ಹೋಂ ಐಸೋಲೇಷನ್ ಬದಲು ಸಾಂಸ್ಥಿಕ ಕ್ವಾರಂಟೈನ್​ಗೆ ಚಿತ್ರದುರ್ಗ ಜಿಲ್ಲಾಡಳಿತ ಮುಂದಾಗಿದೆ: ಡಿಸಿ ಕವಿತಾ ಮನ್ನಿಕೇರಿ

ಕೊವಿಡ್ ಕೇರ್ ಸೆಂಟರ್ ಆಸ್ಪತ್ರೆ ಮಾದರಿಯ ಸೌಕರ್ಯ ಕಲ್ಪಿಸಿಕೊಡಲಿದ್ದು, ಕೊವಿಡ್ ರೋಗಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಹೋಂ ಐಸೋಲೇಷನ್ ಬದಲು ಸಾಂಸ್ಥಿಕ ಕ್ವಾರಂಟೈನ್​ಗೆ ಚಿತ್ರದುರ್ಗ ಜಿಲ್ಲಾಡಳಿತ ಮುಂದಾಗಿದೆ: ಡಿಸಿ ಕವಿತಾ ಮನ್ನಿಕೇರಿ
ಡಿಸಿ ಕವಿತಾ ಮನ್ನಿಕೇರಿ
Follow us
preethi shettigar
|

Updated on: May 12, 2021 | 8:19 AM

ಚಿತ್ರದುರ್ಗ : ಜಿಲ್ಲೆಯಲ್ಲಿ ಕೊರೊನಾ ಸೋಂಕು ಶರವೇಗದಲ್ಲಿ ಸಾಗಿದೆ. ಅನೇಕರು ಹೋಂ ಐಸೋಲೇಷನ್ ಮೊರೆ ಹೋಗುತ್ತಿದ್ದು ಮನೆ ಮಂದಿಗೆಲ್ಲಾ ಸೋಂಕು ಹರಡುತ್ತಿದೆ. ಕೆಲವರು ಸೋಂಕಿನ ಪ್ರಮಾಣ ಹೆಚ್ಚಾದ ಬಳಿಕ ಆಸ್ಪತ್ರೆಗೆ ಬರುತ್ತಿದ್ದು, ಸಮಸ್ಯೆ ಎದುರಾಗುತ್ತಿದೆ. ಹೀಗಾಗಿ ಕೊವಿಡ್ ಚೈನ್ ಬ್ರೇಕ್ ಮಾಡಲು ಜಿಲ್ಲೆಯಲ್ಲಿ ಹೋಂ ಐಸೊಲೇಷನ್ ಬದಲು ಸಾಂಸ್ಥಿಕ ಕ್ವಾರಂಟೈನ್​ಗೆ ಜಿಲ್ಲಾಡಳಿತ ಮುಂದಾಗಿದೆ. ಈ ನಿಟ್ಟಿನಲ್ಲಿ ಕೊವಿಡ್ ಕೇರ್ ಸೆಂಟರ್ ನಿರ್ಮಾಣದ ಮೂಲಕ ಸೋಂಕಿತರನ್ನು ಕೇರ್‌ಸೆಂಟರ್​ಗೆ ಶಿಫ್ಟ್ ಮಾಡಲು ನಿರ್ಧರಿಸಲಾಗಿದೆ.

ನಗರದ ಈಶ್ವರ ಬಡಾವಣೆಯಲ್ಲಿನ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಇಲಾಖೆಯ ನೂತನ ಹಾಸ್ಟಲ್​ವೊಂದರಲ್ಲಿ ಕೊವಿಡ್ ಕೇರ್ ಸೆಂಟರ್ ತೆರೆದಿದೆ. ಆರ್.ಪ್ರವೀಣ್ ಚಂದ್ರ ಒಡೆತನದ ಇಆರ್​ಎಂ ಸಮೂಹ ಸಂಸ್ಥೆ ಕೊವಿಡ್ ಕೇರ್ ಸೆಂಟರ್ ನಿರ್ಮಾಣಕ್ಕೆ ನೆರವು ನೀಡಿದೆ. 250 ಬೆಡ್​ಗಳ ಸುಸಜ್ಜಿತ ಕೇಂದ್ರ ನಿರ್ಮಿಸಿಕೊಟ್ಟಿದೆ ಎಂದು ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಹೇಳಿದರು.

ಹಾಸ್ಟಲ್​ನ ಪ್ರತಿ ಕೋಣೆಯಲ್ಲಿ ನಾಲ್ಕು ಬೆಡ್​ಗಳನ್ನು ಹಾಕಲಾಗಿದೆ. ಮಂಚ, ಹಾಸಿಗೆ, ಹೊದಿಕೆ, ಟೇಬಲ್, ಸೊಳ್ಳೆ ಪರದೆ, ಕಸದ ಬುಟ್ಟಿ, ಫ್ಯಾನ್ ಸಹಿತ ಕೇರ್ ಸೆಂಟರ್​ಗೆ ಬೇಕಾದ ಎಲ್ಲಾ ವ್ಯವಸ್ಥೆ ನಿರ್ಮಿಸಲಾಗಿದೆ. ವೈದ್ಯಕೀಯ ಸಿಬ್ಬಂದಿ , ಅಡುಗೆ ತಯಾರಿಕರಿಗಾಗಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಈ ಕೊವಿಡ್ ಕೇರ್ ಸೆಂಟರ್ ಆಸ್ಪತ್ರೆ ಮಾದರಿಯ ಸೌಕರ್ಯ ಕಲ್ಪಿಸಿಕೊಡಲಿದ್ದು, ಕೊವಿಡ್ ರೋಗಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಕೊವಿಡ್ ಪೀಡತರಿಗೆ ಹೋಂ ಐಸೊಲೇಷನ್ ಬದಲಿಗೆ ಕೊವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಆ ಮೂಲಕ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಜಿಲ್ಲಾಡಳಿತ ಸಜ್ಜಾಗಿದೆ. ಜಿಲ್ಲಾಡಳಿತದ ಈ ಯೋಜನೆ ಎಷ್ಟರ ಮಟ್ಟಿಗೆ ಯಶಸ್ಸು ಕಾಣಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:

‘ನಾಲ್ವರು ಆಪ್ತರನ್ನು ಕಳೆದುಕೊಂಡೆ..ನನ್ನ ಹಳ್ಳಿಯಲ್ಲಿ ಸಾಲುಸಾಲು ಹೆಣಗಳು ಬೀಳುತ್ತಿವೆ’-ಕೊರೊನಾ ಭೀಕರತೆ ಬಿಚ್ಚಿಟ್ಟ ನಾಗತಿಹಳ್ಳಿ ಚಂದ್ರಶೇಖರ್​

ಚಿತ್ರದುರ್ಗದಲ್ಲಿ ನೂರು‌ ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಸಿದ್ಧತೆ; ಜಿಲ್ಲಾಡಳಿತದ ಜತೆ ಕೈ ಜೊಡಿಸಿದ ವೇದಾಂತ ಮೈನ್ಸ್ ಸಂಸ್ಥೆ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ