ಜನಪ್ರತಿನಿಧಿಗಳ ಬೇಜವಬ್ದಾರಿತನದಿಂದ ಚಿತ್ರದುರ್ಗ ಜಿಲ್ಲೆಗೆ ಕೈತಪ್ಪಿದ ಆಕ್ಸಿಜನ್ ಪ್ಲಾಂಟ್; ಸರ್ಕಾರದ ವಿರುದ್ಧ ಜನರ ಆಕ್ರೋಶ
ಜಿಲ್ಲೆಗೆ ಪ್ರತಿದಿನ ಕನಿಷ್ಠ 7kl ಆಕ್ಸಿಜನ್ ಅಗತ್ಯ ಇದ್ದು ಈಗ 3kl ಆಕ್ಸಿಜನ್ ಮಾತ್ರ ಪೂರೈಕೆ ಆಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರೇ ಈಗಾಗಲೇ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಜತೆ ಮಾತನಾಡಿದ್ದು ಸಮರ್ಪಕ ಆಕ್ಸಿಜನ್ ಪೂರೈಕೆಗೆ ಮನವಿ ಮಾಡಿದ್ದೇನೆ. ಸಿಎಂ ಸಮರ್ಪಕ ಆಕ್ಸಿಜನ್ ಪೂರೈಸುವ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಚಿತ್ರದುರ್ಗ: ಕೊರೊನಾ ಎರಡನೇ ಅಲೆ ದೇಶದಲ್ಲಿ ತೀವ್ರವಾಗಿ ಪ್ರಸರಣವಾಗುತ್ತಿದ್ದು, ಸಾವಿನ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಹೀಗಿರುವಾಗಲೇ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಉಂಟಾಗಿದ್ದು, ವೇಂಟಿಲೇಟರ್ ಸಮಸ್ಯೆ ಕೂಡ ಎದುರಾಗಿದೆ. ಈ ನಡುವೆ ಚಿತ್ರದುರ್ಗ ಜಿಲ್ಲೆಯಲ್ಲಿ ಕೂಡ ಕೊರೊನಾ ಹೆಚ್ಚಾಗಿದ್ದು, ಆಕ್ಸಿಜನ್ ಉತ್ಪಾದನಾ ಘಟಕ ಕೈತಪ್ಪಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಂಕಿ ಅಂಶದ ಪ್ರಕಾರ ಸೋಂಕಿತರ ಸಂಖ್ಯೆ 19,700 ದಾಟಿದೆ. ಆ ಪೈಕಿ 2250 ಸದ್ಯ ಸಕ್ರಿಯ ಪ್ರಕರಣಗಳಿವೆ. ಈಗಾಗಲೇ 101 ಜನ ಸೋಂಕಿಗೆ ಬಲಿ ಆಗಿದ್ದಾರೆ. ಹೀಗಾಗಿ, ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್ ಸಿಗದ ಸ್ಥಿತಿ ನಿರ್ಮಾಣ ಆಗಿದೆ. ಅಧಿಕಾರಿಗಳು ಸೋಂಕಿತರು ಮತ್ತು ಸಾವಿನ ಸಂಖ್ಯೆಯನ್ನು ಮರೆ ಮಾಚುತ್ತಿದ್ದಾರೆ. ಪರಿಣಾಮ ಚಿತ್ರದುರ್ಗ ಸೇಫ್ ಎಂಬಂತಾಗಿದ್ದು, ಕೇಂದ್ರ ಸರ್ಕಾರ ರಾಜ್ಯಕ್ಕೆ 28 ಆಕ್ಸಿಜನ್ ಉತ್ಪಾದನಾ ಘಟಕ ಮಂಜೂರು ಮಾಡಿದ್ದು ಚಿತ್ರದುರ್ಗಕ್ಕೆ ಆಕ್ಸಿಜನ್ ಪ್ಲಾಂಟ್ ಕೈತಪ್ಪಿದೆ. ಅಧಿಕಾರಿಗಳ ಸುಳ್ಳು ಮಾಹಿತಿ, ಜನಪ್ರತಿನಿಧಿಗಳ ಬೇಜವಬ್ದಾರಿತನದಿಂದಾಗಿ ಆಕ್ಸಿಜನ್ ಪ್ಲಾಂಟ್ ಕೈತಪ್ಪಿದೆ ಎಂದು ವಕೀಲರಾದ ಪ್ರಭಾಕರ್ ಆರೋಪ ಮಾಡಿದ್ದಾರೆ.
ಜಿಲ್ಲೆಗೆ ಪ್ರತಿದಿನ ಕನಿಷ್ಠ 7kl ಆಕ್ಸಿಜನ್ ಅಗತ್ಯ ಇದ್ದು ಈಗ 3kl ಆಕ್ಸಿಜನ್ ಮಾತ್ರ ಪೂರೈಕೆ ಆ ಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರೇ ಈಗಾಗಲೇ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಜತೆ ಮಾತನಾಡಿದ್ದು ಸಮರ್ಪಕ ಆಕ್ಸಿಜನ್ ಪೂರೈಕೆಗೆ ಮನವಿ ಮಾಡಿದ್ದೇನೆ. ಸಿಎಂ ಸಮರ್ಪಕ ಆಕ್ಸಿಜನ್ ಪೂರೈಸುವ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಇದೀಗ ಕೇಂದ್ರ ಸರ್ಕಾರ ಮಂಜೂರು ಮಾಡಿದ ಆಕ್ಸಿಜನ್ ಘಟಕ ಜಿಲ್ಲೆಯ ಕೈತಪ್ಪಿದೆ ಎನ್ನುವ ವಿಚಾರವಾಗಿ ಸಚಿವ ಶ್ರೀರಾಮುಲು ಅವರನ್ನು ಕೇಳಿದರೆ ನಾವು ಸಹ ಆಕ್ಸಿಜನ್ ಉತ್ಪಾದನಾ ಘಟಕ ಕೇಳಿದ್ದೆವು. ಲೀಸ್ಟ್ನಲ್ಲಿ ಚಿತ್ರದುರ್ಗ ಕೈಬಿಡಲಾಗಿದೆ. ಈ ಬಗ್ಗೆ ನಾನು ಆಯುಕ್ತರ ಜತೆಗೆ ಮಾತನಾಡಿದ್ದೇನೆ . ಸೆಕೆಂಡ್ ಲಿಸ್ಟ್ನಲ್ಲಿ ಆಕ್ಸಿಜನ್ ಘಟಕ ಮಂಜೂರು ಮಾಡುವ ಭರಸವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲೂ ಕೊವಿಡ್ ಪರಿಸ್ಥಿತಿ ನಿಯಂತ್ರಣ ತಪ್ಪಿದೆ. ಬೆಡ್, ಆಕ್ಸಿಜನ್ ಸಮಸ್ಯೆ ಹೇಳತೀರದಾಗಿದೆ. ಹೀಗಾಗಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಇನ್ನಾದರೂ ಈ ಬಗ್ಗೆ ಗಂಭೀರವಾಗಿ ವರ್ತಿಸಿ ಕೊವಿಡ್ ಪರಿಸ್ಥಿತಿ ನಿರ್ವಹಿಸುವ ಮೂಲಕ ಜನರ ಪ್ರಾಣ ಉಳಿಸಬೇಕಿದೆ ಎನ್ನುವುದು ಸಾರ್ವಜನಿಕರ ಒತ್ತಾಯ.
ಇದನ್ನೂ ಓದಿ:
ಬೆಂಗಳೂರಲ್ಲಿ ಆಕ್ಸಿಜನ್ ಪ್ಲಾಂಟ್ ಸೋರಿಕೆ; ಪೊಲೀಸರು ಹಾಗೂ ಸೋನುಸೂದ್ ಟ್ರಸ್ಟ್ ಸದಸ್ಯರ ಸಮಯಪ್ರಜ್ಞೆಯಿಂದ ನಿಂತ ಅವಘಡ
ಬೆಂಗಳೂರಿಗರ ಸಹಾಯಕ್ಕೆ ನಿಂತ ಸೋನು ಸೂದ್; ಈ ಸಂಖ್ಯೆಗೆ ಸಂಪರ್ಕಿಸಿದರೆ ಮನೆಬಾಗಿಲಿಗೆ ಬರುತ್ತೆ ಆಕ್ಸಿಜನ್ ಸಿಲಿಂಡರ್