18 ವರ್ಷ ಕೆಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ಕಡಿವಾಣ ಹಾಕುವಂತೆ ಮಕ್ಕಳ ಹಕ್ಕುಗಳ ಆಯೋಗ ಸರ್ಕಾರಕ್ಕೆ ಮನವಿ
ಶಾಲಾ ಮಕ್ಕಳು ಇತ್ತಿಚ್ಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಗೀಳು ಹೆಚ್ಚಿಸಿಕೊಂಡಿದ್ದಾರೆ. ಸಾಕಷ್ಟು ಕೆಟ್ಟಚಟ್ಟಕ್ಕೂ ಈ ಗೀಳು ಕಾರಣವಾಗಿದೆ. ಇದರ ಜೊತೆಗೆ ಪೋರ್ನೊಗ್ರಾಫಿ ಸೇರಿದಂತೆ ರೀಲ್ಸ್ ಚಟಕ್ಕೆ ಮಕ್ಕಳು ಬಲಿಯಾಗುತ್ತಿದ್ದಾರೆ. ಹೀಗಾಗಿ ನಿರ್ಬಂಧಿಸಿ ಒಮ್ಮೆ ನೋಡಿ ಎಂದು ಹೈಕೋರ್ಟ್ ಮೌಖಿಕ ಅಭಿಪ್ರಾಯ ತಿಳಿಸಿತ್ತು. ಇದರ ಬೆನ್ನಲ್ಲೇ ವಯೋಮಿತಿ ನಿಗದಿ ಮಾಡಿ ನಿರ್ಬಂಧ ಹೇರುವಂತೆ ಮಕ್ಕಳ ಹಕ್ಕುಗಳ ಆಯೋಗವೂ ಸರ್ಕಾರಕ್ಕೆ ಮನವಿ ಮಾಡಿದೆ.
ಬೆಂಗಳೂರು, ಸೆ.21: ರಾಜ್ಯದಲ್ಲಿ 18 ವರ್ಷದ ಕೆಳಗಿನ ಮಕ್ಕಳು ಸಾಮಾಜಿಕ ಜಾಲತಾಣ (Social Media) ಬಳಕೆ ಮಾಡದಂತೆ ನಿರ್ಬಂಧ ವಿಧಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಇತ್ತಿಚ್ಚಿನ ದಿನಗಳಲ್ಲಿ ಶಾಲಾ ಮಕ್ಕಳು ಸಾಮಾಜಿಕ ಜಾಲತಾಣಗಳ ಗೀಳು ಹೆಚ್ಚಿಸಿಕೊಂಡಿದ್ದಾರೆ. ಸಾಕಷ್ಟು ಕೆಟ್ಟಚಟ್ಟಕ್ಕೂ ಈ ಗೀಳು ಕಾರಣವಾಗಿದೆ. ಇದರ ಜೊತೆಗೆ ಪೋರ್ನೊಗ್ರಾಫಿ ಸೇರಿದಂತೆ ರೀಲ್ಸ್ ಚಟಕ್ಕೆ ಮಕ್ಕಳು ಬಲಿಯಾಗುತ್ತಿದ್ದಾರೆ. ಅಷ್ಟೇ ಅಲ್ಲದೆ, ಮಕ್ಕಳ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಟಿವಿ9 ನಿರಂತರ ಸುದ್ದಿ ಪ್ರಸಾರ ಮಾಡಿತ್ತು.
ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಬಳಕೆಗೆ ವಯೋಮಿತಿ ಹೇರುವುದು ಸೂಕ್ತವಾಗಿದ್ದು, ಸಾಮಾಜಿಕ ಜಾಲತಾಣ ನಿರ್ಬಂಧಿಸಿ ನೋಡಿ ಸಾಕಷ್ಟು ಒಳ್ಳೆಯದಾಗುತ್ತದೆ ಅಂತಾ ಹೈಕೋರ್ಟ್ ವಿಭಾಗೀಯ ಪೀಠ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೆ, ವಯೋಮಿತಿ ನಿಗದಿಪಡಿಸುವ ಬಗ್ಗೆಯೂ ಸಲಹೆ ನೀಡಿದೆ. ಹೀಗಾಗಿ ಮಕ್ಕಳ ಹಕ್ಕುಗಳ ಆಯೋಗ ಕೂಡಾ ಸರ್ಕಾರಕ್ಕೆ ಮನವಿ ಮಾಡಿದೆ.
ಇದನ್ನೂ ಓದಿ: Viral Video: ವೃದ್ಧನನ್ನು ಪ್ರಾಣಾಪಾಯದಿಂದ ಕಾಪಾಡಿದ 16ರ ಹುಡುಗ; ಸೋಶಿಯಲ್ ಮೀಡಿಯಾದಿಂದ ಕಲಿತ ತಂತ್ರ
ಸಮಾಜಿಕ ಜಾಲತಾಣ ಬಳಕೆಗೆ ವಯೋಮಿತಿ ನಿಗದಿಪಡಿಸುವುದು ಒಳ್ಳೆಯ ಬೆಳವಣಿಗೆ. ಮಕ್ಕಳ ಹಕ್ಕುಗಳ ಅಯೋಗ ಕೂಡಾ ವಯೋಮಿತಿ ನಿಗದಿಪಡಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದೆ. ವಯೋಮಿತಿ ನಿಗದಿಪಡಿಸುವುದರಿಂದ ಕೆಲವು ಅನಗತ್ಯ ವಿಚಾರಗಳಿಂದ ಮಕ್ಕಳನ್ನ ದೂರವಿಡಬಹುದು ಎಂದು ಹೇಳಿದೆ.
ಪೋಷಕರು, ವೈದ್ಯರು ಹಾಗೂ ಖಾಸಗಿ ಶಾಲಾ ಒಕ್ಕೂಟಗಳು ಕೂಡ ಸಮಾಜಿಕ ಜಾಲತಣ ಬಳಕೆಗೆ ವಯೋಮಿತಿ ಹೇರುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿವೆ. ಸರ್ಕಾರಕ್ಕೆ ತುರ್ತಾಗಿ ಸಮಾಜಿಕ ಜಾಲತಣ ಬಳಕೆಗೆ ವಯೋಮಿತಿ ನಿಗಧಿಪಡಿಸುವಂತೆ ಒತ್ತಾಯಿಸಲು ಆರಂಭಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ