AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ ಕೇಸ್: ಬಂಧಿತ ಕಿಂಗ್ ಪಿನ್ ಅಬ್ದುಲ್ ಅಸಲಿಗೆ ವೈದ್ಯನೇ ಅಲ್ಲ

ಬೆಳಗಾವಿ ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ ಕುರಿತಾಗಿ ಟಿವಿ9 ವರದಿ ಬೆನ್ನಲ್ಲೇ ಸ್ಥಳಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಎಸ್​​ಎಸ್​ ಸಿದ್ದನ್ನವರ್ ಭೇಟಿ ನೀಡಿದರು. ಕಿತ್ತೂರಿನ ಸೋಮವಾರಪೇಟೆಯಲ್ಲಿರುವ ಅಬ್ದುಲ್ ಕ್ಲಿನಿಕ್​ಗೆ ಭೇಟಿ ನೀಡಿ ವಿಚಾರಣೆ ಮಾಡಿದ್ದಾರೆ. ಅಧಿಕಾರಿಗಳು ಕೇಳಿದಾಗ ಹೆಂಡತಿ ಫರಹತ್ ಲಾಡಖಾನ್ ಹೆಸರು ಹೇಳಿದ್ದಾರೆ. ಆಕೆಯದ್ದು ಬಿ ಎಚ್​ಎಂಎಸ್​ ಆಗಿದೆ ಕ್ಲಿನಿಕ್ ಅನುಮತಿಗಾಗಿ ಅರ್ಜಿ ಸಲ್ಲಿಸಿರುವುದಾಗಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ ಕೇಸ್: ಬಂಧಿತ ಕಿಂಗ್ ಪಿನ್ ಅಬ್ದುಲ್ ಅಸಲಿಗೆ ವೈದ್ಯನೇ ಅಲ್ಲ
ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ ಕೇಸ್: ಬಂಧಿತ ಕಿಂಗ್ ಪಿನ್ ಅಬ್ದುಲ್ ಅಸಲಿಗೆ ವೈದ್ಯನೇ ಅಲ್ಲ
ಸಹದೇವ್​ ಮಾನೆ
| Edited By: |

Updated on: Jun 10, 2024 | 3:10 PM

Share

ಬೆಳಗಾವಿ, ಜೂನ್​ 10: ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ ಪ್ರಕರಣದಲ್ಲಿ (Child Trafficking) ಈಗಾಗಲೇ ಪೊಲೀಸರು ವೈದ್ಯ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಆದರೆ ಅಸಲಿಗೆ ಬಂಧಿತ ವೈದ್ಯ ಕಿಂಗ್​ಪಿನ್ (Kingpin) ಅಬ್ದುಲ್ ಗಫರ್ ಲಾಡಖಾನ್ ವೈದ್ಯನೇ ಅಲ್ಲ. ಯಾವುದೇ ಅನುಮತಿ ಪಡೆಯದೆ ಕಳೆದ 10 ವರ್ಷಗಳಿಂದ ಕಿತ್ತೂರು ಪಟ್ಟಣದಲ್ಲಿ ಆರ್‌ಎಂಪಿ ವೈದ್ಯ ಎಂದು ಹೇಳಿಕೊಂಡು ಕ್ಲಿನಿಕ್ ನಡೆಸುತ್ತಿದ್ದ. ಈತನ ಬಗ್ಗೆ ಹಲವು ಬಾರಿ ಸ್ಥಳೀಯರು ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇನ್ನು ಮಕ್ಕಳ ಮಾರಾಟ ಅಷ್ಟೇ ಅಲ್ಲದೇ ಭ್ರೂಣಹತ್ಯೆ ಕೂಡ ಮಾಡಿದ್ದಾಗಿ ಮಾಹಿತಿ ಇದೆ.

ಪ್ರಕರಣ ಕುರಿತಾಗಿ ಟಿವಿ9 ವರದಿ ಬೆನ್ನಲ್ಲೇ ಸ್ಥಳಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಎಸ್​​ಎಸ್​ ಸಿದ್ದನ್ನವರ್ ಭೇಟಿ ನೀಡಿದರು. ಕಿತ್ತೂರಿನ ಸೋಮವಾರಪೇಟೆಯಲ್ಲಿರುವ ಅಬ್ದುಲ್ ಕ್ಲಿನಿಕ್​ಗೆ ಭೇಟಿ ನೀಡಿ ವಿಚಾರಣೆ ಮಾಡಿದ್ದಾರೆ. ಅಧಿಕಾರಿಗಳು ಕೇಳಿದಾಗ ಹೆಂಡತಿ ಫರಹತ್ ಲಾಡಖಾನ್ ಹೆಸರು ಹೇಳಿದ್ದಾರೆ. ಆಕೆಯದ್ದು ಬಿ ಎಚ್​ಎಂಎಸ್​ ಆಗಿದೆ ಕ್ಲಿನಿಕ್ ಅನುಮತಿಗಾಗಿ ಅರ್ಜಿ ಸಲ್ಲಿಸಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ; ವೈದ್ಯ ಸೇರಿ ಐವರು ಅರೆಸ್ಟ್

ಇನ್ನು ತಾಲೂಕು ಆರೋಗ್ಯಾಧಿಕಾರಿಗೆ ಸ್ಥಳೀಯ ನಿವಾಸಿಗಳಿಂದ ತರಾಟೆ ತೆಗೆದುಕೊಳ್ಳಲಾಗಿದೆ. ಇವನಿಗೆ ಅನುಮತಿ ಹೇಗೆ ‌ಕೊಟ್ಟಿದ್ದೀರಿ. ನಕಲಿ ವೈದ್ಯನ ಮನೆ ಹರಾಜು ಹಾಕುವಂತೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿ ಅಬ್ದುಲ್ ಲಾಡಖಾನ್​ನ್ನು ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ಕಿಂಗ್​ಪಿನ್ ಡಾ.ಅಬ್ದುಲ್ ಲಾಡಖಾನ್, ನೇಗಿನಹಾಳ ಗ್ರಾಮದ ಮಹಾದೇವಿ ಜೈನ್, ಚಂದನ ಸುಬೇದಾರ್, ಪವಿತ್ರಾ ಹಾಗೂ ಪ್ರವೀಣ್​ನ್ನು ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಹೇಳಿದ್ದಿಷ್ಟು 

ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ್ದು, ಜೂನ್ 9 ರಂದು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಒಂದು ಮಗುವನ್ನ ನಾವು ರಕ್ಷಣೆ ಮಾಡಿದ್ದೇವೆ. ಪ್ರಕರಣ ಎ1 ಆರೋಪಿ ಮಗುವನ್ನ ಬೆಳಗಾವಿ ತಗೊಂಡು ಬರುವಾಗ ರಕ್ಷಣೆ ಮಾಡಿದ್ದೇವೆ. ಎ1 ಆರೋಪಿ ನರ್ಸಿಂಗ್ ಕೆಲಸ ಮಾಡುತ್ತಿದ್ದಾರೆ.

ಎ2 ಆರೋಪಿ ತನ್ನ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿದ್ದಾನೆ. ಆರೋಪಿ ಹೋಮಿಯೋಪಥಿ ಡಾಕ್ಟರ್ ಅಂತಾ ಹೇಳಿದ್ದಾನೆ. ಈ ಪ್ರಕರಣವನ್ನ ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಅರೆಸ್ಟ್ ಆದ ನಾಲ್ವರು ಆರೋಪಿಗಳ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದ್ದೇವೆ. ಇದರಲ್ಲಿ ಮಗುವಿನ ತಂದೆ, ತಾಯಿ ಸಹ ಅರೆಸ್ಟ್ ಮಾಡಲಾಗಿದೆ. ಹಣಕ್ಕೆ ಮಾರಾಟ ಮಾಡಲು ಯತ್ನಿಸಿದ್ದಾರೆ. 60 ಸಾವಿರ‌ದಿಂದ ಒಂದೂವರೆ ಲಕ್ಷ ರೂ. ಮಗುವನ್ನ ಮಾರಾಟಕ್ಕೆ ಯತ್ನಿಸಿದ್ದಾರೆ. ಪ್ರಕರಣದ ಪೂರ್ಣ ತನಿಖೆ ಬಳಿಕವೇ ಅಸಲಿ ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ