AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಸಿಗುತ್ತಿಲ್ಲ ಲಸಿಕೆ! ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಿರುವ ಪೋಷಕರು; ಆರ್ಥಿಕ ಹೊರೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಮಕ್ಕಳ ಪ್ರಮುಖ ಹೆಚ್ಚುವರಿ ಲಸಿಕೆಗಳ ಕೊರತೆಯಿಂದ ಪೋಷಕರು ಖಾಸಗಿ ಆಸ್ಪತ್ರೆಗಳ ದುಬಾರಿ ವೆಚ್ಚ ಭರಿಸಬೇಕಾಗಿದೆ. ಚಿಕನ್‌ಪಾಕ್ಸ್, ಹೆಪಟೈಟಿಸ್ ಎ, ಟೈಫಾಯ್ಡ್, ಫ್ಲೂ ಲಸಿಕೆಗಳು ಸರ್ಕಾರಿ ಸೌಲಭ್ಯದಲ್ಲಿ ಲಭ್ಯವಿಲ್ಲ. ಬಡ ಮತ್ತು ಮಧ್ಯಮ ವರ್ಗದ ಮಕ್ಕಳು ಇದರಿಂದ ವಂಚಿತರಾಗುತ್ತಿದ್ದಾರೆ. ಮಕ್ಕಳ ಆರೋಗ್ಯ ರಕ್ಷಣೆಗಾಗಿ ಲಸಿಕೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಒದಗಿಸುವಂತೆ ಪೋಷಕರು ಆಗ್ರಹಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಸಿಗುತ್ತಿಲ್ಲ ಲಸಿಕೆ! ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಿರುವ ಪೋಷಕರು; ಆರ್ಥಿಕ ಹೊರೆ
ಪ್ರಾತಿನಿಧಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on: Nov 12, 2026 | 9:10 AM

Share

ಮುಖ್ಯಾಂಶಗಳು

  • ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಕೊರತೆ
  • ಬಡ ಪೋಷಕರಿಗೆ ಹೆಚ್ಚಿದ ಹೊರೆ
  • ಮಕ್ಕಳ ಲಸಿಕೆಗೂ ಸಾವಿರಾರು ರೂಪಾಯಿ ಖರ್ಚು

ಬೆಂಗಳೂರು, ನವೆಂಬರ್​​ 12: ಮಕ್ಕಳಿಗೆ ಸೋಂಕುಗಳಿಂದ ರಕ್ಷಣೆ ನೀಡಬೇಕಾದ ಲಸಿಕೆಗಳೇ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಸಾವಿರಾರು ರೂ ಕೊಟ್ಟು ಲಸಿಕೆ ಹಾಕಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಹೆಚ್ಚುವರಿ ಲಸಿಕೆಗಳು  ಗಗನಕುಸುಮವಾಗಿದೆ. ಹಾಗಾದರೆ ಯಾವೆಲ್ಲಾ ಲಸಿಕೆಗಳ ಕೊರತೆ ಉಂಟಾಗಿದೆ, ಪೋಷಕರ ಬೇಡಿಕೆ ಏನು ಎಂಬ ಮಾಹಿತಿ ಇಲ್ಲಿದೆ.

ಮಗುವಿನ ಆರೋಗ್ಯಕ್ಕೆ ಲಸಿಕೆ ವರದಾನ

ಮಗುವಿನ ಜನನದ ಬಳಿಕ ಆರಂಭವಾಗುತ್ತೆ ಲಸಿಕೆಗಳ ಸರಣಿ. ಮಗುವಿನ ಜನನದಿಂದ ಹಿಡಿದು ವಿವಿಧ ವಯೋಮಾನದ ಮಕ್ಕಳಿಗೆ ಹಂತಹಂತವಾಗಿ ಲಸಿಕೆ ನೀಡಲಾಗುತ್ತೆ. ವೈರಸ್ ಮತ್ತು ಸಾಂಕ್ರಾಮಿಕ ರೋಗಗಳಿಂದ ಮಕ್ಕಳನ್ನು ರಕ್ಷಿಸುವುದರ ಜೊತೆಗೆ, ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಡೆಯುವಲ್ಲಿ ಲಸಿಕೆ ಪ್ರಮುಖ ಪಾತ್ರ ವಹಿಸುತ್ತದೆ.

ಇದನ್ನೂ ಓದಿ: “ಮಗುವಿನ ಚಿಕಿತ್ಸೆಗೆ 1 ರೂಪಾಯಿಯನ್ನೂ ಕೇಳಲ್ಲ”: ಹೆಚ್.ಡಿ. ಕುಮಾರಸ್ವಾಮಿ ಭೇಟಿ ಬೆನ್ನಲ್ಲೇ ಉಚಿತ ಆರೈಕೆಯ ಅಭಯ ನೀಡಿದ ಆಸ್ಪತ್ರೆ

ಮಕ್ಕಳ ಮರಣ ಪ್ರಮಾಣ ಕಡಿಮೆ ಮಾಡುವ ನಿಟ್ಟಿನಲ್ಲೂ ಲಸಿಕೆಯ ಕಾರ್ಯ ಮಹತ್ವ ಪಡೆದುಕೊಂಡಿದೆ. ಆದರೆ ಇದೀಗ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲವು ಪ್ರಮುಖ ಹೆಚ್ಚುವರಿ ಲಸಿಕೆಗಳು ಮಾತ್ರ ಲಭ್ಯವಿಲ್ಲದಿರುವುದು ಪೋಷಕರ ಚಿಂತೆಗೆ ಕಾರಣವಾಗಿದೆ.

ಲಸಿಕೆಗಾಗಿ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಿರುವ ಪೋಷಕರು 

ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗದ ಲಸಿಕೆಗಳಿಗಾಗಿ ಪೋಷಕರು ಖಾಸಗಿ ಆಸ್ಪತ್ರೆಗಳ ಮೊರೆ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಚಿಕನ್‌ ಪಾಕ್ಸ್ ತಡೆಗಟ್ಟುವ ಲಸಿಕೆ, ಹೆಪಟೈಟಿಸ್ ಎ ಲಸಿಕೆ, ಟೈಫಾಯ್ಡ್ ಲಸಿಕೆ ಹಾಗೂ ಇನ್‌ಫ್ಲುಯೆನ್ಸಾ ಅಂದರೆ ಫ್ಲೂ ಲಸಿಕೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿಲ್ಲ ಎಂಬುದು ಪೋಷಕರ ಪ್ರಮುಖ ದೂರು. ಇದರ ಜೊತೆಗೆ ಐಪಿವಿ ವೇಳಾಪಟ್ಟಿಯಲ್ಲಿನ ಲಸಿಕೆಗಳ ಲಭ್ಯತೆಯ ಬಗ್ಗೆಯೂ ಗಮನ ಹರಿಸುವಂತೆ ಮನವಿ ಮಾಡಲಾಗಿದೆ. ಈ ಲಸಿಕೆಗಳು ಮಕ್ಕಳಿಗೆ ವಿವಿಧ ಸೋಂಕುಗಳಿಂದ ರಕ್ಷಣೆ ನೀಡುವಲ್ಲಿ ಸಹಕಾರಿಯಾಗುತ್ತವೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗದ ಕಾರಣ ಖಾಸಗಿ ಆಸ್ಪತ್ರೆಗಳಲ್ಲಿ ಹಣ ಕೊಟ್ಟು ಪಡೆಯಬೇಕಾದ ಅನಿವಾರ್ಯತೆ ಎದುರಾಗಿದೆ.

ಲಸಿಕೆಗಳಿಗೆ ಸಾವಿರಾರು ರೂ. ಖರ್ಚು: ಪೋಷಕರು ಕಂಗಾಲು  

ಖಾಸಗಿ ಆಸ್ಪತ್ರೆಗಳ ದುಬಾರಿ ಲಸಿಕೆಗಳ ವೆಚ್ಚದಿಂದ ಮಕ್ಕಳ ಆರೋಗ್ಯದ ಬಗ್ಗೆ ಪೋಷಕರಿಕೆ ಚಿಂತೆ ಶುರುವಾಗಿದೆ. ಸಾವಿರಾರು ರೂ. ಖರ್ಚು ಮಾಡಿ ಪ್ರತಿಯೊಂದು ಹೆಚ್ಚುವರಿ ಲಸಿಕೆಯನ್ನೂ ಹಾಕಿಸುವುದು ಕುಟುಂಬಗಳಿಗೂ ಸಾಧ್ಯವಾಗುತ್ತಿಲ್ಲ. ಅದರಲ್ಲೂ ಬಡ ಹಾಗೂ ಮಧ್ಯಮ ವರ್ಗದ ಪೋಷಕರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಹಣದ ಕೊರತೆಯಿಂದ ಕೆಲವು ಮಕ್ಕಳು ಅಗತ್ಯ ಲಸಿಕೆಗಳಿಂದ ವಂಚಿತರಾಗುವ ಆತಂಕವೂ ಎದುರಾಗಿದೆ.

LIVE TV

ಸರ್ಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ನೀಡುತ್ತಿರುವ ಲಸಿಕೆಗಳ ಜೊತೆಗೆ, ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಈ ಹೆಚ್ಚುವರಿ ಲಸಿಕೆಗಳನ್ನೂ ಸರ್ಕಾರಿ ಆರೋಗ್ಯ ವ್ಯವಸ್ಥೆಯಲ್ಲಿ ಒದಗಿಸಬೇಕು. ಮಕ್ಕಳ ಆರೋಗ್ಯ ರಕ್ಷಣೆಗೆ ಲಸಿಕೆಗಳ ಲಭ್ಯತೆಯನ್ನು ಹೆಚ್ಚಿಸಬೇಕು ಎಂಬುದು ಪೋಷಕರು ಹಾಗೂ ತಜ್ಞರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ; ಸಚಿವ ಯುಟಿ ಖಾದರ್

ಒಟ್ಟಿನಲ್ಲಿ ಮಕ್ಕಳಿಗೆ ಅಗತ್ಯವಿರುವ ಲಸಿಕೆಗಳು ಹಣದ ಕಾರಣಕ್ಕೆ ದೂರವಾಗಬಾರದು. ಸರ್ಕಾರಿ ಆಸ್ಪತ್ರೆಗಳಲ್ಲೇ ಅಗತ್ಯ ಹೆಚ್ಚುವರಿ ಲಸಿಕೆಗಳು ಲಭ್ಯವಾದರೆ ಸಾವಿರಾರು ಕುಟುಂಬಗಳಿಗೆ ಅನುಕೂಲವಾಗಲಿದೆ. ಮಕ್ಕಳ ಆರೋಗ್ಯ ರಕ್ಷಣೆಯ ವಿಚಾರದಲ್ಲಿ ಸರ್ಕಾರ ಯಾವ ಕ್ರಮಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು