ದಕ್ಷಿಣ ಕನ್ನಡದಲ್ಲಿ ಜೀತ, ಬಾಲಕಾರ್ಮಿಕ ಪದ್ಧತಿ ಜೀವಂತ ಆರೋಪ; ದಾಳಿ ವೇಳೆ ಸುಮಾರು 10 ಮಕ್ಕಳ ರಕ್ಷಣೆ

| Updated By: Skanda

Updated on: Jul 10, 2021 | 9:17 AM

ರಾಜ್ಯದ ವಿವಿಧ ಭಾಗಗಳಿಂದ ಅಪ್ರಾಪ್ತ ವಯಸ್ಸಿನ ಮಕ್ಕಳು ಹಾಗೂ ವಯಸ್ಕರನ್ನು ಕರೆದುಕೊಂಡು ಬರಲಾಗಿದೆ. ವಯಸ್ಕರಿಗೆ ಕೆಲಸ ಬಿಟ್ಟ ನಂತರ ಸಂಬಳ ಕೊಡುವುದಾಗಿ ಹೇಳಿ ದುಡಿಸಿಕೊಳ್ಳಲಾಗುತ್ತಿತ್ತು ಎನ್ನಲಾಗಿದೆ. ಮಕ್ಕಳನ್ನು ಯಾವ ರೀತಿಯಲ್ಲಿ ಕರೆದುಕೊಂಡು ಬಂದರು, ಅವರಿಗೆ ಹಣವನ್ನೂ ನೀಡದೇ ಬಲವಂತವಾಗಿ ದುಡಿಸಿಕೊಳ್ಳಲಾಗುತ್ತಿತ್ತಾ ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ದಕ್ಷಿಣ ಕನ್ನಡದಲ್ಲಿ ಜೀತ, ಬಾಲಕಾರ್ಮಿಕ ಪದ್ಧತಿ ಜೀವಂತ ಆರೋಪ; ದಾಳಿ ವೇಳೆ ಸುಮಾರು 10 ಮಕ್ಕಳ ರಕ್ಷಣೆ
ದಾಳಿ ವೇಳೆ ಪತ್ತೆಯಾದ ಅಪ್ರಾಪ್ತರು
Follow us on

ದಕ್ಷಿಣಕನ್ನಡ: ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಜೀತಪದ್ಧತಿಗೆ ನೂಕಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಪಂಜ ಗ್ರಾಮದ ಕರಿಕಳ ಬಳಿಯಿರುವ ವಿಶ್ವನಾಥ್ ಭಟ್ ಎನ್ನುವವರ ಮನೆ ಮೇಲೆ ಜಿಲ್ಲಾಡಳಿತದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಮಕ್ಕಳನ್ನು ಕರೆತಂದು ಬಲವಂತವಾಗಿ ಜೀತಪದ್ಧತಿಗೆ ನೂಕಿದ್ದರು ಎನ್ನುವ ಆರೋಪ ವಿಶ್ವನಾಥ್ ಭಟ್ ಮೇಲಿದ್ದು, ಸ್ಥಳೀಯರ ದೂರಿನ ಮೇರೆಗೆ ದಾಳಿ ಮಾಡಲಾಗಿದೆ.

ವಿಶ್ವನಾಥ್ ಭಟ್ ದಂಪತಿ ತಮ್ಮ ಮನೆಯಲ್ಲಿ ಅಪ್ರಾಪ್ತ ವಯಸ್ಸಿನ ಸುಮಾರು 10 ಮಕ್ಕಳನ್ನು ಇರಿಸಿಕೊಂಡಿದ್ದರು. ಮಕ್ಕಳ ಜತೆ ಕೆಲ ವಯಸ್ಕರನ್ನೂ ದುಡಿಸಿಕೊಳ್ಳುತ್ತಿದ್ದರು ಎನ್ನುವ ಆರೋಪ ಬಲವಾಗಿ ಕೇಳಿಬಂದಿದೆ. ದೂರನ್ನು ಆಧರಿಸಿದ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶಕಿ ಪಲ್ಲವಿ ಅಕುರಾತಿ ದಾಳಿಗೆ ಆದೇಶ ನೀಡಿದ್ದು, ದಕ್ಷಿಣಕನ್ನಡ ಜಿಲ್ಲಾಡಳಿತದ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ರಾಜ್ಯದ ವಿವಿಧ ಭಾಗಗಳಿಂದ ಅಪ್ರಾಪ್ತ ವಯಸ್ಸಿನ ಮಕ್ಕಳು ಹಾಗೂ ವಯಸ್ಕರನ್ನು ಕರೆದುಕೊಂಡು ಬರಲಾಗಿದೆ. ವಯಸ್ಕರಿಗೆ ಕೆಲಸ ಬಿಟ್ಟ ನಂತರ ಸಂಬಳ ಕೊಡುವುದಾಗಿ ಹೇಳಿ ದುಡಿಸಿಕೊಳ್ಳಲಾಗುತ್ತಿದೆ ಎನ್ನುವ ವಿಚಾರ ತಿಳಿದುಬಂದಿದೆ. ಮಕ್ಕಳನ್ನು ಯಾವ ರೀತಿಯಲ್ಲಿ ಕರೆದುಕೊಂಡು ಬಂದರು, ಅವರಿಗೆ ಹಣವನ್ನೂ ನೀಡದೇ ಬಲವಂತವಾಗಿ ದುಡಿಸಿಕೊಳ್ಳಲಾಗುತ್ತಿತ್ತಾ ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಆದರೆ, ಬಾಲಕಾರ್ಮಿಕರು ಮತ್ತು ಜೀತಪದ್ದತಿಯನ್ನು ಅನುಸರಿಸಲಾಗುತ್ತಿದೆ ಎಂದೇ ಸ್ಥಳೀಯರು ದೂರು ನೀಡಿದ್ದ ಕಾರಣ ಈ ಬಗ್ಗೆ ತನಿಖೆ ಮುಂದುವರೆಸಿರುವ ಅಧಿಕಾರಿಗಳು ಮಾಹಿತಿ ಕಲರಹಾಕುತ್ತಿದ್ದಾರೆ. ದಾಳಿ ವೇಳೆ ರಕ್ಷಿಸಲಾದ ಮಕ್ಕಳನ್ನು 48 ಗಂಟೆ ಒಳಗೆ ಆಪ್ತ ಸಮಾಲೋಚನೆಗೆ ಒಳಪಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ.

ದಾಳಿ ನಡೆಸಿದ ಅಧಿಕಾರಿಗಳು

ಮಗನಿಗೆ ಬೆಂಕಿ ಹಚ್ಚಿದ ತಂದೆ
ಮಂಗಳೂರು:
ಪುತ್ರನನ್ನು ಮನೆಯೊಳಗೆ ಕೂಡಿ ಹಾಕಿ ಪೆಟ್ರೋಲ್ ಸುರಿದು ತಂದೆಯೇ ಬೆಂಕಿ ಹಚ್ಚಿದ ಘಟನೆ ಮಂಗಳೂರು ತಾಲೂಕಿನ ಜಪ್ಪಿನಮೊಗರು ಗ್ರಾಮದ ಕೊಪ್ಪರಿಗೆಗುತ್ತು ಪ್ರದೇಶದಲ್ಲಿ ಇತ್ತೀಚೆಗಷ್ಟೇ ವರದಿಯಾಗಿತ್ತು. ಕ್ಷುಲ್ಲಕ ಕಾರಣಕ್ಕೆ ತಂದೆ ವಿಶ್ವನಾಥ ಶೆಟ್ಟಿ ಎಂಬುವವರು ಮಗ ಸ್ವಾಮಿತ್ ಶೆಟ್ಟಿ (25)ಗೆ ಬೆಂಕಿ ಹಚ್ಚಿದ್ದರು. ಸ್ವಾಮಿತ್ ಶೆಟ್ಟಿ ಮತ್ತು ವಿಶ್ವನಾಥ ಶೆಟ್ಟಿ ಹೈನುಗಾರಿಕೆ ನಡೆಸುತ್ತಿದ್ದರು. ದನಗಳನ್ನು ಹೊರಗಡೆ ಕಟ್ಟಿಹಾಕಿದ್ದ ವಿಚಾರದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದು ಅನಾಹುತಕ್ಕೆ ಕಾರಣವಾಗಿತ್ತು.

ಅಪ್ಪ, ಮಗನ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದು, ನಂತರ ಪುತ್ರನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ತಂದೆ ಹಲ್ಲೆ ಮಾಡಿದ್ದರು. ಬಳಿಕ ಮಗನನ್ನು ಮನೆಯೊಳಗೆ ಕೂಡಿ ಹಾಕಿ ಚಿಲಕ ಹಾಕಿ, ಪುತ್ರನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಸುಟ್ಟಗಾಯಗಳಾದ ಕಾರಣ ಸ್ವಾಮಿತ್ ಶೆಟ್ಟಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತಕ್ಷಣ ಚಿಕಿತ್ಸೆ ನೀಡಲಾಗಿತ್ತು. ಕಂಕನಾಡಿ ನಗರ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:
ಗ್ರಾಮೀಣ ಮಕ್ಕಳು ಹೆಸರು ಬರೆಯುವುದನ್ನೂ ಮರೆತಿದ್ದಾರೆ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೇಸರ 

ಕಾಡುಪ್ರಾಣಿಗಳ ಭಯಕ್ಕೆ ಶಿಕ್ಷಣದಿಂದ ದೂರವಾಗುತ್ತಿರುವ ಮಕ್ಕಳು; ಪರ್ಯಾಯ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಮನವಿ