ಚಿತ್ರದುರ್ಗ: ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ 20ಕ್ಕೂ ಹೆಚ್ಚು ಜನ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಎಪಿಎಂಸಿ ಬಳಿ ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವಂತಹ ಘಟನೆ ನಡೆದಿದೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅಸ್ವಸ್ಥರನ್ನು ಹೊಸದುರ್ಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಚಿತ್ರದುರ್ಗ: ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ 20ಕ್ಕೂ ಹೆಚ್ಚು ಜನ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಚಿತ್ರದುರ್ಗ: ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ 20ಕ್ಕೂ ಹೆಚ್ಚು ಜನ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 09, 2024 | 8:18 PM

ಚಿತ್ರದುರ್ಗ, ಸೆಪ್ಟೆಂಬರ್​ 09: ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ (chlorine gas leak) 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಹೊಸದುರ್ಗದ ಎಪಿಎಂಸಿ ಬಳಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅಸ್ವಸ್ಥರನ್ನು ಹೊಸದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು: ಈಜಿ ದಡ ಸೇರಿದ ಚಾಲಕ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಿಮಂಚೇನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಕಾರು ಉರುಳಿ ಬಿದ್ದಿರುವಂತಹ ಘಟನೆ ನಡೆದಿದೆ. ಪವಾಡಸದೃಶ ರೀತಿಯಲ್ಲಿ ಕಾರು ಚಾಲಕ ಪಾರಾಗಿದ್ದಾರೆ.

ಇದನ್ನೂ ಓದಿ: ಮಂಗಳೂರು: ಹಾಸ್ಟೆಲ್​ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ

ಸನ್ ರೂಪ್ ಮೂಲಕ ಕಾರಿನ ಮೇಲೆ ಹತ್ತಿ ಹೊರಬಂದು ಈಜಿ ಕಾರು ಚಾಲಕ ದಡ ಸೇರಿದ್ದಾರೆ. ದೇವನಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಾಸ್ಟೆಲ್​ಗೆ ಭದ್ರತೆ ಇಲ್ಲ: ಪ್ರಾಂಶುಪಾಲ ವಿರುದ್ದ ಪ್ರತಿಭಟನೆಗೆ ಇಳಿದ ವಿದ್ಯಾರ್ಥಿನಿಯರ

ದಾವಣಗೆರೆ: ಮೊರಾರ್ಜಿ ದೇಸಾಯಿ ಹಾಸ್ಟೆಲ್​ನಲ್ಲಿ ಭದ್ರತೆ ಇಲ್ಲ ಎಂದು ಆರೋಪಿಸಿ ಪ್ರಾಂಶುಪಾಲ ವಿರುದ್ದ ವಿದ್ಯಾರ್ಥಿನಿಯರು ಪ್ರತಿಭಟನೆಗೆ ಇಳಿದಿರುವಂತಹ ಘಟನೆ ನಡೆದಿದೆ. ಮಾಯಕೊಂಡ ಮೊರಾರ್ಜಿ ದೇಸಾಯಿ ಹಾಸ್ಟೆಲ್​​ ವಿದ್ಯಾರ್ಥಿನಿಯರಿಂದ ಪ್ರತಿಭಟನೆ ಮಾಡಲಾಗಿದೆ.

ತರಗತಿ ಬಹಿಷ್ಕರಿಸಿ ಪ್ರಾಂಶುಪಾಲರ ವಿರುದ್ಧ ಪ್ರತಿಭಟನೆಗಿಳಿದ ವಿದ್ಯಾರ್ಥಿನಿಯರು, ಅವ್ಯವಸ್ಥೆ ಬಗ್ಗೆ ‌ಸಾಕಷ್ಟು ಬಾರಿ ಪ್ರಾಂಶುಪಾಲರ ಗಮನಕ್ಕೆ ತಂದರೂ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ರೈತರಿಗೆ ತಪ್ಪದ ಗೋಳು; ನೂರಾರು ಎಕರೆಯಲ್ಲಿ ಬೆಳೆದ ಶೇಂಗಾ ಬೆಳೆಗೆ ಸುಳಿರೋಗ ಕಾಟ

ರಾತ್ರಿ ಹೊತ್ತಿನಲ್ಲಿ ಹಾಸ್ಟೆಲ್​ಗೆ ಭದ್ರತೆ ಇಲ್ಲ. ಭಯದಿಂದ ನಿದ್ರೆ ಮಾಡಲು ಆಗುತ್ತಿಲ್ಲ. ನಮ್ಮ ಸಮಸ್ಯೆಯನ್ನು ಯಾರ ಹತ್ತಿರ ಕೇಳಬೇಕು ಎಂದು ಪ್ರಶ್ನಿಸಿದ್ದಾರೆ. ಮಕ್ಕಳಿಗೆ ರಕ್ಷಣೆ ಇಲ್ಲ ಎಂದು ಶಾಲಾ ಸಿಬ್ಬಂದಿ ವಿರುದ್ಧ ಪೋಷಕರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ