ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆ; ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 28, 2023 | 10:31 PM

ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಮಾಡಿದೆ. ಈ ಸೋಂಕು ಕಡಿಮೆ ತೀವ್ರತೆ ಹೊಂದಿದ್ದು,  5 ರಿಂದ 7 ದಿನ ದೇಹದಲ್ಲಿರುತ್ತದೆ.

ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆ; ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ನ.28: ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಮಾಡಿದೆ. ಈ ಸೋಂಕು ಕಡಿಮೆ ತೀವ್ರತೆ ಹೊಂದಿದ್ದು,  5 ರಿಂದ 7 ದಿನ ದೇಹದಲ್ಲಿರುತ್ತದೆ.

ಗೈಡ್ ಲೈನ್ಸ್ ಹೊರಡಿಸಿದ ಆರೋಗ್ಯ ಇಲಾಖೆ

ಉಸಿರಾಟದ ಕಾಯಿಲೆಗಳ ತಡೆಗಟ್ಟುವಿಕೆ, ನಿಯಂತ್ರಣಕ್ಕಾಗಿ ಸಾರ್ವಜನಿಕರಿಗೆ ಹಲವು ಸೂಚನೆ ನೀಡಿದೆ.

• ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳುವುದು.
• ಸಾಬೂನು ಮತ್ತು ನೀರಿನಿಂದ ನಿಮ್ಮ ಕೈಗಳನ್ನು ಆಗಾಗ್ಗೆ ತೊಳೆದುಕೊಳ್ಳುವುದು.
• ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸುವುದನ್ನು ತಪ್ಪಿಸುವುದು.
• ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಅಂತಹ ಸ್ಥಳಗಳಿಗೆ ಭೇಟಿ ನೀಡಿದರೆ ಫೇಸ್ ಮಾಸ್ಕ್ ಬಳಸುವುದು.
• ಫ್ಲೂ ಪೀಡಿತ ವ್ಯಕ್ತಿಗಳಿಂದ ಮೂಲಭೂತ ಕನಿಷ್ಠ ಅಂತರವನ್ನು ಕಾಪಾಡಿಕೊಳ್ಳುವುದು.
• ನಿದ್ರೆ ಮಾಡಿ, ದೈಹಿಕವಾಗಿ ಕ್ರಿಯಾಶೀಲರಾಗಿ ಮತ್ತು ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಿಕೊಳ್ಳುವುದು.
• ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸುವುದು.
• ಸಾರ್ವಜನಿಕವಾಗಿ ಉಗುಳುವುದನ್ನು ತಪ್ಪಿಸುವುದು.
• ಇನ್ಫ್ಲುಯೆನ್ಸ ಮತ್ತು ಇತರ ಉಸಿರಾಟದ ಕಾಯಿಲೆಗಳ ಹೆಚ್ಚಿನ ಸಂಭವವಿರುವ ಸ್ಥಳಗಳಿಗೆ ಪ್ರಯಾಣವನ್ನು ತಪ್ಪಿಸುವುದು.
• ರೋಗಲಕ್ಷಣಗಳು ಉಲ್ಬಣಗೊಂಡರೆ ಹತ್ತಿರದ ಸರ್ಕಾರಿ ಆರೋಗ್ಯ ಸೌಲಭ್ಯಕ್ಕೆ ವರದಿ ಮಾಡಿ.
• ನಿಮ್ಮ ವೈದ್ಯರನ್ನು ಸಂಪರ್ಕಿಸದೆ ಸ್ವಯಂ-ಔಷಧಿಗಳನ್ನು ಮಾಡಬೇಡಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:28 pm, Tue, 28 November 23