ಚಿಕ್ಕಬಳ್ಳಾಪುರ: ಚಿಂತಾಮಣಿ ತಹಶೀಲ್ದಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಕಚೇರಿಗೆ ಚಕ್ಕರ್ ಹೊಡೆದು ಅಧಿಕಾರಿ ಮತ್ತು ಸಿಬ್ಬಂದಿ ಪಾರ್ಟಿಗೆ ಹಾಜರಾಗಿದ್ದಾರೆ. ಇದರಿಂದ ಚಿಂತಾಮಣಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ತಹಶೀಲ್ದಾರ್ ವಿಶ್ವನಾಥ್ ಹುಟ್ಟುಹಬ್ಬದ ಪ್ರಯುಕ್ತ ಪಾರ್ಟಿ ಆಯೋಜಿಸಿದ್ದರು. ಮಧ್ಯಾಹ್ನದ ನಂತರ ಕಚೇರಿಗೆ ಅಧಿಕಾರಿಗಳು ಗೈರಾಗಿದ್ದಾರೆ. ತಹಶೀಲ್ದಾರ್ ಮತ್ತು ಅಧಿಕಾರಿಗಳು, ಸಿಬ್ಬಂದಿ ನಡೆಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Published On - 5:26 pm, Fri, 13 December 19