ರೆಮಲ್ ಚಂಡಮಾರುತ ಎಫೆಕ್ಟ್: ವಿಮಾನಯಾನ ಸೇವೆ ವ್ಯತ್ಯಯ, ಊಟ, ನೀರಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು

ಮೈಸೂರು, ದಾವಣಗೆರೆ ಸೇರಿ ವಿವಿಧೆಡೆಯಿಂದ ಅಂಡಮಾನ್ ನಿಕೋಬಾರ್​ಗೆ ಕನ್ನಡಿಗರು ತೆರಳಿದ್ದಾರೆ. ಆದರೆ ರೆಮಲ್ ಚಂಡಮಾರುತ ಹಿನ್ನೆಲೆ ವಿಸ್ತಾರ ವಿಮಾನ ಯಾನ ಸೇವೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಬೆಳಗ್ಗೆ 11ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 180 ಜನ ಸಂಜೆಯಾದರೂ ವಿಮಾನವಿಲ್ಲದೇ ಕಂಗಾಲಾಗಿದ್ದಾರೆ. ಆಹಾರ, ನೀರು ಸಹ ಸಿಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ರೆಮಲ್ ಚಂಡಮಾರುತ ಎಫೆಕ್ಟ್: ವಿಮಾನಯಾನ ಸೇವೆ ವ್ಯತ್ಯಯ, ಊಟ, ನೀರಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು
ರೆಮಲ್ ಚಂಡಮಾರುತ ಎಫೆಕ್ಟ್: ವಿಮಾನಯಾನ ಸೇವೆ ವ್ಯತ್ಯಯ, ಊಟ, ನೀರಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು
Edited By:

Updated on: May 27, 2024 | 7:33 PM

ಚಿತ್ರದುರ್ಗ, ಮೇ 27: ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳವನ್ನ ಕಾಡಿದ್ದ ರೆಮಲ್ (Remal)  ಚಂಡಮಾರುತ ಭೂಸ್ಪರ್ಶ ಮಾಡಿದೆ. ಮಧ್ಯರಾತ್ರಿ 12.30ರ ಸುಮಾರಿಗೆ ಚಂಡಮಾರುತ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದೆ. ರೆಮಲ್ ಚಂಡಮಾರುತ ಎಫೆಕ್ಟ್ ಹಿನ್ನೆಲೆ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಅಂಡಮಾನ್ ನಿಕೋಬಾರ್​ನಲ್ಲಿ ಸಿಲುಕಿದ ಕನ್ನಡಿಗರಿಗೆ (Kannadigas) ಸಂಕಷ್ಟ ಎದುರಾಗಿದೆ.

ಮೈಸೂರು, ದಾವಣಗೆರೆ ಸೇರಿ ವಿವಿಧೆಡೆಯಿಂದ ಅಂಡಮಾನ್ ನಿಕೋಬಾರ್​ಗೆ ಕನ್ನಡಿಗರು ತೆರಳಿದ್ದಾರೆ. ಆದರೆ ರೆಮಲ್ ಚಂಡಮಾರುತ ಹಿನ್ನೆಲೆ ವಿಸ್ತಾರ ವಿಮಾನ ಯಾನ ಸೇವೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಬೆಳಗ್ಗೆ 11ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 180 ಜನ ಸಂಜೆಯಾದರೂ ವಿಮಾನವಿಲ್ಲದೇ ಕಂಗಾಲಾಗಿದ್ದಾರೆ. ಆಹಾರ, ನೀರು ಸಹ ಸಿಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: ಟಿವಿ9 ವರದಿ ಬಳಿಕ ಎಚ್ಚೆತ್ತ ಬಿಬಿಎಂಪಿ: ರಸ್ತೆಗುಂಡಿ ಮುಚ್ಚಲು ಡೆಡ್‌ಲೈನ್‌, ಟಾಸ್ಕ್​ ಪೋರ್ಸ್ ರಚನೆ

ಹವಾಮಾನ ವೈಪರೀತ್ಯದಿಂದ ಚೆನ್ನೈಗೆ ವಿಮಾನ ವಾಪಸ್​ ಹಿನ್ನೆಲೆ ಸಂಕಷ್ಟ ಎದುರಾಗಿದೆ. ವಿಮಾನಗಳ ವ್ಯತ್ಯಯದಿಂದ ಅಂಡಮಾನ್ ನಿಕೊಬಾರ್ ಪೋರ್ಟ್​​ ಬ್ಲೇರ್​ನಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏರ್ ಪೋರ್ಟ್ ಸಿಬ್ಬಂದಿ ಜತೆ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು ವಾಗ್ವಾದ ಮಾಡಿದ್ದಾರೆ. ಟಿವಿ9ಗೆ ಮಾತನಾಡಿದ ಮೈಸೂರು ಮೂಲದ ನಿವೃತ್ತ ಪ್ರಾಂಶುಪಾಲರು ಪರಮೇಶ್ ಎಂಬುವವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯ ಹಸ್ತಕ್ಕೆ ಮನವಿ ಮಾಡಿದ್ದಾರೆ.

ರೆಮಲ್ ಚಂಡಮಾರುತದ ಎಫೆಕ್ಟ್‌ ಕರ್ನಾಟಕದ ಮೇಲೂ ಆಗಿದೆ. ಸೈಕ್ಲೋನ್‌ನಿಂದ ಪೂರ್ವ ಮುಂಗಾರು ಮಳೆ ಕಡಿಮೆಯಾಗಿದೆ. ಆದರೆ ಮೇ 30ರ ಬಳಿಕ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತೆ ಅಂತ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಸೆಕ್ಯೂರಿಟಿ ಕಂಪನಿಗೆ ಶಿಕ್ಷಕರ ನೇಮಕಾತಿ ಟೆಂಡರ್! ಸುರೇಶ್​ ಕುಮಾರ್​ ಆಕ್ರೋಶ

ರೆಮಲ್ ಚಂಡಮಾರುತದಿಂದ ಅರಬ್ಬೀ ಸಮುದ್ರದಲ್ಲಿ 35 ರಿಂದ 40 ಕಿಲೋಮೀಟರ್‌ಗೂ ಅಧಿಕ ವೇಗದಲ್ಲಿ ಗಾಳಿ ಬೀಸುತ್ತಿದೆ. ಹೀಗಾಗಿ ಜಿಲ್ಲಾಡಳಿತ ಸಮುದ್ರಕ್ಕಿಳಿಯದಂತೆ ನಿಷೇಧ ಹೇರಿದೆ. ಆದರೆ ಎಚ್ಚರಿಕೆ ನಾಮಫಲಕವಾಗಲಿ, ಸಿಬ್ಬಂದಿ ಗಸ್ತು ವ್ಯವಸ್ಥೆ ಇಲ್ಲದ್ದರಿಂದ ಪ್ರವಾಸಿಗರು ಸಮುದ್ರಕ್ಕಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us