ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ
ಚಿತ್ರದುರ್ಗದ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ಬೆಂಕಿ ಹೊತ್ತಿಕೊಂಡು 9ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಪ್ರಧಾನಿ ಮೋದಿ, ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ₹5 ಲಕ್ಷ, ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ್ದಾರೆ. ಅಪಘಾತದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಚಿತ್ರದುರ್ಗ, ಡಿ.25: ಚಿತ್ರದುರ್ಗದ ಜಿಲ್ಲೆ (Chitradurga Bus Accident) ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ 9ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ಸೊಂದು ಹೊತ್ತಿ ಉರಿದಿದೆ. ಇದೀಗ ಪ್ರಧಾನಿ ಮೋದಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ. ಇದೀಗ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಸಂತಾಪ ಸೂಚಿಸಿದ್ದಾರೆ. ಇದೀಗ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದರ ಜತೆಗೆ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಿದ್ದಾರೆ.
ಇನ್ನು ಈ ಅಪಘಾತಕ್ಕೆ ಸಂಬಂಧಿಸಿದಂತೆ ಕಾರಣದ ಬಗ್ಗೆ ಸರಿಯಾದ ತನಿಖೆ ನಡೆಸಬೇಕು. ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ ಎಂದು ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. ಎಕ್ಸ್ನಲ್ಲಿ ಈ ಬಗ್ಗೆ ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲಿ ಹೀಗೆ ಬರೆದುಕೊಂಡಿದ್ದಾರೆ. ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದು ಹೇಳಿದ್ದಾರೆ. ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್, 9ಕ್ಕೂ ಹೆಚ್ಚು ಜನ ಸಜೀವ ದಹನ
ಪ್ರಧಾನಿ ನರೇಂದ್ರ ಮೋದಿ ಸಂತಾಪ
ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿನಿಯಿಂದ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದೆ.‘ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ .
ಹೆಲ್ಪ್ ಲೈನ್ ಪ್ರಕಟಣೆ
ಗೊರ್ಲತ್ತು ಬಳಿ ಲಾರಿ, ಬಸ್ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಹೆಲ್ಪ್ ಲೈನ್ ಪ್ರಕಟಣೆ ಮಾಡಲಾಗಿದೆ ಎಂದು ಚಿತ್ರದುರ್ಗದ ಎಸ್ಪಿ ರಂಜಿತ್ ಬಂಡಾರು ಮಾಹಿತಿ ನೀಡಿದ್ದಾರೆ. ಸಾರ್ವಜನಿಕರ ಈ ಹೆಲ್ಪ್‌ಲೈನ್ ನಂಬರ್ 9480803100, 08194222782, 9480803170 ಗೆ ತುರ್ತು ಸಹಾಯವನ್ನು ಪಡೆಯಬಹುದು ಎಮದು ಹೇಳಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:37 am, Thu, 25 December 25




