
ಬಳ್ಳಾರಿ: ಟ್ರ್ಯಾಕ್ಟರ್ ಡಿಕ್ಕಿಯೊಡೆದ ಪರಿಣಾಮ ಬೈಕ್‌ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೂವಿನಹಡಗಲಿಯಲ್ಲಿ ನಡೆದಿದೆ. ಒಂದೇ ಬೈಕ್ನಲ್ಲಿ ತಂದೆ-ತಾಯಿ ಮತ್ತು ಮಗ ಹೋಗುತ್ತಿದ್ದರು. ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ 5 ವರ್ಷದ ಮಗ ನಿರಂಜನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಂದೆ ಅರವಿಂದ್ ಹಾಗೂ ತಾಯಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಾಲಕನ ಸಾವಿನಿಂದ ರೊಚ್ಚಿಗೆದ್ದ ಸ್ಥಳೀಯರು ಕಬ್ಬಿನ ಟ್ರ್ಯಾಕ್ಟರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಹೂವಿನಹಡಗಲಿ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.