ಚಿತ್ರದುರ್ಗ ಆಸ್ಪತ್ರೆಗಳಲ್ಲಿ ಇನ್ನು ಬಗೆಹರಿದಿಲ್ಲ ಬೆಡ್ ಸಮಸ್ಯೆ; ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಜನರ ಆಕ್ರೋಶ

ಚಿತ್ರದುರ್ಗದಲ್ಲಿ ಸರ್ಕಾರಿ‌ ಕೊವಿಡ್‌ ಆಸ್ಪತ್ರೆ ಸೇರಿ ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಫುಲ್ ಆಗಿವೆ. ಹೀಗಾಗಿ, ಸೋಂಕಿತರು ಬೆಡ್​ಗಾಗಿ‌ ಆಸ್ಪತ್ರೆಗಳಿಗೆ ಅಲೆದರೂ ಸಕಾಲಕ್ಕೆ ಬೆಡ್ ಸಿಗುತ್ತಿಲ್ಲ. ಬೆಡ್ ಸಿಕ್ಕರೂ ಸಮರ್ಪಕ ಆಕ್ಸಿಜನ್ ಮತ್ತು‌ ಚಿಕಿತ್ಸೆ ಸಿಗದೆ ಹೈರಾಣಾಗುವ ದುಸ್ಥಿತಿ‌ ಎದುರಾಗಿದೆ.

ಚಿತ್ರದುರ್ಗ ಆಸ್ಪತ್ರೆಗಳಲ್ಲಿ ಇನ್ನು ಬಗೆಹರಿದಿಲ್ಲ ಬೆಡ್ ಸಮಸ್ಯೆ; ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಜನರ ಆಕ್ರೋಶ
ಪ್ರಾತಿನಿಧಿಕ ಚಿತ್ರ
Follow us
preethi shettigar
|

Updated on: May 17, 2021 | 5:40 PM

ಚಿತ್ರದುರ್ಗ : ಕೊರೊನಾ ಎರಡನೇ ಅಲೆ ದೇಶದೆಲ್ಲೇಡೆ ತೀವ್ರವಾಗಿ ಹಬ್ಬುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇನ್ನು ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಸಿನಿಮಾ ನಟ-ನಟಿಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದು, ಸೋಂಕಿತರ ನೆರವಿಗೆ ನಿಂತಿದ್ದಾರೆ. ಆದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಕೊವಿಡ್ ಪೀಡತರಿಗೆ ಬೆಡ್ ಸಿಗದ‌‌ ದುಸ್ಥಿತಿ ನಿರ್ಮಾಣವಾಗಿದೆ. ಕೊವಿಡ್ ಪೀಡಿತರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕಾದ ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗದಲ್ಲಿ ಸರ್ಕಾರಿ‌ ಕೊವಿಡ್‌ ಆಸ್ಪತ್ರೆ ಸೇರಿ ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಫುಲ್ ಆಗಿವೆ. ಹೀಗಾಗಿ, ಸೋಂಕಿತರು ಬೆಡ್​ಗಾಗಿ‌ ಆಸ್ಪತ್ರೆಗಳಿಗೆ ಅಲೆದರೂ ಸಕಾಲಕ್ಕೆ ಬೆಡ್ ಸಿಗುತ್ತಿಲ್ಲ. ಬೆಡ್ ಸಿಕ್ಕರೂ ಸಮರ್ಪಕ ಆಕ್ಸಿಜನ್ ಮತ್ತು‌ ಚಿಕಿತ್ಸೆ ಸಿಗದೆ ಹೈರಾಣಾಗುವ ದುಸ್ಥಿತಿ‌ ಎದುರಾಗಿದೆ. ಹೀಗಿದ್ದರೂ ಜಿಲ್ಲಾಡಳಿತ ಮತ್ತು ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸ್ಥಳೀಯರಾದ ಮಿಥುನ್ ತಿಳಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ‌ ಬಿ.ಶ್ರೀರಾಮುಲು‌ ಅವರನ್ನು ಕೇಳಿದರೆ ಸರ್ಕಾರಿ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಬೆಡ್ ಫುಲ್ಲಾದಾಗ ಖಾಸಗಿ ಆಸ್ಪತ್ರೆಗಳಿಗೆ ರೆಫರ್‌‌ ಮಾಡುತ್ತೇವೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 50ರಷ್ಟು‌ ಬೆಡ್ ಸರ್ಕಾರಿ ಕೋಟಾದಡಿ ಮೀಸಲಿರಿಸಿರುತ್ತಾರೆ.‌ ಸದ್ಯ ನಾವು ಆಕ್ಸಿಜನ್ ಪೂರೈಕೆಗಾಗಿ ಒದ್ದಾಡುತ್ತಿದ್ದೇವೆ. ಜಿಲ್ಲಾಸ್ಪತ್ರೆ ಆವರಣದಲ್ಲಿ ವೇದಾಂತ ಮೈನ್ಸ್ ಸಂಸ್ಥೆ ನೂರು ಬೆಡ್​ನ ಕೊವಿಡ್ ಆಸ್ಪತ್ರೆ ನಿರ್ಮಿಸಿ ಕೊಡಲಿದೆ. ಕೆಲವೇ ದಿನದಲ್ಲಿ ಎಲ್ಲಾ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ‌‌ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಗೆ ಬೆಡ್ ಸಿಗದ ದುಸ್ಥಿತಿ‌ ನಿರ್ಮಾಣ ಆಗಿದೆ. ಹೀಗಾಗಿ, ಜನ ರೊಚ್ಚಿಗೇಳುವ ಮುನ್ನ ಜಿಲ್ಲಾಡಳಿತ ಮತ್ತು‌ ಆರೋಗ್ಯ ಇಲಾಖೆ ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಿ ಜನರ ಪ್ರಾಣ ಉಳಿಸುವ ಕೆಲಸ‌ ಮಾಡಬೇಕಿದೆ.

ಇದನ್ನೂ ಓದಿ:

ಚಿಕ್ಕಬಳ್ಳಾಪುರ ಸೋಂಕಿತರಿಗೆ ಬೆಡ್ ಮೀಸಲು ವಿಚಾರ; ಸಂಕಷ್ಟದ ಸಮಯದಲ್ಲಿ ಈ ಕ್ರಮ ಅಮಾನವೀಯ: ಕೃಷ್ಣ ಭೈರೇಗೌಡ

30 ಬೆಡ್​ಗಳಿರುವ ಆಸ್ಪತ್ರೆಗಳಲ್ಲಿ ಬೆಡ್​ಗಳು ಸಿಗಲಿದೆ, ಕೆಲವೇ ದಿನಗಳಲ್ಲಿ ಬೆಡ್ ಸಮಸ್ಯೆ ಇಲ್ಲದಂತೆ ಕ್ರಮ ಕೈಗೊಳ್ಳುತ್ತೇವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ