamagaluru News: ಚಿಕ್ಕಮಗಳೂರು: ಎತ್ತು ತಿವಿದು ಯುವ ರೈತ ಸಾವು
ಅರುಣ್,
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on:Aug 22, 2023 | 1:52 PM

ಚಿಕ್ಕಮಗಳೂರು,(ಆಗಸ್ಟ್ 22): ಹೊಲಕ್ಕೆ ತೆರಳುತ್ತಿದ್ದ ವೇಳೆ ಎತ್ತು ದಾಳಿ ಮಾಡಿ ತಿವಿದ ಪರಿಣಾಮ ಯುವ ರೈತನೋರ್ವ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ವಿ. ಸಿದ್ದರಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಅರುಣ್ (29) ಮೃತ ದುರ್ವೈವಿ. ಅರುಣ್, ಹೊಲಕ್ಕೆ ತೆರಳುತ್ತಿದ್ದ ವೇಳೆ ಎತ್ತು ಏಕಾಏಕಿ ದಾಳಿ ಮಾಡಿದೆ. ಕೊಂಬಿನಿಂದ ತಿವಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅರುಣ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ನಿನ್ನೆ (ಆಗಸ್ಟ್ 21) ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರರ್ಕಾರಿ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ನೇಣಿಗೆ ಶರಣು

ಬಾಗಲಕೋಟೆ ,(ಆಗಸ್ಟ್ 22): ಸರಕಾರಿ ಪದವಿ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ( Bagalakote) ಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಪ್ರಿನ್ಸಿಪಾಲ್ ನಾಗರಾಜ ಮುದಗಲ್ (56) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಲೇಜು ಕ್ಯಾಂಟೀನ್ ನ ಸ್ವೇರ್ ಕೇಸ್ ಗ್ರಿಲ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು(ಆಗಸ್ಟ್ 22) ಕಾಲೇಜಿನಲ್ಲಿ ನಡೆಯಬೇಕಿದ್ದ ಜಾನಪದ ಜಾತ್ರೆ ಆಮಂತ್ರಣವನ್ನು ನೀಡಿ ನಿನ್ನೆ ಕಾಲೇಜಿಗೆ ವಾಪಸ್ಸಾಗಿದ್ದರು. ಆದರೆ ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ಸ್ಥಳಕ್ಕೆ ಹುನಗುಂದ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕಳೆದ 24 ಗಂಟೆಗಳಲ್ಲಿ 13 ಅಪಘಾತಗಳು! ಎಲ್ಲೆಲ್ಲಿ ಎಷ್ಟು ಸಾವು? ಇಲ್ಲಿದೆ ಮಾಹಿತಿ

ಎರಡು ಗುಂಪುಗಳ ಸಂಘರ್ಷ

ಕೋಲಾರ,(ಆಗಸ್ಟ್ 22): ಹಳೇ ದ್ವೇಷವನ್ನೇ ಗಮನದಲ್ಲಿಟ್ಟುಕೊಂಡು ಎರಡು ಗುಂಪುಗಳ ನಡುವೆ ಸಂಘರ್ಷ ಏರ್ಪಟ್ಟಿದ್ದು, ಓರ್ವನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲಾಗಿದೆ. ಕೋಲಾರ ( Kolar) ಜಿಲ್ಲೆಯ ಕೆಜಿಎಫ್ ( KGF)ನಗರದ ಇಟಿ ಬ್ಲಾಕ್ ನಲ್ಲಿ ಈ ಘಟನೆ ನಡೆದಿದ್ದು, ವಿಶಾಲ್ ಎಂಬುವವರುನ್ನು ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಮಾರ್ಟಿನ್,ಸುಜಯ್,ಅರುಳ್, ದರ್ಶನ್ ಗ್ಯಾಂಗ್ ನಿಂದ ಹಲ್ಲೆ ನಡೆದಿದ್ದು, ಗಾಯಾಳು ವಿಶಾಲ್ ರವರನ್ನು ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಹಲ್ಲೆ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:56 pm, Tue, 22 August 23

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್