ಕೊರೊನಾ ಎರಡನೇ ಅಲೆ: ಮಕ್ಕಳ ಬಗ್ಗೆ ಇರಲಿ ಎಚ್ಚರ, ಬೆಂಗಳೂರಿನಲ್ಲಿ ಕೊರೊನಾಗೆ ಚಿಕ್ಕ ಚಿಕ್ಕ ಮಕ್ಕಳು ಗುರಿ

ಎರಡನೇ ಅಲೆಯ ಕೊರೊನಾ ಭೀತಿ ಮಕ್ಕಳಲ್ಲಿ ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಲ್ಲಿ 163 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕೊರೊನಾ ಎರಡನೇ ಅಲೆ: ಮಕ್ಕಳ ಬಗ್ಗೆ ಇರಲಿ ಎಚ್ಚರ, ಬೆಂಗಳೂರಿನಲ್ಲಿ ಕೊರೊನಾಗೆ ಚಿಕ್ಕ ಚಿಕ್ಕ ಮಕ್ಕಳು ಗುರಿ
ಪ್ರಾತಿನಿಧಿಕ ಚಿತ್ರ
Follow us
preethi shettigar
| Updated By: shruti hegde

Updated on:Mar 22, 2021 | 12:45 PM

ಬೆಂಗಳೂರು: ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಈಗಾಗಲೇ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಸರ್ಕಾರ ಮುಂದಾಗಿದೆ. ಲಾಕ್​ಡೌನ್ ಆಗುವ ಸಾಧ್ಯತೆಗಳು ಕೂಡ ಇದೆ ಎಂಬ ಮಾತುಗಳು ಕೇಳಿ ಬಂದರು ಸದ್ಯದ ಮಟ್ಟಿಗೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಕಡ್ಡಾಯವನ್ನಷ್ಟೇ ಸರ್ಕಾರ ಸೂಚಿಸಿದೆ. ಅದರೆ ಈ ಎರಡನೇ ಅಲೆಯ ಕೊರೊನಾ ಭೀತಿ ಮಕ್ಕಳಲ್ಲಿ ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಲ್ಲಿ 163 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಹೀಗಾಗಿ ಮಕ್ಕಳನ್ನು ಮನೆಯಿಂದ ಹೊರಗೆ ಕರೆದುಕೊಂಡು ಬರುವಾಗ ಪೋಷಕರು ಹೆಚ್ಚಿನ ಮುಂಜಾಗೃತ ಕ್ರಮವನ್ನು ಅನುಸರಿಸುವುದು ಅನಿವಾರ್ಯವಾಗಿದೆ. ನಿನ್ನೆ ಒಂದೇ ದಿನ10 ವರ್ಷದೊಳಗಿನ 32 ಮಕ್ಕಳಿಗೆ ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಮಕ್ಕಳ ಮೇಲೆ ಎರಡನೇ ಅಲೆ ಹೆಚ್ಚು ಪರಿಣಾಮಕಾರಿಯಾದ ಪರಿಣಾಮ ಬೀರುತ್ತಿದೆ.

ಕಳೆದ ವಾರ ಮಕ್ಕಳಲ್ಲಿ ಸೋಂಕು ದೃಢ:

    • ಸೋಮವಾರ 16 ಮಕ್ಕಳಿಗೆ ಸೋಂಕು ದೃಢ
    • ಮಂಗಳವಾರ 12 ಮಕ್ಕಳಿಗೆ ಸೋಂಕು
    • ಬುಧವಾರ 20 ಮಕ್ಕಳಿಗೆ ಕೊರೊನಾ ಸೋಂಕು ದೃಢ
    • ಗುರುವಾರ 20 ಮಕ್ಕಳಿಗೆ ಸೋಂಕು ‌ದೃಢ
    • ಶುಕ್ರವಾರ 30 ಮಕ್ಕಳಿಗೆ ಕೊರೊನಾ ಸೋಂಕು ದೃಢ
    • ಶನಿವಾರ 33 ಮಕ್ಕಳಿಗೆ ಸೋಂಕು ದೃಢ
    • ಭಾನುವಾರ 32 ಮಕ್ಕಳಿಗೆ ಸೋಂಕು ದೃಢ ಪಟ್ಟಿದೆ

ರಾಜ್ಯದಲ್ಲಿ ಕೊವಿಡ್‌ಗೆ ಈವರೆಗೆ ಒಟ್ಟು 12,434 ಜನರು ಬಲಿಯಾಗಿದ್ದಾರೆ.‌ ಬೆಂಗಳೂರಿನಲ್ಲಿ ಈವರೆಗೆ ಒಟ್ಟು 4,550 ಜನರು ಕೊರೊನಾ‌ ಸೋಂಕಿಗೆ ಬಲಿಯಾಗಿದ್ದಾರೆ. ಸೋಂಕಿನಿಂದ ಮೃತಪಟ್ಟವರಲ್ಲಿ 70 ವರ್ಷ ಮೇಲ್ಪಟ್ಟವರೇ ಹೆಚ್ಚಾಗಿದ್ದು, ಅವರಲ್ಲಿ 70 ವರ್ಷ ಮೇಲ್ಪಟ್ಟವರು 1,475 ಜನ, 60 ವರ್ಷ ಮೇಲ್ಪಟ್ಟವರು 1,222 ಜನರು ಹಾಗೂ 50 ವರ್ಷ ಮೇಲ್ಪಟ್ಟವರು 981 ಜನರಾಗಿದ್ದಾರೆ.

ಇನ್ನು, 40 ವರ್ಷ ಮೇಲ್ಪಟ್ಟ 499 ಜನರು, 30 ವರ್ಷ ಮೇಲ್ಪಟ್ಟವರಲ್ಲಿ 218 ಜನರು, 20 ವರ್ಷ ಮೇಲ್ಪಟ್ಟವರಲ್ಲಿ 89 ಜನರು ಹಾಗೂ 10 ವರ್ಷ ಮೇಲ್ಪಟ್ಟವರಲ್ಲಿ 18 ಜನರು ಕೊವಿಡ್‌ಗೆ ಬಲಿಯಾಗಿದ್ದಾರೆ. 9 ವರ್ಷದೊಳಗಿನ 10 ಮಕ್ಕಳು ಕೊವಿಡ್‌ಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೊವಿಡ್ ಏರಿಕೆ ಹೆಚ್ಚಳ ಹಿನ್ನೆಲೆಯಲ್ಲಿ, ಗಮನಿಸಿದರೆ ಮಾರ್ಚ್ ಅಂತ್ಯದೊಳಗೆ ನಿತ್ಯ ಎರಡು ಸಾವಿರ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಬಿಬಿಎಂಪಿ ಅಂದಾಜಿಸಿದೆ.

ಮಾರ್ಚ್ 1 ನೇ ತಾರೀಕು 240ರ ಆಸುಪಾಸಿನಲ್ಲಿದ್ದ ಸೋಂಕಿತರ ಸಂಖ್ಯೆ ಇದೀಗ ಪ್ರತಿ ನಿತ್ಯ 1 ಸಾವಿರ ಕೇಸ್​ಗಳು ಪತ್ತೆಯಾಗುತ್ತಿವೆ. ಮೊನ್ನೆವರೆಗೂ ಸೋಂಕಿತರಿಗಾಗಿ 340 ಬೆಡ್​ಗಳನ್ನ ಮಾತ್ರ ಮೀಸಲಿಡಲಾಗಿತ್ತು. ಇದೀಗ ವಿಕ್ಟೋರಿಯಾ ಸಿ.ವಿ ರಾಮನ್ ಆಸ್ಪತ್ರೆ ಸೇರಿದಂತೆ ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ಸಾವಿರ ಬೆಡ್ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ:

Corona Cases and Lockdown News LIVE: ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಹೊರಗುತ್ತಿಗೆ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ: ಸಚಿವ ಡಾ. ಸುಧಾಕರ್

Coronavirus Case Updates: ದೇಶದಲ್ಲಿ ಹೆಚ್ಚುತ್ತಿದೆ ಕೊರೊನಾರ್ಭಟ; ಒಂದು ದಿನದಲ್ಲಿ 35 ಸಾವಿರ ಕೇಸ್​ಗಳು ದಾಖಲು..ಮತ್ತೆ ಅಪಾಯದಲ್ಲಿ ಮಹಾರಾಷ್ಟ್ರ

Published On - 12:39 pm, Mon, 22 March 21

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ