ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು
Heart Attack To Uday Garudachar: ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಶಾಸಕ ಉದಯ ಗರುಡಾಚಾರ್
ಬೆಂಗಳೂರು, (ಜನವರಿ 17): ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ (Uday Garudachar) ಹೃದಯಾಘಾತವಾಗಿದ್ದು (heart attack), ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು(ಜನವರಿ 17) ಸಂಜೆ ವೇಳೆ ಅವರಿಗೆ ಹೃದಯ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಿದ್ದು, ಸದ್ಯ ತಜ್ಞ ವೈದ್ಯರಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ ಎಂದು ತಿಳಿದುಬಂದಿದೆ.
ಇಂದು ಸಂಜೆ ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಲಘು ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಶಾಸಕರಿಗೆ ಆಂಜಿಯೋಪ್ಲಾಸ್ಟಿ ಮಾಡಿ ಚಿಕಿತ್ಸೆ ಮುಂದುವರೆಸಿದ್ದಾರೆ.
Published On - 11:30 pm, Wed, 17 January 24




